ನವದೆಹಲಿ, ಜ.30- ಮಹಾತ್ಮಗಾಂಧಿ ಅವರ 74ನೆ ಪುಣ್ಯತಿಥಿಯ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಬಾಪು ಅವರ ಪುಣ್ಯತಿಥಿಯಂದು ಅವರನ್ನು ಸ್ಮರಿಸಿಕೊಳ್ಳುತ್ತಿದ್ದೇನೆ.
ಅವರ ಉನ್ನತ ಆದರ್ಶಗಳನ್ನು ಇನ್ನಷ್ಟು ಜನಪ್ರಿಯಗೊಳಿಸುವುದು ನಮ್ಮೆಲ್ಲರ ಸಾಮೂಹಿಕ ಬಾಧ್ಯತೆ ಆಗಿದೆ. ಹುತಾತ್ಮರ ದಿನವಾದ ಇಂದು ನಮ್ಮ ದೇಶದ ರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದ ಎಲ್ಲ ಮಹಾನ್ ವ್ಯಕ್ತಿಗಳಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಅವರ ಸೇವೆ ಮತ್ತು ಶೌರ್ಯ ಚಿರಸ್ಮರಣೀಯವಾಗಿರುತ್ತದೆ ಎಂದು ಮೋದಿ ಟ್ವಿಟ್ ಮಾಡಿದ್ದಾರೆ.
ಗಾಂಧೀಜಿ 1948ರಲ್ಲಿ ಈ ದಿನ ನಾಥೂರಾಂ ಗೋಡ್ಸೆಯ ಗುಂಡಿಗೆ ಬಲಿಯಾದರು. ರಾಷ್ಟ್ರಪಿತ ಗಾಂಧೀಜಿಯ ಪುಣ್ಯತಿಥಿಯ ದಿನವನ್ನು ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ.
