Home ಇದೀಗ ಬಂದ ಸುದ್ದಿ 8 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ : ತನಿಖೆ ಚುರುಕು

8 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ : ತನಿಖೆ ಚುರುಕು

0
8 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ : ತನಿಖೆ ಚುರುಕು

ಬೆಂಗಳೂರು,ಫೆ.3- ಎಂಟು ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾದ ಬಗ್ಗೆ ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ವಿದ್ಯಾರ್ಥಿನಿ ಹೇಳಿಕೆ ಹಾಗೂ ಈಕೆ ಚಿಕ್ಕಮನ ಹೇಳಿಕೆ ವಿಭಿನ್ನವಾಗಿರುವುದರಿಂದ ಪೊಲೀಸರು ವಿವಿಧ ಆಯಾಮಗಳಲ್ಲಿ ಮಾಹಿತಿಗಳನ್ನು ಕಲೆಹಾಕುತ್ತಿದ್ದು, ತನಿಖೆ ಪೂರ್ಣಗೊಂಡ ನಂತರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆಯೇ ಅಥವಾ ಲೈಗಿಂಕ ದೌರ್ಜನ್ಯ ನಡೆಸಲಾಗಿದೆಯೇ ಎಂಬುದು ಗೊತ್ತಾಗಲಿದೆ.

ಮೂವರು ಆರೋಪಿಗಳು ಈ ವಿದ್ಯಾರ್ಥಿನಿಗೆ ಕೇಕ್ ಕೊಡಿಸಿ ನಂತರ ಪುಸಲಾಯಿಸಿ ಶಾಲೆಯೊಂದರ ಆವರಣಕ್ಕೆ ಕರೆದೊಯ್ದು ಚಾಕು ತೋರಿಸಿ ಬೆದರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.

ಬಾಲಕಿಗೆ ಕಳೆದೆರಡು ದಿನಗಳಿಂದ ಅತಿಯಾದ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಆಕೆಯ ಚಿಕ್ಕಮ ವಿಚಾರಿಸಿದಾಗ ತನ್ನ ಮೇಲೆ ಮೂವರು ಅತ್ಯಾಚಾರ ನಡೆಸಿದ್ದಾರೆಂದು ಹೇಳಿದ್ದಾಳೆ.
ಇದರಿಂದ ಹೆದರಿದ ಪೋಷಕರು ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಈ ಬಗ್ಗೆ ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಾಲಕಿಯಿಂದ ಹಾಗೂ ಆಕೆಯ ಮನೆಯವರಿಂದ ಹೇಳಿಕೆಗಳನ್ನು ಪಡೆದು ತನಿಖೆ ಮುಂದುವರೆಸಿದ್ದಾರೆ.
ಈ ಘಟನೆಯಿಂದ ಸ್ಥಳೀಯ ಗ್ರಾಮಸ್ಥರು ಆತಂಕಗೊಂಡಿದ್ದಾರೆ.