ನರ್ಸ್ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ

Social Share

ಭೋಪಾಲï,ಅ.23- ಛತ್ತೀಸ್‍ಗಢದ ಆರೋಗ್ಯ ಕೇಂದ್ರದಲ್ಲೇ ನರ್ಸ್ ಒಬ್ಬರ ಮೇಲೆ ಗ್ಯಾಂಗ್ ರೇಪ್ ನಡೆದಿದೆ.
ಅಲ್ಲಿನ ಆರೋಗ್ಯ ಕೇಂದ್ರದಲ್ಲಿ ನರ್ಸ್ ಒಬ್ಬರನ್ನು ಕಟ್ಟಿಹಾಕಿ, ನಾಲ್ವರು ಗ್ಯಾಂಗ್‍ರೇಪ್ ಮಾಡಿದ್ದಾರೆ. ಅತ್ಯಾಚಾರಿಗಳಲ್ಲಿ ಒಬ್ಬ ಅಪ್ರಾಪ್ತನಾಗಿರುವುದು ಉಲ್ಲೇಖಾರ್ಹ.

ನರ್ಸ್ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ 17 ವರ್ಷದ ಬಾಲಕ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ನಾಲ್ಕನೇ ಆರೋಪಿ ಪರಾರಿಯಾಗಿದ್ದಾನೆ. ಆತನ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನನ್ನ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ನಡೆಸಿದ ಆರೋಪಿಗಳು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವ ಬೆದರಿಕೆ ಹಾಕಿದ್ದರು ಎಂದು ನರ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ.

ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನ

ಮಹೇಂದ್ರಗಢ ಜಿಲ್ಲೆಯ ಚಿಪ್ಚಿಪಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಆರೋಗ್ಯ ಕೇಂದ್ರದಲ್ಲಿ ಒಬ್ಬಂಟಿಯಾಗಿ ಕೆಲಸ ಮಾಡುತ್ತಿದ್ದ ಸಂತ್ರಸ್ತೆಯನ್ನು ಕಟ್ಟಿ ಹಾಕಿದ ಆರೋಪಿಗಳು ಆಕೆ ಬಾಯಿಗೆ ಬಟ್ಟೆ ತುರುಕಿ ನಂತರ ಅತ್ಯಾಚಾರ ನಡೆಸಲಾಗಿದೆ.

ಈ ಕುರಿತಂತೆ ನರ್ಸ್ ನೀಡಿದ ದೂರಿನ ಆಧಾರದ ಮೇರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ನಿಮೇಶ್ ಬರಯ್ಯ ತಿಳಿಸಿದ್ದಾರೆ.

ಘಟನೆಗೆ ತೀವ್ರ ಖಂಡನೆ ವ್ಯಕ್ತವಾಗಿದ್ದು, ಭೂಪೇಶ್ ಭಾಗೇಲ್ ನೇತೃತ್ವದ ಛತ್ತೀಸ್‍ಗಢ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಷ್ಟ ಹೇಳಿಕೊಳ್ಳಲು ಬಂದ ಮಹಿಳೆಯ ಕೆನ್ನೆಗೆ ಬಾರಿಸಿದ ಸಚಿವ ಸೋಮಣ್ಣ

ನಮಗೆ ರಕ್ಷಣೆ ಬೇಕು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ನಾವು ಕೆಲಸ ಮಾಡುವುದಿಲ್ಲ ಎಂದು ಜಿಲ್ಲೆಯ ಆರೋಗ್ಯ ಕೇಂದ್ರದ ಮುಖ್ಯ ಆರೋಗ್ಯಾಧಿಕಾರಿ ಪ್ರತಿಮಾ ಸಿಂಗ್ ತಿಳಿಸಿದ್ದಾರೆ.

Articles You Might Like

Share This Article