ಬೆಂಗಳೂರು,ಸೆ.16- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಈ ಬಾರಿ ಅದ್ದೂರಿ ಗೌರಿ ಗಣೇಶ ಉತ್ಸವ ನಡೆಸಲು ತೀರ್ಮಾನಿಸಿದೆ. ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅಭೂತಪೂರ್ವ ಗೆಲವು ಲಭಿಸಿದ ಹುಮ್ಮಸ್ಸಿನಲ್ಲಿರುವ ಸಂಘದ ಪದಾಧಿಕಾರಿಗಳು ಇದೇ 19 ರಂದು ಅದ್ಧೂರಿ ಗಣೇಶೋತ್ಸವ ಆಚರಿಸಲು ತೀರ್ಮಾನಿಸಿದ್ದಾರೆ.
ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ನೌಕರರ ಭವನದಲ್ಲಿ ನಡೆಯಲಿರುವ ಗೌರಿ ಗಣೇಶ ಉತ್ಸವವನ್ನು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್‍ಸಿಂಗ್ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಉದ್ಘಾಟಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಅಮೃತ್‍ರಾಜ್ ತಿಳಿಸಿದ್ದಾರೆ.
ನಿಫಾ ವೈರಸ್ ಕುರಿತು ‘ಡೆಡ್ಲಿ’ ಮಾಹಿತಿ ಬಿಚ್ಚಿಟ್ಟ ಐಸಿಎಂಆರ್ ಮುಖ್ಯಸ್ಥ
19 ರಂದು ಬೆಳಿಗ್ಗೆ ಎಂಟು ಗಂಟೆಗೆ ವಿನಾಯಕನ ಪ್ರತಿಷ್ಠಾಪನೆ, ಮಹಾ ಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗವಾಗಲಿದೆ. 9.30ಕ್ಕೆ ಮಹಿಳಾ ಅಧಿಕಾರಿ ಮತ್ತು ನೌಕರರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ.
ಮಧ್ಯಾಹ್ನ ಒಂದು ಗಂಟೆಗೆ ಪ್ರಸಾದ ವಿನಿಯೋಗ, ಸಂಜೆ 3.30ಕ್ಕೆ ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ಸಂಜೆ 6 ಗಂಟೆಗೆ ವಿನಾಯಕನಿಗೆ ಮಹಾಮಂಗಳಾರತಿ ನೆರವೇರಿಸಿ ಅದ್ದೂರಿಯಾಗಿ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
#GauriGaneshaUtsav, #BBMP,
.