Thursday, January 30, 2025
Homeರಾಜ್ಯಬೆಂಗಳೂರು ಏರ್‌ ಶೋಗೆ ಭರ್ಜರಿ ಸಿದ್ಧತೆ

ಬೆಂಗಳೂರು ಏರ್‌ ಶೋಗೆ ಭರ್ಜರಿ ಸಿದ್ಧತೆ

ಬೆಂಗಳೂರು,ಜ.28- ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾಗೆ ಸಿದ್ಧತೆ ಅಂತಿಮ ಹಂತ ತಲುಪಿದೆ. ಫೆಬ್ರವರಿ 10 ರಿಂದ 14 ರವರಗೆ ನಡೆಯಲಿರು ಆಂತರಾಷ್ಟೀಯ ವೈಮಾನಿಕ ಪ್ರದರ್ಶನಕ್ಕೆ 15ನೇ ಆವೃತ್ತಿಯ ಏರ್‌ ಶೋ ಇದಾಗಿದ್ದು, ಬರುವವರಿಗೆ ಸಂಚಾರ ದಟ್ಟಣೆ ಸಮಸ್ಯೆ ಕಾಡದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು,200ಕ್ಕೂ ಹೆಚ್ಚು ಬಿಎಂಟಿಸಿ ಬಸ್‌‍ಗಳನ್ನು ವಾಯ ಸೇನೆ ಬಾಡಿಗೆಗೆ ಪಡೆದಿದೆ. ವಿವಿಧ ಸ್ಥಳದಿಂದ ಬರುವವರು ಸಮೂಹ ಸಾರಿಗೆ ಬಳಸಲು ಜಾಗೃತಿ ಮೂಡಿಸಿ ಸ್ವಂತ ವಾಹನ ಬದಲಾಗಿ ಬಸ್‌‍ನಲ್ಲಿ ಪ್ರಯಾಣಿಸಲು ಮನವಿ ಮಾಡಲಾಗುತ್ತಿದೆ. ಇದಲ್ಲದೆ ಏರ್‌ ಶೋ ವೇಳೆ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ವಿಮಾನಗಳ ಕಾರ್ಯಾಚರಣೆ ಮೇಲೆಯೂ ಪರಿಣಾಮವಾಗಲಿದೆ.

ನಿಗದಿತ ಸಮಯದಲ್ಲಿ ವಿಮಾನಗಳ ಹಾರಾಟ ಬಂದ್‌ ಆಗಲಿದೆ. ಹೀಗಾಗಿ ವಿಮಾನಯಾನ ಸಂಸ್ಥೆ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು ಬರುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ. ಪೆಬ್ರವರಿ 5 ರಿಂದ 8 ರವರೆಗೆ ಬೆಳಗ್ಗೆ 9 ಗಂಟೆಯಿಂದ 12 ಮತ್ತು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆವರೆಗೂ ವಿಮಾನಗಳ ಹಾರಾಟಕ್ಕೆ ನಿರ್ಬಂಧವಿದೆ. ಪೆಬ್ರವರಿ 09 ರಂದು ಬೆಳಗ್ಗೆ 9 ರಿಂದ 12 ಗಂಟೆವರೆಗೂ ವಿಮಾನಗಳ ಹಾರಾಟ ಸ್ಥಬ್ದವಾಗಲಿದೆ. ಫೆಬ್ರವರಿ 10 ರಂದು ಬೆಳಗ್ಗೆ 9 ಗಂಟೆಯಿಂದ 12 ಮತ್ತು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆವರೆಗೂ ವಿಮಾನ ಕಾರ್ಯಾಚರಣೆ ಇರುವುದಿಲ್ಲ. ಫೆಬ್ರವರಿ 11 ಮತ್ತು 12 ರಂದು 12 ಗಂಟೆಯಿಂದ 3 ಗಂಟೆವರೆಗೂ ವಿಮಾನಗಳ ಹಾರಾಟಕ್ಕೆ ನಿರ್ಬಂಧ ಹೇರಲಾಗಿದೆ.

ಫೆ.13 ಮತ್ತು 14 ರಂದು ಬೆಳಗ್ಗೆ 9 ರಿಂದ 12 ಗಂಟೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆವರೆಗೂ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾ ಚರಣೆ ಇರುವುದಿಲ್ಲ ಎಂದು ವರದಿ ತಿಳಿಸಿದೆ.

ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಇದಾಗಿದು,ದೇಶ ವಿದೇಶಗಳ ಅನೇಕ ಗಣ್ಯರು, ಉದ್ಯಮಿಗಳು, ವಾಯುಪಡೆಗಳ ಅಧಿಕಾರಿಗಳು ಸಿಬ್ಬಂದಿ ಆಗಮಿಸಲಿದ್ದಾರೆ. ಏರ್‌ ಶೋಗೆ ಆಗಮಿಸುವವರಿಗೆ ಪಾರ್ಕಿಂಗ್‌ ವ್ಯವಸ್ಥೆ, ಉಚಿತ ಬಸ್‌‍ ಸೇವೆಯನ್ನು ವಾಯುಪಡೆ ಮಾಡುತ್ತಿದೆ. ಲಕ್ಷಾಂತರ ಜನ ಆಗಮಿಸುವ ನಿರೀಕ್ಷೆ ಇದೆ.

RELATED ARTICLES

Latest News