Wednesday, May 1, 2024
Homeರಾಷ್ಟ್ರೀಯಚುನಾವಣಾ ಕಣದಿದ ಹಿಂದೆಸರಿದ ಗುಲಾಂ ನಬಿ ಆಜಾದ್, ನಾಮಪತ್ರ ವಾಪಸ್

ಚುನಾವಣಾ ಕಣದಿದ ಹಿಂದೆಸರಿದ ಗುಲಾಂ ನಬಿ ಆಜಾದ್, ನಾಮಪತ್ರ ವಾಪಸ್

ನವದೆಹಲಿ,ಏ.18- ಡೆಮಾಕ್ರಟಿಕ್ ಪ್ರೊಗ್ರೆಸಿವ್ ಆಜಾದ್ ಪಾರ್ಟಿ ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಮುಂಬರುವ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರದಿಂದ ಗುಲಾಂ ನಬಿ ಆಜಾದ್ ಅವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ಪಕ್ಷ ತಿಳಿಸಿದೆ.

ಆಜಾದ್ ಅವರು ಹಿಂದೆ ಸರಿದ ಬಳಿಕ ಇದೀಗ ಮೊಹಮ್ಮದ್ ಸಲೀಂ ಪರ್ರೆ ಅನಂತನಾಗ್-ರಾಜೌರಿ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಬಹುದು ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಕಾಶ್ಮೀರದ ಡಿಪಿಎಪಿಯ ಪ್ರಾಂತೀಯ ಅಧ್ಯಕ್ಷ ಮೊಹಮ್ಮದ್ ಅಮೀನ್ ಭಟ್ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬೆಳವಣಿಗೆಯನ್ನು ಆಜಾದ್ ಖಚಿತಪಡಿಸಿದ್ದಾರೆ. ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಹೀಗಾಗಿ ಅನಂತನಾಗ್-ರಜೌರಿ ಕ್ಷೇತ್ರಕ್ಕೆ ವಕೀಲ ಸಲೀಂ ಪರ್ರೆ ಡಿಪಿಎಪಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಿದರು.

ಆಜಾದ್ ಯೂಟರ್ನ್:
ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯತ್ವವನ್ನು ಮರುಸ್ಥಾಪಿಸಲು ಮತ್ತು ಅಲ್ಲಿನ ನಿವಾಸಿಗಳ ಭೂಮಿ ಮತ್ತು ಉದ್ಯೋಗ ಹಕ್ಕುಗಳ ರಕ್ಷಣೆಗಾಗಿ ತನ್ನ ಹೋರಾಟವನ್ನು ಮುಂದುವರಿಸಲು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು. ಈ ಹೇಳಿಕೆ ಕೊಟ್ಟ ಕೆಲವೇ ದಿನಗಳಲ್ಲಿ ಆಜಾದ್ ಗುಲಾಂ ನಬಿ ಆಜಾದ್ ಯೂಟರ್ನ್ ಹೊಡೆದಿದ್ದಾರೆ.

ಆಜಾದ್ ಅವರು 2022ರಲ್ಲಿ ಕಾಂಗ್ರೆಸ್ ತೊರೆದಿದ್ದರು. ಈ ಮೂಲಕ ಪಕ್ಷದೊಂದಿಗಿನ ಐದು ದಶಕಗಳ ಸಂಬಂಧವನ್ನು ಕೊನೆಗೊಳಿಸಿ ಡಿಪಿಎಪಿಯನ್ನು ಸೇರಿಕೊಂಡರು.

RELATED ARTICLES

Latest News