ಮಹಾರಾಷ್ಟ್ರ,ಮಾ.3 – ತಂದೆಯಿಂದಲೇ ಲೈಂಗಿಕ ಕಿರುಕುಳಕ್ಕೆ ಒಳಗಾಗಿ 14 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾಲ್ಘಾರ್ ಜಿಲ್ಲೆಯಲ್ಲಿ ನಡೆದಿದೆ.
ಕಳೆದ 3 ದಿನಗಳ ಹಿಂದೆ ಬಾಲಕಿಯು ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದು, ಆಕೆ ಬರೆದಿರುವ ಮರಣ ಪತ್ರ ತಡವಾಗಿ ದೊರಕಿದೆ. ಮರಣ ಪತ್ರದಲ್ಲಿ ಬಾಲಕಿಯು, ತನ್ನ ತಂದೆಯ ಲೈಂಗಿಕ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾಳೆ.
ರಾಮನಗರ ಸೂಪರ್ ಸ್ಪೆಷಾಲಿಟಿ ಜಿಲ್ಲಾಸ್ಪತ್ರೆ ಉದ್ಘಾಟನೆ
ತನ್ನ ತಂದೆ ತನಗೆ ಪ್ರತಿದಿನ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ತಾನು ತನ್ನ ತಾಯಿಗೆ ತಿಳಿಸಿದರೂ ಪ್ರಯೋಜನವಾಗಲಿಲ್ಲ. ಆದ್ದರಿಂದ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ತನ್ನ ತಂದೆಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಬಾಲಕಿ ಪತ್ರದಲ್ಲಿ ತಿಳಿಸಿದ್ದಾಳೆ.
ಕುಡಿದು ನಿಂದಿಸಿದ ವ್ಯಕ್ತಿ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ
ಸಾಕ್ಷಿಯನ್ನು ವಶಪಡಿಸಿಕೊಂಡಿರುವ ಪೊಲೀಸರು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
#Girl, #hangsself, #sexualabuse, #father, #CommitSuicide,