ನ.2ರಿಂದ ಜಾಗತಿಕ ಹೂಡಿಕೆದಾರರ ಸಮಾವೇಶ, 5 ಲಕ್ಷ ಕೋಟಿ ಬಂಡವಾಳ ನಿರೀಕ್ಷೆ

Social Share

ಬೆಂಗಳೂರು,ಅ.31- ಕೈಗಾರಿಕಾ ವಲಯದಲ್ಲಿ ಹೊಸ ಕ್ರಾಂತಿ ಸೃಷ್ಟಿಸುವ ಹಾಗೂ ಉದ್ಯೋಗದಲ್ಲಿ ಹೊಸ ಭವಿಷ್ಯ ಬರೆಯಬಹುದೆಂದು ನಿರೀಕ್ಷಿಸಲಾಗಿರುವ ಜಾಗತಿಕ ಹೂಡಿಕೆದಾರರ ಸಮಾವೇಶ ನವೆಂಬರ್ 2ರಿಂದ 4ರವರೆಗೆ ಬೆಂಗಳೂರು ಪ್ಯಾಲೇಸ್ನಲ್ಲಿ ನಡೆಯಲಿದೆ.

ಬಿಲ್ಡ್ ಫಾರ್ ದಿ ವಲ್ರ್ಡ್ ಎಂಬ ಪರಿಕಲ್ಪನೆಯೊಂದಿಗೆ ಮೂರು ದಿನಗಳ ಕಾಲ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ 2022 ಜಾಗತಿಕ ಸಮಾವೇಶಕ್ಕೆ ಫ್ರಾನ್ಸ್, ನೆದರ್ಲ್ಯಾಂಡ್, ಜರ್ಮನಿ, ಜಪಾನ್, ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾ ಸೇರಿದಂತೆ ವಿವಿಧ ದೇಶಗಳನ್ನು ಪಾಲುದಾರ ರಾಷ್ಟ್ರಗಳನ್ನಾಗಿ ಮಾಡಿಕೊಳ್ಳಲಾಗಿದೆ.

ಸಮಾವೇಶಕ್ಕೆ ಬೆಂಗಳೂರು ಪ್ಯಾಲೇಸ್ ಸಿದ್ದಗೊಂಡಿದ್ದು ವಿಶ್ವದ ಮುಂಚೂಣಿಯಲ್ಲಿರುವ ಉದ್ದಿಮೆದಾರರು, ವ್ಯವಸ್ಥಾಪಕ ನಿರ್ದೇಶಕರು, ಸಿಇಒಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಸಮಾವೇಶವನ್ನು ಪ್ರಧಾನಿ ನರೇಂದ್ರಮೋದಿ ವಿಡಿಯೋ ಕಾನರೆನ್ಸ್ ಮೂಲಕ ಚಾಲನೆ ಕೊಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾದ ಸ್ಮತಿ ಇರಾನಿ, ಭಗವಂತ ಖೂಬಾ, ನಿತಿನ್ ಗಡ್ಕರಿ ಭಾಗವಹಿಸಲಿದ್ದಾರೆ.

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವ ಭಾಗವಾಗಿ ಅಂತಾರಾಷ್ಟ್ರೀಯ ಹಾಗೂ ದೇಶೀಯ ರೋಡ್ ಶೋ ಯಶಸ್ವಿಯಾಗಿದ್ದು, ರೋಡ್ ಶೋ ವೇಳೆ ಉದ್ಯಮಿಗಳ ಜತೆ ನಡೆಸಿದ ಮಾತುಕತೆ ಫಲಪ್ರದವಾಗಿದೆ.

5 ಲಕ್ಷ ಕೋಟಿ ರೂ. ಹೂಡಿಕೆ ನಿರೀಕ್ಷೆ:

ಸಮಾವೇಶವನ್ನು ಯಶಸ್ವಿಯಾಗಿ ನಡೆಸಲು ಪಣತೊಟ್ಟಿರುವ ಸಚಿವ ಮುರುಗೇಶ್ ನಿರಾಣಿಯವರು, ಕಳೆದ ಮೂರು ತಿಂಗಳಿನಿಂದ ದೇಶ-ವಿದೇಶಗಳಲ್ಲಿ ರೋಡ್ ಶೋ ಮೂಲಕ ಕರ್ನಾಟಕದಲ್ಲಿ ಬಂಡವಾಳ ಹೂಡುವಂತೆ ವಿವಿಧ ಉದ್ಯಮಿಗಳನ್ನು ಭೇಟಿಯಾಗಿ ಮನವರಿಕೆ ಮಾಡಿದ್ದರು.

ಅದೇ ರೀತಿ, ಹೈದರಾಬಾದ್ ಹಾಗೂ ಮುಂಬೈ ರೋಡ್ ಶೋ ವೇಳೆ ಉದ್ಯಮಿಗಳಿಂದ ಉತ್ತಮ ಸ್ಪಂದನೆ ದೊರೆತಿದೆ. ಅಂತಾರಾಷ್ಟ್ರೀಯ ರೋಡ್ ಶೋನ ಭಾಗವಾಗಿ ಜಪಾನ್, ದಕ್ಷಿಣ ಕೊರಿಯಾ, ಅಮೆರಿಕ ಹಾಗೂ ಯೂರೋಪ್ಗೆ ಭೇಟಿ ನೀಡಲಾಗಿತ್ತು.

ಈ ದೇಶಗಳಿಂದ ದೊಡ್ಡ ಮಟ್ಟದ ವಿದೇಶಿ ಬಂಡವಾಳ ಹರಿದು ಬರುವ ನಿರೀಕ್ಷೆ ಇದೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5,000ಕ್ಕೂ ಹೆಚ್ಚು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. 5 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಇದ್ದು, ಇದರಿಂದ 5 ಲಕ್ಷ ಜನರಿಗೆ ಉದ್ಯೋಗ ದೊರೆಯುವ ಭರವಸೆಯನ್ನು ಮುರುಗೇಶ್ ನಿರಾಣಿ ಇಟ್ಟುಕೊಂಡಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶ ಬಿಲ್ಡ್ ಫಾರ್ ದ ವಲ್ರ್ಡ್ ಎಂಬ ಪರಿಕಲ್ಪನೆಯಡಿ ಅನಾವರಣಗೊಳ್ಳಲಿದೆ. ಅತ್ಯುತ್ತಮ ಕೈಗಾರಿಕಾ ಪರಿಸರ ವ್ಯವಸ್ಥೆ ಹೊಂದಿರುವ ಕರ್ನಾಟಕ, ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣವಾಗಿದೆ.

ಜಾಗತಿಕ ಹೂಡಿಕೆದಾರರ ಸಮಾವೇಶದ ಸಂದರ್ಭದಲ್ಲಿ ಭೂ ಹಂಚಿಕೆಗೆ ಅನುಕೂಲವಾಗುವಂತೆ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂ ಸ್ವಾೀನ ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸ್ವಾೀನಕ್ಕೆ ಕ್ರಮ ವಹಿಸಲಾಗಿದೆ.

ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. ನೂತನ ಕೈಗಾರಿಕಾ ನೀತಿ ಹಾಗೂ ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅನಿಯಮದಲ್ಲಿನ ತಿದ್ದುಪಡಿಗಳಿಂದ ನಮ್ಮ ರಾಜ್ಯ ಉದ್ಯಮ ಸ್ನೇಹೀ ರಾಜ್ಯಗಳ ಪಟ್ಟಿಯಲ್ಲಿ ಅತ್ಯಂತ ಪ್ರಮುಖ ಸ್ಥಾನ ಪಡೆದುಕೊಂಡಿದೆ. ಇದನ್ನು ಸಮಾವೇಶದಲ್ಲಿ ಹೂಡಿಕೆದಾರರಿಗೆ ಸಚಿವ ನಿರಾಣಿ ಮನವರಿಕೆ ಮಾಡಿಕೊಡುವರು.

2021ರ ಏಪ್ರಿಲ್ 21ರಿಂದ 2022ರ ಮಾರ್ಚ್ ಅವಯಲ್ಲಿ 1.76 ಲಕ್ಷ ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಆಕರ್ಷಿಸುವಲ್ಲಿ ರಾಜ್ಯವು ಯಶಸ್ವಿಯಾಗಿದೆ. 2021ರ ಜುಲೈನಿಂದೀಚೆಗೆ ಬರೋಬ್ಬರಿ 3 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆ ಪ್ರಸ್ತಾವನೆಗಳು ರಾಜ್ಯಕ್ಕೆ ಬಂದಿವೆ.ಹೂಡಿಕೆಯು ಸುಮಾರು ಐದು ಲಕ್ಷ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಸಾಮಥ್ರ್ಯವನ್ನು ಹೊಂದಿರುತ್ತದೆ.

ಶೃಂಗಸಭೆಯ ಸಮಯದಲ್ಲಿ ಎಂಒಯುಗಳನ್ನು ನೇರವಾಗಿ ಸಹಿ ಮಾಡಲಾಗುವುದಿಲ್ಲ. ಹೂಡಿಕೆ ಪ್ರಸ್ತಾಪಗಳ ಬಗ್ಗೆ ವಿವರವಾದ ಚರ್ಚೆಗಳ ನಂತರ ಮತ್ತು ಅಗತ್ಯ ಅನುಮತಿಗಳನ್ನು ನೀಡಿದ ನಂತರ ಈ ಪ್ರಕ್ರಿಯೆ ನಡೆಯಲಿದೆ.

Articles You Might Like

Share This Article