ವಿಶ್ವಸಂಸ್ಥೆ, ಏ. 29- ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಜಾಗತಿಕ ನಾಯಕರು ನೀಡಿದ ಬಲವಾದ, ನಿಸ್ಸಂದಿಗ್ಧವಾದ ಬೆಂಬಲ ಮತ್ತು ಒಗ್ಗಟ್ಟು ಭಯೋತ್ಪಾದನೆಯ ಬಗ್ಗೆ ಅಂತರರಾಷ್ಟ್ರೀಯ ಸಮುದಾಯದ ಶೂನ್ಯ ಸಹಿಷ್ಣುತೆಗೆ ಸಾಕ್ಷಿಯಾಗಿದೆ ಎಂದು ಭಾರತ ಹೇಳಿದೆ.
2008 ರ 26/11 ಮುಂಬೈ ದಾಳಿಯ ನಂತರ ಪಹಲ್ಗಾಮ್ ಭಯೋತ್ಪಾದಕ ದಾಳಿಯು ಹೆಚ್ಚಿನ ಸಂಖ್ಯೆಯ ನಾಗರಿಕರ ಸಾವುನೋವುಗಳನ್ನು ಪ್ರತಿನಿಧಿಸುತ್ತದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಉಪ ಖಾಯಂ ಪ್ರತಿನಿಧಿ, ರಾಯಭಾರಿ ಯೋಜ್ನಾ ಪಟೇಲ್ ಹೇಳಿದರು.
ದಶಕಗಳಿಂದ ಗಡಿಯಾಚೆಗಿನ ಭಯೋತ್ಪಾದನೆಗೆ ಬಲಿಪಶುವಾಗಿರುವ ಭಾರತ, ಇಂತಹ ಕೃತ್ಯಗಳು ಸಂತ್ರಸ್ತರು, ಅವರ ಕುಟುಂಬಗಳು ಮತ್ತು ಸಮಾಜದ ಮೇಲೆ ಬೀರುವ ದೀರ್ಘಕಾಲೀನ ಪರಿಣಾಮವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಂಡಿದೆ ಎಂದು ಪಟೇಲ್ ಹೇಳಿದರು.
ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ಕಚೇರಿಯ ವಿಕ್ಟಿಮ್ಸೌ ಆಫ್ ಟೆರರಿಸಂ ಅಸೋಸಿಯೇಷನ್ ನೆಟ್ ವರ್ಕ್ (ವಿಒಟಿಎಎನ್) ಹೈಬ್ರಿಡ್ ಬಿಡುಗಡೆ ಸಮಾರಂಭದಲ್ಲಿ ಪಟೇಲ್ ಅವರು ವಿಶ್ವ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಮಾತನಾಡಿದರು.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿಶ್ವದಾದ್ಯಂತ ನಾಯಕರು ಮತ್ತು ಸರ್ಕಾರಗಳು ನೀಡಿದ ಬಲವಾದ, ನಿಸ್ಸಂದಿಗ್ಧವಾದ ಬೆಂಬಲ ಮತ್ತು ಒಗ್ಗಟ್ಟನ್ನು ಭಾರತವು ಆಳವಾಗಿ ಪ್ರಶಂಸಿಸುತ್ತದೆ ಮತ್ತು ಗೌರವಿಸುತ್ತದೆ.
ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್, ಯುಎಸ್ ಉಪಾಧ್ಯಕ್ಷ ಜೆಡಿ ವ್ಯಾನ್ಸ್, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್, ಇಟಾಲಿಯನ್ ಪ್ರಧಾನಿ ಜಿಯೋರ್ಜಿಯಾ ಮೆಲೋನಿ, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಯುಎನ್ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಸೇರಿದಂತೆ ಜಾಗತಿಕ ನಾಯಕರು ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ ಮತ್ತು ಭಾರತಕ್ಕೆ ಸಂತಾಪ ಮತ್ತು ಒಗ್ಗಟ್ಟನ್ನು ವ್ಯಕ್ತಪಡಿಸಿದ್ದಾರೆ.