Wednesday, September 3, 2025
Homeರಾಜ್ಯಹೆಚ್ಡಿಕೆ ಭೇಟಿಯಾದ ಗೋವಾ ಸಿಎಂ, ರಾಜ್ಯ ರಾಜಕಾರಣದಲ್ಲಿ ತಲ್ಲಣ

ಹೆಚ್ಡಿಕೆ ಭೇಟಿಯಾದ ಗೋವಾ ಸಿಎಂ, ರಾಜ್ಯ ರಾಜಕಾರಣದಲ್ಲಿ ತಲ್ಲಣ

Goa CM meets HDK, creates tension in state politics

ನವದೆಹಲಿ, ಸೆ.3-ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಗೋವಾ ಮುಖ್ಯಂತ್ರಿ ಪ್ರಮೋದ್‌ ಸಾವಂತ್‌ ಅವರು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ತಲ್ಲಣವನ್ನುಂಟು ಮಾಡಿದೆ. ಇದರಿಂದ ಕರ್ನಾಟಕ ಕಾಂಗ್ರೆಸ್‌‍ನಲ್ಲಾಗುತ್ತಿರುವ ಆಂತರಿಕ ಬೆಳವಣಿಗೆಯ ರಾಜಕೀಯ ಲಾಭ ಪಡೆಯಲು ಎನ್‌ಡಿಎ ನಾಯಕರು ಯತ್ನಿಸುತ್ತಿದ್ದಾರೆಯೇ ಎಂಬ ಸಂದೇಹವನ್ನು ರಾಜಕೀಯವಾಗಿ ಹುಟ್ಟು ಹಾಕಿದೆ.

ಉಭಯ ನಾಯಕರು ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯವಾಗಿ ಭಾರಿ ಕುತೂಹಲ ಕೆರಳಿಸಿದೆ. ಸಾವಂತ್‌ ಮತ್ತು ಕುಮಾರಸ್ವಾಮಿ ಅವರು ದೇಶದ ಹಾಗೂ ಕರ್ನಾಟಕದ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಕರ್ನಾಟಕ ರಾಜ್ಯದಲ್ಲಾಗುತ್ತಿರುವ ರಾಜಕೀಯ ವಿದ್ಯಾಮಾನಗಳ ಕುರಿತಂತೆ ಪರಸ್ಪರ ವಿಚಾರ ವಿನಿಮಯ ಮಾಡಿಕೊಂಡಿದ್ದಾರೆ. ರಾಜ್ಯ ಕಾಂಗ್ರೆಸ್‌‍ನಲ್ಲಾಗುತ್ತಿರುವ ಬೆಳವಣಿಗೆಯ ಕುರಿತು ಉಭಯ ನಾಯಕರು ಸಮಾಲೋಚನೆ ನಡೆಸಿದ್ದಾರೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.

ಕೆಲವು ದಿನಗಳ ಹಿಂದೆ ಎನ್‌ಡಿಎ ಜತೆ ಜೆಡಿಎಸ್‌‍ ಮೈತ್ರಿಯಾಗುವ ಸಂದರ್ಭದಲ್ಲಿ ಸಾವಂತ್‌ ಮಹತ್ತರ ಪಾತ್ರ ವಹಿಸಿದ್ದರು. ಇದಲ್ಲದೇ, ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರು ಕುಮಾರಸ್ವಾಮಿ ಅವರೊಂದಿಗೆ ಸಮಾಲೋಚನೆ ನಡೆಸಿದ್ದರು.

ಅದಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಅವರೊಂದಿಗೆ ಷಾ ಪ್ರತ್ಯೇಕ ಮಾತುಕತೆ ನಡೆಸಿದ್ದರು. ಮಾಜಿ ಸಚಿವ ಕೆ.ಎನ್‌.ರಾಜಣ್ಣ ಅವರು, ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಭವಿಷ್ಯ ನುಡಿದಿದ್ದರು.ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿ ಬದಲಾವಣೆ ಸೇರಿದಂತೆ ಕಾಂಗ್ರೆಸ್‌‍ನಲ್ಲಿ ಬಿರುಗಾಳಿಯೇ ಬೀಸಲಿದೆ ಎಂಬೆಲ್ಲ ಹೇಳಿಕೆ ನೀಡಿದ್ದರು.

RELATED ARTICLES

Latest News