ಪಣಜಿ,ಜು.13- ಪಾಸ್‌ಪೋರ್ಟ್ ಪಡೆಯಲು ನಕಲಿ ದಾಖಲೆಗಳನ್ನು ಒದಗಿಸಿದ ಆರೋಪದ ಮೇಲೆ ಪರಾರಿಯಾಗಿದ್ದ ಆರೋಪಿಯನ್ನು ಚೆನ್ನೈನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಗೋವಾದ ಮಾಪುಸಾ ಪಟ್ಟಣದ ಬಳಿಯ ಖೋರ್ಲಿಮ್ ಗ್ರಾಮದ ನಿವಾಸಿ ಪಂಕಜ್ ಚೌರೆ ಪಾಸ್‌ಪೋರ್ಟ್ ಅರ್ಜಿಗಳಿಗಾಗಿ ಆನ್‌ಲೈನ್ ಪೋರ್ಟಲ್ ಮೂಲಕ ನಕಲಿ ದಾಖಲೆಗಳನ್ನು ಸಲ್ಲಿಸಿದ್ದ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಕಳೆದ ಜೂನ್ 30 ರಂದು ಪಣಜಿಯ ಪಟ್ಟೊದಲ್ಲಿರುವ ಪಾಸ್‌ಪೋರ್ಟ್ ಕಚೇರಿಯಲ್ಲಿ ಅವರಿಗೆ ಅಪಾಯಿಂಟ್‌ಮೆಂಟ್ ಇತ್ತು. ಆರೋಪಿಯೊಂದಿಗಿನ ಸಂವಾದದ ಸಮಯದಲ್ಲಿ, ಪಾಸ್‌ಪೋರ್ಟ್ ಅಧಿಕಾರಿ ದಾಖಲೆ ಬಗ್ಗೆ ಸಂಶಯ ವ್ಯಕ್ತಪಡಿಸಿದರು.
ಈ ವೇಲೆ ಆರೋಪಿ ಪಾಸ್‌ಪೋರ್ಟ್ ಕಚೇರಿಯಿಂದ ಪರಾರಿಯಾಗಿ ನಂತರ ನಾಪತ್ತೆಯಾಗಿದ್ದಾನೆ. ನಂತರ ದಾಖಲೆ ಪರಿಶೀಲನೆಯಲ್ಲಿ ಅವರು ಒದಗಿಸಿದ ಆಧಾರ್ ಕಾರ್ಡ್‌ನಲ್ಲಿರುವ ವಿಳಾಸ ನಕಲಿ ಎಂದು ತಿಳಿದುಬಂದಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ತಾಂತ್ರಿಕ ಮತ್ತು ಮಾನವ ಬುದ್ಧಿಮತ್ತೆಯನ್ನು ಬಳಸಿಕೊಂಡು ಪೊಲೀಸರು ಹುಡುಕಾಟ ನಡೆಸಿದರು ಮತ್ತು ಚೌರೆಯನ್ನು ಚೆನ್ನೈನಲ್ಲಿ ಪತ್ತೆಹಚ್ಚಿದರು ಎಂದು ಅಧಿಕಾರಿ ಹೇಳಿದರು.ಚೆನ್ನೈನಲ್ಲಿರುವ ತಮ ಸಹವರ್ತಿಗಳ ಸಹಾಯದಿಂದ ಆರೋಪಿಯನ್ನು ಪಣಜಿ ಪೊಲೀಸ್ ತಂಡ ಬಂಧಿಸಿ ಗೋವಾಕ್ಕೆ ಕರೆತರಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪ್ರಸ್ತುತ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
- ಪೊಲೀಸ್ ಕಸ್ಟಡಿ ಸಾವು ವಿರೋಧಿಸಿ ಬೀದಿಗಿಳಿದ ವಿಜಯ್
- ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರ ಆತ್ಮಹತ್ಯೆ
- ಬೆಳಗಾವಿ : ನಡು ರಸ್ತೆಯಲ್ಲೇ ಯುವ ಗಾಯಕನ ಬರ್ಬರ ಹತ್ಯೆ
- ಕಿರು ತೆರೆ ನಟಿ ಶ್ರುತಿ ಮೇಲಿನ ಹಲ್ಲೆಗೆ ನೈಜ ಕಾರಣ ಬಿಚ್ಚಿಟ್ಟ ಪತಿ
- ಬಿಹಾರ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ..!