ಬೆಳಗಾವಿಯಲ್ಲಿ ಗೋಲ್ಡ್ ಕ್ಲಾಸ್ ಕೈಗಾರಿಕಾ ಅಭಿವೃದ್ಧಿ ಪ್ರದೇಶ ಸ್ಥಾಪನೆ

Social Share

ಬೆಳಗಾವಿ ,ಡಿ.23-ಗಡಿ ಭಾಗಗಳಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಿ ಸ್ಥಳೀಯರಿಗೆ ಉದ್ಯೋಗ ಕೊಡುವ ಸದುದ್ದೇಶದಿಂದ ಬೆಳಗಾವಿಯಲ್ಲಿ ಗೋಲ್ಡ್ ಕ್ಲಾಸ್ ಕೈಗಾರಿಕಾ ಅಭಿವೃದ್ದಿ ಪ್ರದೇಶವನ್ನು ಶೀಘ್ರದಲ್ಲೇ ಪ್ರಾರಂಭ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಘೋಷಣೆ ಮಾಡಿದ್ದಾರೆ.

ಶುಕ್ರವಾರ ವಿಧಾನಸಭೆಯ ಪ್ರಶ್ನೋತ್ತರ ಅವಯಲ್ಲಿ ಶಾಸಕ ಅಭಯ್ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗಡಿ ಜಿಲ್ಲೆಗಳಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಗಡಿ ಜಿಲ್ಲೆಗಳಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಬೇಕೆಂಬುದು ಮೊದಲ ಉದ್ದೇಶವಾಗಿದೆ. ಇದರ ಮೊದಲ ಹಂತವಾಗಿ ಗೋಲ್ಡ್ ಕ್ಲಾಸ್ ಕೈಗಾರಿಕಾ ಅಭಿವೃದ್ದಿ ಪ್ರದೇಶವನ್ನು ಸ್ಥಾಪನೆ ಮಾಡುತ್ತೇವೆ ಎಂದು ತಿಳಿಸಿದರು.

ಬೆಳಗಾವಿ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಮುಂದೆ ಬಂದರೆ ಇಲ್ಲವೇ ಬಂಡವಾಳ ಹೂಡಲು ಉದ್ಯಮಿಗಳಿಗೆ ವಿಶೇಷ ಸವಲತ್ತು, ರಿಯಾಯ್ತಿ, ಕೈಗಾರಿಕೆ ಸ್ಥಾಪನೆಗೆ ಅಗತ್ಯವಿರುವ ಭೂಮಿ, ನೀರು, ರಸ್ತೆ ಸೇರಿದಂತೆ ಮತ್ತಿತರ ಸೌಲಭ್ಯ ಕಲ್ಪಿಸಲು ಸರ್ಕಾರ ಸಿದ್ದವಿದೆ ಎಂದರು.

ಬೆಳಗಾವಿ ಜಿಲ್ಲೆಗೆ ಕೈಗಾರಿಕೆಗಳನ್ನು ಸ್ಥಾಪಿಸಲು ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಸದಸ್ಯರು ಮನವಿ ಮಾಡಿಕೊಂಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಜಿಲ್ಲೆಯನ್ನು ಕೈಗಾರಿಕೆಯಲ್ಲಿ ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಆಶ್ವಾಸನೆ ನೀಡಿದರು.

ಬೆಳಗಾವಿಗೆ ದೆಹಲಿ ಮೂಲದ ಗೋಲ್ಡ್ ಕ್ಲಾಸ್ ಕಂಪನಿಯವರು ಎರಡೂವರೆ ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದಿದ್ದಾರೆ. ಮಾಜಿ ಸಚಿವರಾದ ದಿ.ಉಮೇಶ್ ಕತ್ತಿ ಅವರ ತವರು ಕ್ಷೇತ್ರದಲ್ಲಿ ಈ ಕೈಗಾರಿಕೆ ಪ್ರಾರಂಭವಾಗಲಿದೆ.

ಮೊದಲು 10 ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಳ್ಳುವ ಲೆಕ್ಕಾಚಾರವಿತ್ತು. ಆದರೆ ಈಗ ಕೇವಲ 8 ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಮೊದಲ ಹಂತದಲ್ಲಿ ಎರಡೂವರೆ ಸಾವಿರ ಕೋಟಿ ಹೂಡಿಕೆಯಾದರೆ ಮುಂದಿನ ಹಂತದಲ್ಲಿ ಅಕ ಬಂಡವಾಳ ಹರಿದುಬರಲಿದೆ. ವಿಶೇಷವಾಗಿ ಈ ಭಾಗದ ಯುವಕರಿಗೆ ಉದ್ಯೋಗ ಲಭಿಸಿ ನಿರುದ್ಯೋಗ ನಿವಾರಣೆಯಾಗಲಿದೆ ಎಂದು ನಿರಾಣಿ ಅಭಿಪ್ರಾಯಪಟ್ಟರು.

ಕೊರೊನಾ 4ನೇ ಅಲೆ ಎದುರಿಸಲು ಸಾಮರ್ಥ್ಯ ಬಿಬಿಎಂಪಿಗಿದೆಯೇ..?

ಗುರುವಾರ ರಷ್ಯಾ ಮೂಲದ ಜಿವಿ ಕಂಪನಿಯ ನಿಯೋಗ ಭೇಟಿಯಾಗಿ ಬೆಳಗಾವಿಯಲ್ಲಿ ವಿದ್ಯುತ್ ವಾಹನ(ಎಲೆಕ್ಟ್ರಿಕಲ್ ವೆಹಿಕಲ್) ಘಟಕವನ್ನು ಪ್ರಾರಂಭಿಸಲು ಮುಂದೆ ಬಂದಿದೆ. ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮೈಸೂರು, ಮಂಗಳೂರು, ಹೀಗೆ ಟೈಯರ್2 , ಟೈಯರ್3 ನಗರಗಳಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ ಎಂದು ಮಾಹಿತಿ ನೀಡಿದರು.

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಎದುರು ರಕ್ಷಣಾ ಇಲಾಖೆ ಸೇರಿದ 700 ಎಕರೆ ಜಮೀನು ಇದೆ. ಇದನ್ನು ನಮ್ಮ ಇಲಾಖೆಗೆ ಹಸ್ತಾಂತರ ಮಾಡಿದರೆ ಇಲ್ಲಿ ವೈಮಾನಿಕ ಯಾನ, ಡಾಟಾಸೆಂಟರ್, ರಕ್ಷಣೆ, ಕೃಷಿ ಸೇರಿದಂತೆ ಮತ್ತಿತರ ಇಲಾಖೆಗಳ ಘಟಕಗಳನ್ನು ತೆರೆಯಬಹುದು. ರಕ್ಷಣಾ ಇಲಾಖೆಯವರು ನಮಗೆ ಒಂದು ಸಾವಿರ ಎಕರೆ ಜಮೀನನ್ನು ಹಸ್ತಾಂತರಿಸಿದರೆ ಖಾನಾಪುರದ ಬಳಿ ಒಂದು ಸಾವಿರ ಎಕರೆ ಜಮೀನು ನೀಡಲಿದ್ದೇವೆ. ಶೀಘ್ರದಲ್ಲೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಮಾಡುವುದಾಗಿ ಹೇಳಿದರು.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 9.18 ಲಕ್ಷ ಕೋಟಿ ರಾಜ್ಯದಲ್ಲಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಉದ್ಯಮಿಗಳ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಕೇವಲ 10ರಷ್ಟು ಮಾತ್ರ ಒಪ್ಪಂದ ಮಾಡಿಕೊಳ್ಳಲಾಗಿದೆ. ಶೇ.80ರಿಂದ 90ರಷ್ಟು 2ನೇ ಮತ್ತು 3ನೇ ಹಂತದಲ್ಲಿ ಬಂಡವಾಳ ಹೂಡಿಕೆಯಾಗಲಿದೆ.

ಕಲಬುರಗಿ, ಬೆಳಗಾವಿ, ಹುಬ್ಬಳ್ಳಿ ಧಾರವಾಡ, ಮೈಸೂರು, ಮಂಗಳೂರು, ಶಿವಮೊಗ್ಗ, ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ಹೂಡಿಕೆಗೆ ನೀಲನಕ್ಷೆಯನ್ನು ಸಿದ್ದಪಡಿಸಿರುವುದಾಗಿ ವಿವರಿಸಿದರು.

ಕೇವಲ ತೋರ್ಪಡಿಕೆಗೆ ಮಾತ್ರ ನಾವು ಒಪ್ಪಂದ ಮಾಡಿಕೊಂಡಿಲ್ಲ. 90 ದಿನದೊಳಗೆ ಈ ಯೋಜನೆಗಳಿಗೆ ಅನುಮೋದನೆ ನೀಡಲಿದ್ದೇವೆ. ಮುಖ್ಯಮಂತ್ರಿಗಳ ಜೊತೆ ಈಗಾಗಲೇ ಸಭೆಯನ್ನು ನಡೆಸಿದ್ದೇವೆ ಎಂದರು.

2.18 ಲಕ್ಷ ಕೋಟಿ ಹೂಡಿಕೆಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿರುವ ಉನ್ನತ ಮಟ್ಟದ ಏಕಗವಾಕ್ಷಿ ಹೂಡಿಕೆ ಸಮಿತಿಯು ಅನುಮೋದನೆ ಕೊಟ್ಟಿದೆ. ಮೈಸೂರಿನಲ್ಲಿ ಸೆಮಿಕಂಡಕ್ಟರ್ ಘಟಕ ಸ್ಥಾಪಿಸಲು 22.50 ಸಾವಿರ ಕೋಟಿ ಹೂಡಿಕೆ ಮಾಡಲು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.

ಮಧ್ಯರಾತ್ರಿ ದ್ವಾರಕೆಯ ಶ್ರೀಕೃಷ್ಣನ ದರ್ಶನ ಪಡೆದ ಗೋವುಗಳು

ಸೂಕ್ತ ಕ್ರಮ:
ಶಾಸಕ ಸೋಮಶೇಖರ ರೆಡ್ಡಿ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವ ನಿರಾಣಿ, ಬಳ್ಳಾರಿ ನಗರಪ್ರದೇಶದಲ್ಲಿ ಗಾರ್ಮೆಂಟ್ ರೈಸ್ಮಿಲ್, ಕೆಎಂಎಫ್, ಜನರಲ್ ಇಂಜಿನಿಯರಿಂಗ್ ಸೇರಿದಂತೆ ಸಣ್ಣ ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತವೆ ಎಂದು ಹೇಳಿದರು.

ವಸತಿ ಪ್ರದೇಶದಲ್ಲಿರುವ ಕೈಗಾರಿಕಾ ಪ್ರದೇಶಗಳನ್ನು ಸ್ಥಳಾಂತರಿಸಲು ವಾಯುಮಾಲಿನ್ಯ ನಿಯಂತ್ರಣ ಮಂಡಳಿಯವರು ನೋಟಿಸ್ ಕೊಟ್ಟಿದ್ದಾರೆ. ಜಿಲ್ಲೆಯ ವೇಣಿಪುರ ಬಳಿ 650 ಎಕರೆ ಜಮೀನನ್ನು ಭೂಸ್ವಾೀನಪಡಿಸಿಕೊಳ್ಳಲಾಗಿದೆ. ಅಲ್ಲಿಗೆ ಅವರು ಬಯಸಿದರೆ ಸ್ಥಳಾಂತರ ಮಾಡಿಕೊಳ್ಳಬಹುದು. ಅಲ್ಲದೆ ಟ್ರೀಟ್ಮೆಂಟ್ ಘಟಕವನ್ನು ಅಳವಡಿಸಲು ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ ಎಂದರು.

Gold Class Industrial, Belgaum, Minister, Murugesh Nirani,

Articles You Might Like

Share This Article