ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳ ಸಾಗಣೆ : ಮೂವರ ಬಂಧನ

Spread the love

ಮಂಗಳೂರು,ಏ .3- ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಕೇಂದ್ರ ಅಬಕಾರಿ ಪೊಲೀಸರು ಸುಮಾರು 1.20 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಯುಎಇನಿಂದ ಆಗಮಿಸಿದ ಇಬ್ಬರು ಪ್ರಯಾಣಿಕರು ಶೂ ಒಳಗಡೆ ಚಿನ್ನದ ಸರ ಹಾಗೂ ಚಿನ್ನದ ಸಣ್ಣ ಬಳೆಗಳನ್ನು ಅಡಗಿಸಿಟ್ಟು ಸಾಗಾಣಿಕೆ ಮಾಡುತ್ತಿದ್ದರು.

ಇದನ್ನು ಪತ್ತೆಹಚ್ಚಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. 26,43,840 ರೂ.ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೊಂದು ಪ್ರಕರಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕರೊಬ್ಬರು 92 .27 ಲಕ್ಷ ಮೌಲ್ಯದ ಗಟ್ಟಿ ರೂಪದ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡುತ್ತಿದ್ದ. ಇದನ್ನು ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಲಾಗಿದೆ.