ಬೆಂಗಳೂರು, ಮಾ.27-ನಟಿ ಹರ್ಷವರ್ಧಿನಿ ಅಲಿಯಾಸ್ ರನ್ಯಾ ರಾವ್ ಅವರಿಗೆ ಕಳ್ಳಸಾಗಣೆ ಮಾಡಿದ ಚಿನ್ನವನ್ನು ವಿಲೇವಾರಿ ಮಾಡಲು ಸಹಾಯ ಮಾಡಿದ ಆರೋಪದ ಮೇಲೆ ಚಿನ್ನದ ವ್ಯಾಪಾರಿ ಯನ್ನು ಬಂಧಿಸಲಾಗಿದೆ.
ಬಳ್ಳಾರಿ ಮೂಲದ ವ್ಯಾಪಾರಿ ಸಾಹಿಲ್ ಜೈನ್ ರಾವ್ ಎಂಬಾತನನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಕಳೆದ ರಾತ್ರಿ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದೆ.
ರನ್ಯಾ ರಾವ್ ಕಳ್ಳಸಾಗಣೆ ಮಾಡಿದ ಚಿನ್ನವನ್ನು ವಿಲೇವಾರಿ ಮಾಡಲು ಮತ್ತು ಮಾರಾಟದ ಆದಾಯವನ್ನು ಹಂಚಿಕೊಳ್ಳಲು ಸಹಾಯ ಮತ್ತು ಪ್ರೋತ್ಸಾಹ ನೀಡಿದ್ದಾರೆ ಎಂದು ಮೂಲಗಳ ತಿಳಿಸಿದೆ.
ಕಳೆದ ಮಾರ್ಚ್ 3 ರಂದು ದುಬೈನಿಂದ ಬಂದ ರನ್ಯಾ ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿ12.56 ಕೋಟಿ ರೂ. ಮೌಲ್ಯದ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಇದರ ನಂತರ, ಅವರ ನಿವಾಸದಲ್ಲಿ ಶೋಧ ನಡೆಸಿದ ಅಧಿಕಾರಿಗಳು 2.06 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳು ಮತ್ತು 2.67 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾ ರಾವ್ ಮತ್ತು ಹೋಟೆಲ್ ಉದ್ಯಮಿ ತರುಣ್ ರಾಜು ಅವರನ್ನು ಈಗಾಗಲೇ ಬಂಧಿಸಲಾಗಿದೆ.