Sunday, October 6, 2024
Homeರಾಷ್ಟ್ರೀಯ | Nationalಮೆಟ್ರೋ ತಡೆಗೋಡೆಗೆ ಗೂಡ್ಸ್ ಲಾರಿ ಡಿಕ್ಕಿ : ಟ್ರಾಫಿಕ್‌ ಜಾಮ್‌, ಸವಾರರ ಪರದಾಟ

ಮೆಟ್ರೋ ತಡೆಗೋಡೆಗೆ ಗೂಡ್ಸ್ ಲಾರಿ ಡಿಕ್ಕಿ : ಟ್ರಾಫಿಕ್‌ ಜಾಮ್‌, ಸವಾರರ ಪರದಾಟ

Goods lorry collides with metro barricade

ಬೆಂಗಳೂರು,ಸೆ.20- ಚಾಲಕನ ನಿಯಂತ್ರಣ ತಪ್ಪಿ 10 ಚಕ್ರದ ಗೂಡ್ಸ್ ಲಾರಿಯೊಂದು ಇಂದು ಬೆಳಂಬೆಳಗ್ಗೆ ಮೆಟ್ರೋ ತಡೆಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ನಗರದ ನಾಗವಾರ-ಹೆಬ್ಬಾಳ ಮಾರ್ಗದ ಕೆಂಪಾಪುರದ ಬಳಿ ನಡೆದಿದೆ.

ಇಂದು ಬೆಳಗ್ಗೆ 7ಗಂಟೆ ಸುಮಾರಿಗೆ ಕೆಂಪಾಪುರದ ವೆಂಕಟ್‌ ಕಫೆ ಬಳಿ ಈ ಅಪಘಾತ ನಡೆದಿದ್ದು. ಚಾಲಕ ನಿಯಂತ್ರಣ ತಪ್ಪಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದ ತಡೆಗೋಡೆಗೆ ಡಿಕ್ಕಿ ಹೊಡೆದು ಲಾರಿ ರಸ್ತೆಗೆ ಅಡ್ಡಲಾಗಿ ನಿಂತಿದೆ.

ಈ ಅವಘಡದಿಂದಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್‌ ಆಗಿ ಟ್ರಾಫಿಕ್‌ ಜಾಮ್‌ ಉಂಟಾಯಿತು ಹೆಬ್ಬಾಳದಿಂದ ರಾಮಮೂರ್ತಿನಗರದವರೆಗೆ ಸತತ 1 ಗಂಟೆಗಳ ಕಾಲ ವಾಹನಗಳು ನಿಂತಲ್ಲೇ ನಿಂತು ಪ್ರಯಾಣಿಕರು ಪರದಾಡುವಂತಾಯಿತು.ಕೆಲ ಬೈಕ್‌ ಸವಾರರು ಲಾರಿ ಕೆಳಗೆ ನುಗ್ಗಿಸಿ ಮುಂದೆ ಸಾಗುತ್ತಿದ್ದರು.

ಸ್ಥಳಕ್ಕೆ ಬಂದ ಹೆಬ್ಬಾಳ ಸಂಚಾರಿ ಪೊಲೀಸರು ಎರಡು ಜೆಸಿಬಿ,ಕ್ರೇನ್‌ ಬಳಸಿ ಲಾರಿಯನ್ನು ಪಕ್ಕಕ್ಕೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ 10 ಚಕ್ರದ ಖಾಲಿ ಲಾರಿ ನಗರದಿಂದ ಬಳ್ಳಾರಿಯ ಹೊಸಪೇಟೆಗೆ ಹೋಗುತ್ತಿತ್ತು,ಅಪಘಾತದಿಂದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಮೆಟ್ರೋ ಅಧಿಕಾರಿಗಳು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Latest News