Friday, May 3, 2024
Homeಬೆಂಗಳೂರುಬಾಗಿಲಿಗೆ ಬಂತು ಸರ್ಕಾರ ಸೇವೆಗೆ ನಾಳೆ ಚಾಲನೆ..

ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ನಾಳೆ ಚಾಲನೆ..

ಬೆಂಗಳೂರು,ಜ.2- ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆ ಯಲ್ಲಿ ನಾಳೆ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು ಮತ್ತು ಕುಂದು- ಕೊರತೆಗಳನ್ನು ಆಲಿಸುವ ಸಲುವಾಗಿ ಈ ಕಾರ್ಯಕ್ರಮ ನಡೆಸಲಾಗುತ್ತಿದೆ.

ನಾಗರಿಕರು ಸರ್ಕಾರಿ ಕಛೇರಿಗಳಿಗೆ ಬರುವ ಬದಲು ಅವರ ಮನೆ ಬಾಗಿಲಲ್ಲೇ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ 28 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ವಲಯವಾರು 2 ಅಥವಾ 3 ವಿಧಾನಸಭಾ ಕ್ಷೇತ್ರಗಳನ್ನು ಒಟ್ಟುಗೂಡಿಸಿ ಸದರಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.

ಅದರಂತೆ, ಮೊದಲನೇ ಹಂತದಲ್ಲಿ ಮಹದೇವಪುರ, ಯಲಹಂಕ ಹಾಗೂ ಪೂರ್ವ ವಲಯ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಎರಡನೇ ಹಂತದಲ್ಲಿ ಉಳಿದ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮವನ್ನು ನಡೆಸಲಾಗುವುದು. ನಾಗರಿಕರು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ತಮ್ಮ ಅಹವಾಲು ಮತ್ತು ಸಮಸ್ಯೆಗಳನ್ನು ನಿವೇದಿಸಿಕೊಳ್ಳಬಹುದಾಗಿದ್ದು, ನಾಗರಿಕರಿಗೆ ಆಸನಗಳ ವ್ಯವಸ್ಥೆ, ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಹಾಗೂ ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿರುತ್ತದೆ. ಅಲ್ಲದೆ ವಿದ್ಯುತ್, ಜನರೇಟರ್ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿರುತ್ತದೆ.

ಕೆಎಸ್ ಡಿಎಲ್: ಮಾರ್ಜಕಗಳ ಮಾರಾಟದಲ್ಲಿ 40 ವರ್ಷಗಳಲ್ಲೇ ದಾಖಲೆ ವಹಿವಾಟು!

ಸಿಬ್ಬಂದಿಗಳಿಗೆ ತರಬೇತಿ:
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಬಂದಂತಹ ದೂರುಗಳನ್ನು ಸಮಗ್ರ ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ವ್ಯವಸ್ಥೆಗಳನ್ನು ಸಾಫ್ಟ್‍ವೇರ್‍ನಲ್ಲಿ ದಾಖಲಿಸಲು ಪಾಲಿಕೆ ಸಿಬ್ಬಂದಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ನಾಗರಿಕರ ಸಂಪೂರ್ಣ ವಿವರ ಹಾಗೂ ನಾಗರಿಕರಿಂದ ಬಂದಂತಹ ದೂರುಗಳು ಯಾವ ಇಲಾಖೆಗೆ ಸಂಬಂಧಿಸಿದ್ದು ಎಂಬುದನ್ನು ದಾಖಲಿಸಲು ವೈ-ಫೈ, ಗಣಕಯಂತ್ರ, ಪ್ರಿಂಟರ್ ಹಾಗೂ ಸ್ಕ್ಯಾನರ್ ಗಳ ವ್ಯವಸೆಯೊಂದಿಗೆ 15 ಕೌಂಟರ್ ಗಳನ್ನು ಸ್ಥಾಪಿಸಲಾಗಿರುತ್ತದೆ.

ಹೆಲ್ಪ ಡೆಸ್ಕ್ ನಿರ್ಮಾಣ: ಕಾರ್ಯಕ್ರಮದ ಸ್ಥಳದಲ್ಲಿ ನಾಗರಿಕರಿಗೆ ಅನುಕೂಲವಾಗಲು ಸಹಾಯ ಕೇಂದ್ರ (ಹೆಲ್ಪ ಡೆಸ್ಕ್) ಅನ್ನು ಸ್ಥಾಪಿಸಲಾಗಿರುತ್ತದೆ. ಅಲ್ಲದೆ ನಾಗರಿಕರಿಗೆ ಮಾಹಿತಿ ಒದಗಿಸುವ ನಾಮಫಲಕ (ಸೈನೇಜï)ಗಳನ್ನು ಸಹ ಅಳವಡಿಸಲಾಗಿರುತ್ತದೆ.

ನಾಗರಿಕರಿಗೆ ಟೋಕನ್ ವ್ಯವಸ್ಥೆ: ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದಲ್ಲಿ ನಾಗರಿಕರು ಅಹವಾಲುಗಳನ್ನು ನೀಡಲು ಅನುವಾಗಲೆಂದು ಟೋಕನ್ ಗಳನ್ನು ಪಡೆಯಲು 10 ಕೌಂಟರ್ ಗಳ ವ್ಯವಸ್ಥೆ ಮಾಡಲಾಗುತ್ತದೆ. ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ನೇರವಾಗಿ ಭೇಟಿಯಾಗಲು ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆಯಾ ಕ್ಷೇತ್ರದ ಶಾಸಕರನ್ನೂ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ಒಂದೇ ಸೂರಿನಡಿ ವಿವಿಧ ಇಲಾಖೆಗಳು: ನಾಗರಿಕರ ಸಮಸ್ಯೆಗಳನ್ನು ಒಂದೇ ಸೂರಿನಡಿ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಮುಖ ಇಲಾಖೆಗಳಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಬಿವೃದ್ಧಿ ಪ್ರಾಧಿಕಾರ, ಬೆಸ್ಕಾಂ, ಜಲಮಂಡಳಿ, ಬಿಎಂಆರ್‍ಸಿಎಲ(ಮೆಟ್ರೋ), ಕೊಳಗೇರಿ ಅಭಿವೃದ್ಧಿ ಮಂಡಳಿ, ಪೊಲೀಸ್ ಇಲಾಖೆ, ಬಿಎಂಟಿಸಿ, ಕಂದಾಯ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಉಪಸ್ಥಿತರಿರಲಿದ್ದಾರೆ.

RELATED ARTICLES

Latest News