ಮುಂದಿನ ಕೋವಿಡ್ ಸಮಸ್ಯೆಗಳನ್ನು ಎದುರಿಸಲು ಸರ್ಕಾರ ಸನ್ನದ್ಧ: ಸಿಎಂ ಬೊಮ್ಮಾಯಿ

ಮೈಸೂರು, ಡಿ. 27- ಮುಂಬರುವ ಕೋವಿಡ್ ನ ಸಂಭಾವ್ಯ ಮೂರನೆ ಅಲೆಯನ್ನು ಎದರಿಸಲು ಸರ್ಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜೆ.ಎಸ್.ಎಸ್ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿದ್ದ 13 ಕೆ.ಎಲï. ಸಾಮಾಥ್ರ್ಯದ ಆಕ್ಸಿಜನ್ ಟ್ಯಾಂಕ್ ಅನ್ನು ಹಾಗೂ 1 ಸಾವಿರ ಕೆ.ಎಲ್ ಸಾಮಾಥ್ರ್ಯದ ಆಕ್ಸಿಜನ್ ಜನರೆಟರ್ ಅನ್ನು ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.

ಈಗಾಗಲೇ ಹೊಸ ಐಸಿಯುಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ.ಕಳೆದ ವರ್ಷ ಹಾಕಲಾಗಿದ್ದ ಆಕ್ಸಿಜನ್ ಪ್ಲಾಂಟ್ ಅನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಔಷಗಳನ್ನು ತಯಾರಿಸಿಕೊಳ್ಳಲಾಗಿದೆ. ಮೊದಲ ಡೋಸ್ ವ್ಯಾಕ್ಸಿನೇಷನ್ ಶೇ.97ರಷ್ಟಾಗಿದ್ದು, ಎರಡನೆ ಡೋಸ್ ವ್ಯಾಕ್ಸಿನೇಷನ್ ಶೇ.76 ರಷ್ಟಾಗಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ಇದೊಂದು ದಾಖಲೆ ಎಂದು ಹೇಳಿದರು.

ವ್ಯಾಕ್ಸಿನೇಷನ್ ಶೇ.100ರಷ್ಟು ಆದರೆ ಮಾತ್ರ ಕೋವಿಡ್ ನಿಂದ ಪಾರಾಗಬಹುದು. ಇದಕ್ಕಾಗಿ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಾ ಬರುತ್ತಿದೆ. ಇದರ ಜೊತೆಗೆ ಸರ್ಕಾರ ಕಠಿಣ ಕ್ರಮ ಕೈಗೊಳಲಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದರು.

ಅಕ್ಷರ ದಾಸೋಹ, ಅನ್ನ ದಾಸೋಹದ ಜೊತೆಗೂ ಜೆ.ಎಸ್.ಎಸ್. ಸಂಸ್ಥೆ ಆರೋಗ್ಯ ದಾಸೋಹವನ್ನು ನೀಡುತ್ತಿದೆ. ಸರ್ಕಾರಕ್ಕೆ ಕೋವಿಡ್ ಒಂದು ಸವಾಲಾಗಿತ್ತು. ಈ ಸವಾಲನ್ನು ಸರ್ಕಾರದ ಜೊತೆಗೆ ಹಲವಾರು ಸಂಘ ಸಂಸ್ಥೆಗಳು, ಆಸ್ಪತ್ರೆಗಳ ಸಹಕಾರದಿಂದ ಯಶಸ್ವಿಯಾಗಿ ನಿಭಾಯಿಸಲು ಸಾಧ್ಯವಾಗಿದೆ ಎಂದು ಹೇಳಿದರು.

ಮೈಸೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್, ಮಹಾಪೌರರಾದ ಸುನಂದ ಪಾಲನೇತ್ರ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ತನ್ವೀರ್ ಸೇಠ್ ಎಲï.ನಾಗೇಂದ್ರ, ಸಂಸದ ಪ್ರತಾಪ್ ಸಿಂಹ ಹಾಜರಿದ್ದರು.