ಹುಬ್ಬಳ್ಳಿ, ಫೆ.28- 7ನೇ ವೇತನ ಆಯೋಗ ಜಾರಿಗೆ ಸಂಬಂಧಿಸಿದಂತೆ ಮಧ್ಯಂತರ ವರದಿ ಸರ್ಕಾರದ ಕೈ ಸೇರಿದ ತಕ್ಷಣವೇ ಅನುಷ್ಠಾನ ಮಾಡಲು ಸರ್ಕಾರ ಸಿದ್ದವಿದೆ. ಹೀಗಾಗಿ ನೌಕರರು ಪ್ರತಿಭಟನೆ ನಡೆಸಬಾರದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್‍ನಲ್ಲಿ 7ನೇ ವೇತನ ಆಯೋಗ ಜಾರಿಗೆ ಹಣ ತೆಗೆದಿಟ್ಟಿದ್ದೇವೆ. ಈಗಾಗಲೇ ಬಜೆಟ್ ಮೇಲಿನ ಚರ್ಚೆಯಲ್ಲಿ ಉತ್ತರಿಸುವ ವೇಳೆ ನಾನೇ ಸ್ಪಷ್ಟನೆ ನೀಡಿದ್ದೇನೆ. ಹೀಗಾಗಿ ಸರ್ಕಾರಿ ನೌಕರರು ಪ್ರತಿಭಟನೆ ನಡೆಸಬೇಕಾದ ಅಗತ್ಯವಿಲ್ಲ ಎಂದು ಹೇಳಿದರು.
ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಮತ್ತಿತರರ ಜೊತೆ ಸಂಘಟನೆಗಳ ಮುಖಂಡರ ಜೊತೆ ಮಾತುಕತೆ ನಡೆಸಲು ಸಹ ಸೂಚನೆ ಕೊಟ್ಟಿದ್ದೇನೆ. ಅವರ ಬೇಡಿಕೆಗಳನ್ನು ಈಡೇರಿಸಲು ಸಿದ್ದವಿದೆ ಎಂದು ಆಶ್ವಾಸನೆ ನೀಡಿದರು.
ನಾಳೆಯಿಂದ ಸರ್ಕಾರಿ ಕಚೇರಿಗಳು ಬಂದ್..?
ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಚುನಾವಣಾ ಏಜೆಂಟರಂತೆ ವರ್ತಿಸುತ್ತಾರೆ ಎಂಬ ಸಿದ್ಧರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಮೋದಿ ಭೇಟಿಯಿಂದ ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆ. ಮೋದಿ ಅವರು ಬಂದ ಮೇಲೆ ಸಿಗುತ್ತಿರುವ ಜನ ಬೆಂಬಲದಿಂದ ಅವರು ವಿಚಲಿತಗೊಂಡಿದ್ದಾರೆ. ಅನುಭವಿ, ಮಾಜಿ ಸಿಎಂ ಒಬ್ಬರು ಈ ರೀತಿ ಮಾತನಾಡೋದು ಸರಿಯಲ್ಲ. ಹಾಗಾದರೆ ರಾಹುಲ್ ಗಾಂಧಿ ಕಾಂಗ್ರೆಸ್ ಏಜೆಂಟರಾ ಎಂದು ಬೊಮ್ಮಾಯಿ ಪ್ರಶ್ನೆ ಮಾಡಿದರು.
ಹಿಂದೂ ದೇವರುಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದವನಿಗೆ ಬಿತ್ತು ಗೂಸಾ
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ರಾಜಕೀಯ ನಿವೃತ್ತಿ ವಿಚಾರವಾಗಿ ಮಾತನಾಡಿದ ಅವರು, ಎಚ್.ಡಿ.ಕೆ ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಅವರದು ಇನ್ನೂ ನಿವೃತ್ತಿಯಾಗುವ ವಯಸ್ಸಲ್ಲ. ಇನ್ನೂ ಸೇವೆ ಮಾಡಬೇಕಿದೆ. ಚುನಾವಣೆ ಸಂದರ್ಭದಲ್ಲಿ ಇಂಥವೆಲ್ಲ ನಡೆಯುತ್ತಿರುತ್ತದೆ. ಜನ ಪ್ರಬುದ್ಧರಾಗಿದ್ದು, ಎಲ್ಲವನ್ನೂ ಗಮನಿಸುತ್ತಾರೆ. ಚುನಾವಣೆಯಿಂದ ಚುನಾವಣೆಗೆ ಇನ್ನೂ ಪ್ರಬುದ್ಧರಾಗುತ್ತಿದ್ದಾರೆ. ನಾವು ಮಾತನಾಡುವಾಗ ಅದರ ಹಿಂದಿರುವ ಕಲ್ಪನೆಯೂ ಇರಬೇಕು ಎಂದರು.
ಈಗಾಗಲೇ ಪಕ್ಷ ಬಲವರ್ಧನೆ ನಡೆಯುತ್ತಿದೆ. ಮೋದಿ, ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಮತ್ತೆ ಬರುತ್ತಾರೆ. ಪಕ್ಷದ ಬಲವರ್ಧನೆ ದೃಷ್ಟಿಯಿಂದ ಹಲವಾರು ನಾಯಕರು ರಾಜ್ಯಕ್ಕೆ ಬರುತ್ತಾರೆ. ದಾವಣಗೆರೆಯಲ್ಲಿ ಮಾರ್ಚ್ ನಲ್ಲಿ ರಥಯಾತ್ರೆ ಆರಂಭಿಸಲಾಗುವುದು ಎಂದು ಅವರು ಹೇಳಿದರು.
ಬನವಾಸಿಯಲ್ಲಿ ಸಿಎಂ ಗೋ ಬ್ಯಾಕ್ ವಿಚಾರ ನಾಲ್ಕು ಮಂದಿ ಗೋ ಬ್ಯಾಕ್ ಅಂದರೇ ತಲೆಕೆಡಿಸಿಕೊಳ್ಳಲ್ಲ. ಗೋ ಬ್ಯಾಕ್ ಅಭಿಯಾನ ಮಾಮೂಲಿಯಾಗಿದೆ ಎಂದು ಅವರು ಲೇವಡಿ ಮಾಡಿದರು.
ನಾಳೆ ಬಿಜೆಪಿ ವಿಜಯಸಂಕಲ್ಪ ರಥಯಾತ್ರೆಗೆ ಚಾಲನೆ
ಯಡಿಯೂರಪ್ಪ ಜೈಲಿನಲ್ಲಿದ್ದಾಗ ಯಡಿಯೂರಪ್ಪ ಡೈರಿ ಬರೆದ ವಿಚಾರವಾಗಿ ಮಾತನಾಡಿ, ಅವರ ಮಗಳು ಡೈರಿ ಬಿಡುಗಡೆ ಮಾಡುವುದು ನನಗೆ ಗೊತ್ತಿಲ್ಲ ಎಂದ ಅವರು, ಹಿರಿಯ ನಾಯಕರ ಕಾಲಿಗೆ ಬಿದ್ದಿದ್ದರೆ ನಾನೂ ಸಿಎಂ ಆಗುತ್ತಿದ್ದೆ ಎಂಬ ಯತ್ನಾಳ್ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
government, employees, protest, CM Bommai,