ಸರ್ಕಾರಿ ನೌಕರರ ವಿರುದ್ಧ ಎಸ್ಮಾ ಜಾರಿಯಿಲ್ಲ: CM

Social Share

ಬೆಂಗಳೂರು,ಫೆ.28- ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಮುಷ್ಕರ ನಡೆಸಲು ಮುಂದಾಗಿರುವ ಸರ್ಕಾರಿ ನೌಕರರ ವಿರುದ್ಧ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ(ಎಸ್ಮಾ) ಜಾರಿ ಮಾಡುವ ಚಿಂತನೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದರು.

ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಮಸ್ಯೆಗಳಿದ್ದರೂ ಚರ್ಚೆ ಇಲ್ಲವೇ ಕೂತು ಮಾತುಕತೆ ಮೂಲಕ ಬಿಕ್ಕಟ್ಟನ್ನುಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸರ್ಕಾರ ಸಿದ್ದವಿದೆ. ಮುಷ್ಕರ ನಡೆಸಲು ತೀರ್ಮಾನಿಸಿರುವ ನೌಕರರ ವಿರುದ್ಧ ನಾವು ಎಸ್ಮಾ ಕಾಯ್ದೆ ಹಾಕುವಂತಹ ಕಠಿಣ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಪುನರುಚ್ಚರಿಸಿದರು.

ಮುಳ್ಳುಹಂದಿ ಶಿಕಾರಿಗೆ ಹೋದಾಗ ಸುರಂಗದಲ್ಲಿ ಸಿಲುಕು ಇಬ್ಬರ ಸಾವು

7ನೇ ವೇತನ ಆಯೋಗವನ್ನು ಅನುಷ್ಠಾನಗೊಳಿಸಲು ಬಜೆಟ್‍ನಲ್ಲಿ ಹಣವನ್ನು ಮೀಸಲಿಟ್ಟಿದ್ದೇವೆ. ಸರ್ಕಾರದ ನಿವೃತ್ತ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ಸಮಿತಿಯು ಯಾವುದೇ ಕ್ಷಣದಲ್ಲಿ ಮಧ್ಯಂತರ ವರದಿಯನ್ನು ನೀಡಲಿದೆ. ಅದನ್ನು ಸಹ ಅನುಷ್ಠಾನ ಮಾಡಲು ನಾವು ಸಿದ್ದರಿದ್ದೇವೆ ಎಂದು ಹೇಳಿದರು.

government, employees, strike ESMA, CM Bommai,

Articles You Might Like

Share This Article