Saturday, September 14, 2024
Homeರಾಜ್ಯರಾಜ್ಯದಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ : ಸಚಿವ ಕೃಷ್ಣಭೈರೇಗೌಡ

ರಾಜ್ಯದಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ : ಸಚಿವ ಕೃಷ್ಣಭೈರೇಗೌಡ

ಬೆಂಗಳೂರು,ಆ.15- ರಾಜ್ಯದಲ್ಲಿ ಸರ್ಕಾರಿ ಭೂಮಿ ಒತ್ತುವರಿಯನ್ನು ತೆರವುಗೊಳಿಸಲು ಕಾರ್ಯಾಚರಣೆ ಆರಂಭಿಸುವುದಾಗಿ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ವಿವರಿಸಿದರು.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಅವರು, ರಾಜ್ಯದಲ್ಲಿ ಒಟ್ಟು 1.40 ಕೋಟಿ ಎಕರೆ ಸರ್ಕಾರಿ ಜಮೀನು ಇದ್ದು, ಲ್ಯಾಂಡ್ ಬೀಟ್ ಮೊಬೈಲ್ ತಂತ್ರಾಂಶದ ಮೂಲಕ ಒಟ್ಟು 91,000 ಎಕರೆ ಜಮೀನುಗಳು ಒತ್ತುವರಿಯಾಗಿರುವುದನ್ನು ಗುರುತಿಸಲಾಗಿದೆ, 14.32 ಲಕ್ಷ ಸರ್ಕಾರಿ ಜಮೀನುಗಳ ಸ್ಥಳ ಪರಿಶೀಲನೆಗೆ ಸೂಚಿಸಿದ್ದು ಈ ಪೈಕಿ 13.04 ಲಕ್ಷ ಜಮೀನುಗಳಿಗೆ ಗ್ರಾಮಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದರು.

ಇದರಲ್ಲಿ ಕಂದಾಯ ಇಲಾಖೆಯ 1.93 ಲಕ್ಷ ಜಮೀನುಗಳು ಇದ್ದು, ವಿವಿಧ 20 ಇಲಾಖೆಗಳ ಜಮೀನುಗಳನ್ನೂ ಗುರುತಿಸಲಾಗಿದೆ. ಕೆರೆ ಮತ್ತು ಸಶಾನಗಳ ಹೆಚ್ಚುವರಿ ಜವಾಬ್ದಾರಿ ತೆಗೆದುಕೊಂಡು, ಸಮೀಕ್ಷೆ ನಡೆಸಲಾಗಿದೆ. ಈಗಾಗಲೇ ಬಳ್ಳಾರಿ ಜಿಲ್ಲೆಯಲ್ಲಿ ಶೇ.80.27 ರಷ್ಟು ಅಂದರೆ 55.638 ಸರ್ಕಾರಿ ಜಮೀನುಗಳ ಪೈಕಿ 48,786 ಆಸ್ತಿಗಳನ್ನು ಲ್ಯಾಂಡ್ ಬೀಟ್ ತಂತ್ರಾಂಶಕ್ಕೆ ಒಳಪಡಿಸಲಾಗಿದೆ. ಆಗಸ್ಟ್ ತಿಂಗಳಿನಿಂದ ಸರ್ವೇಯರ್ ಲಭ್ಯತೆ ನೋಡಿಕೊಂಡು ಒತ್ತುವರಿ ತೆರವು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಭೂ ಸುರಕ್ಷಾ ಕರ್ಯಕ್ರಮದಡಿ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಇಂಡೆಕ್‌್ಸ ಮಾಡಿ ಡಿಜಿಟಲೀಕರಣ ಮಾಡಲಾಗಿದೆ. ಈ ವರೆಗೆ ಒಟ್ಟು 4,43,27,379 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ. 31 ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳಲಾಗಿದ್ದು, ಉಳಿದ ತಾಲೂಕುಗಳಲ್ಲೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಒಂದು ವರ್ಷದೊಳಗೆ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಇದರಿಂದ ಸರ್ವಜನಿಕರಿಗೆ ದಾಖಲೆಗಳನ್ನು ಒದಗಿಸುವುದರ ಜೊತೆಗೆ, ದಾಖಲೆಗಳ ತಿರುಚುವಿಕೆ, ದಾಖಲೆಗಳ ನಾಪತ್ತೆ ಮೊದಲಾದವುಗಳನ್ನು ತಡೆಯಬಹುದಾಗಿದೆ ಎಂದರು.

ಜಮೀನು ಮಾರಾಟದಲ್ಲಿ ವಂಚನೆ ತಡೆಯಲು ಪಹಣಿ-ಆಧಾರ್ ಜೋಡಣೆ ಕೈಗೊಳ್ಳಲಾಗಿದೆ, ಒಬ್ಬರು ಮೂರ್ನಾಲ್ಕು ದಶಕಗಳಿಂದ ಜಮೀನು ಸಾಗುವಳಿ ಮಾಡುತ್ತಿದ್ದು, ಅದಕ್ಕೆ ಬೇರೆ ವ್ಯಕ್ತಿಗಳು ಭೂ ಮಂಜೂರಾತಿ ಮಾಡಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆತಕ ವ್ಯಕ್ತಪಡಿಸಿದರು.

ರಾಷ್ಟ್ರೀಯ ಐಕ್ಯತೆಯನ್ನು ಕಾಪಾಡುವಂತಹ ಕಾರ್ಯಗಳಲ್ಲಿ ದುಷ್ಠಶಕ್ತಿಗಳ ದಮನಕ್ಕೆ ಹಾಗೂ ರಾಷ್ಟದ ರಕ್ಷಣೆಗೆ, ದೇಶದ ಸಮಗ್ರತೆಗೆ ಎಲ್ಲರೂ ಒಟ್ಟಾಗಿ ಶ್ರಮಿಸುವುದು ನಮೆಲ್ಲರ ಕರ್ತವ್ಯವಾಗಿದೆ ಇಂದು ತಿಳಿಸುತ್ತಾ ಮತ್ತೊಮೆ ಸರ್ವರಿಗೂ 78ನೇ ಸ್ವಾತಂತೋತ್ಸವದ ಹರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಆ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸಮಾಜದ ಸಂಪತ್ತು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ಕಟಿಬದ್ಧವಾಗಿದೆ. ಬಡವರು ದುಡಿದ ಹಣವನ್ನು ಶ್ರೀಮಂತರ ಜೇಬಿಗೆ ತುರಕದೆ ಅವರ ಹಣವನ್ನು ಅವರಿಗೇ ನೀಡುವ ಸಲುವಾಗಿ ಇಂದು ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ 5 ಗ್ಯಾರಂಟಿಗಳನು ಜಾರಿಗೆ ತಂದಿದೆ.
ಹಸಿವು ಮುಕ್ತ ರ್ನಾಟಕ ಪ್ರತಿ ಲಾನುಭವಿಗೆ ಪ್ರತಿ ತಿಂಗಳು 10 ಕೆಜಿ. ಆಹಾರ ಧಾನ್ಯ ಉಚಿತ -5 ಕೆಜಿ. ಅಕ್ಕಿ ಬದಲಿಗೆ 170/- ರೂ. ಹಣವನ್ನು ಡಿಬಿಟಿ ಮೂಲಕ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ.

RELATED ARTICLES

Latest News