Friday, November 22, 2024
Homeರಾಜ್ಯರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ : ಹೆಚ್‌ಡಿಕೆ

ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ : ಹೆಚ್‌ಡಿಕೆ

ಬೆಳಗಾವಿ,ಡಿ.6- ಸಂಕಷ್ಟದಲ್ಲಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯಸ್ಮರಣೆ ಅಂಗವಾಗಿ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯ ಸರ್ಕಾರದ ವೈಫಲ್ಯ, ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯ ಬಗ್ಗೆ ಸದನದಲ್ಲಿ ಚರ್ಚಿಸಲಾಗುವುದು ಎಂದರು. ರೈತರಿಗೆ ಯಾವುದೇ ರೀತಿಯ ಸ್ಪಂದನೆ ರಾಜ್ಯ ಸರ್ಕಾರದಿಂದ ಸಿಗುತ್ತಿಲ್ಲ. ರಾಜ್ಯದಲ್ಲಿ ಆರ್ಥಿಕ ಸಮಸ್ಯೆಗಳಿಲ್ಲ. ನಾಡಿನ ಜನರು ತೆರಿಗೆ ಕಟ್ಟುತ್ತಿದ್ದರು. ಸಾಕಷ್ಟು ತೆರಿಗೆ ಸಂಗ್ರಹವೂ ಆಗುತ್ತಿದೆ ಎಂದ ಅವರು, ಹಣದ ಕೊರತೆ ಇದ್ದರೆ ರಾಜ್ಯ ಸರ್ಕಾರಕ್ಕೆ ಏಕೆ ನಡೆಸಬೇಕು ಎಂದು ಅವರು ಪ್ರಶ್ನಿಸಿದರು.

ಗಂಗಾಕಲ್ಯಾಣ ಬೋರ್‌ವೆಲ್‌ ಮಂಜೂರಾತಿ ಆಗುತ್ತಿಲ್ಲ : ಪಕ್ಷಾತೀತ ಆಕ್ಷೇಪ

ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯ ಹಿನ್ನಲೆಯಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದು, ಕೇಂದ್ರ ಸರ್ಕಾರ ಬರ ಪರಿಹಾರ ಕಾರ್ಯಗಳಿಗೆ ಆರ್ಥಿಕ ನೆರವು ನೀಡುವಂತೆ ಕೋರಲಾಗಿದೆ ಎಂದು ಹೇಳಿದರು. ಅಸಮಾನತೆ ಹೋಗಲಾಡಿಸಲು ಅಂಬೇಡ್ಕರ್ ಅವರು ನೀಡಿರುವ ಕೊಡುಗೆ ಶಾಶ್ವತವಾಗಿದೆ. ದನಿ ಇಲ್ಲದವರಿಗೆ ಧ್ವನಿಯನ್ನು ನೀಡಿದ್ದಾರೆ ಎಂದು ಸ್ಮರಿಸಿದರು.

ಸಮಾಜದಲ್ಲಿರುವ ಅಸಮಾನತೆ ಹೋಗಲಾಡಿಸಲು ಪ್ರತಿಯೊಬ್ಬರು ಕ್ಷಮಿಸಬೇಕು. ಆ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಬೇಕು ಎಂದರು.

RELATED ARTICLES

Latest News