Saturday, April 13, 2024
Homeಇದೀಗ ಬಂದ ಸುದ್ದಿಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ

ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ

ಬೆಂಗಳೂರು,ಏ.4- ರಾಜ್ಯಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಲೋಕೇಶ್ ಭರಮಪ್ಪ ಜಗಲಸಾರ್ ಅವರನ್ನು ಬೆಂಗಳೂರು ನಗರ ದಕ್ಷಿಣ ವಲಯದ ಉಪಪೊಲೀಸ್ ಆಯುಕ್ತರ ಹುದ್ದೆಗೆ ವರ್ಗಾಯಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.

ಮೈಸೂರಿನಲ್ಲಿರುವ ಪೊಲೀಸ್ ತರಬೇತಿ ಶಾಲೆಯ ಎಸ್‍ಪಿಯಾಗಿರುವ ಗೀತಾ ಎನ್.ಎಸ್. ಅವರನ್ನು ಮೈಸೂರಿನಲ್ಲಿರುವ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕ ಹುದ್ದೆಯ ಸಮವರ್ತಿತ ಜವಾಬ್ದಾರಿಯನ್ನು ವಹಿಸಲಾಗಿದೆ.

ಡಾ.ಕೋನ ವಂಶಿ ಕೃಷ್ಣ ಅವರನ್ನು ಬೆಂಗಳೂರು ನಗರ ಪೂರ್ವ ವಲಯದ ಉಪಪೊಲೀಸ್ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಕರ್ನಾಟಕ ಲೋಕಾಯುಕ್ತ ಎಸ್‍ಪಿ ಹುದ್ದೆಯ ಸಮವರ್ತಿತ ಜವಾಬ್ದಾರಿಯನ್ನು ವಹಿಸಲಾಗಿದೆ. ಈ ವರ್ಗಾವಣೆಯನ್ನು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಡಲಾಗಿದೆ.

RELATED ARTICLES

Latest News