ಮನೆ ಬಾಗಿಲಿಗೆ ತಲುಪಲಿವೆ ಸರ್ಕಾರದ ಯೋಜನೆಗಳು : ಸಚಿವ ಆರ್.ಅಶೋಕ್

Social Share

ದಾವಣಗೆರೆ ಮಾ.1- ಸರ್ಕಾರದ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಲು ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ ಈ ಮೂಲಕ ಇಡೀ ಜಿಲ್ಲಾಡಳಿತ ಆಡಳಿತ ಯಂತ್ರವನ್ನ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಮೂಲಕ ಜನರ ಸಂಕಷ್ಟಗಳಿಗೆ ಮಿಡಿಯುವ ಜನಸ್ನೇಹಿ ಸರ್ಕಾರ ನಮ್ಮದಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.
ಹೊನ್ನಾಳಿ ಪಟ್ಟಣದ ಅಂಗಳ ಮೈದಾನದಲ್ಲಿ ಹಮ್ಮಿಕೊಂಡಿದ್ದ ನೂತನ ಕಂದಾಯ ಉಪವಿಭಾಗದ ಉಪವಿಭಾಗಾಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭ ಹಾಗೂ ಸಂಜೀವಿನಿ ಯೋಜನೆ ಅಡಿಯಲ್ಲಿ ಸ್ತ್ರೀಶಕ್ತಿ ಸಂಘಗಳಿಗೆ ನಿಧಿ ಚೆಕ್ ವಿತರಣೆ ಹಾಗೂ ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ 1035 ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಘೋಷಣೆ ಮಾಡಲಾಗಿದೆ.ದಾವಣಗೆರೆ ಜಿಲ್ಲೆಯಲ್ಲಿ 84 ಜನವಸತಿ ಪ್ರದೇಶಗಳ 39 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿದ್ದು ಅದರಲ್ಲಿ ಹೊನ್ನಾಳಿ ತಾಲ್ಲೂಕಿನಲ್ಲಿ 5 ಗ್ರಾಮಗಳು ಕೂಡ ಸೇರ್ಪಡೆಯಾಗಿವೆ. ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡುವುದರಿಂದ ಆ ಗ್ರಾಮಕ್ಕೆ ಸರ್ಕಾರದ ಅನೇಕ ಸೌಲಭ್ಯ ಮತ್ತು ಅನುದಾನಗಳು ದೊರೆಯುತ್ತವೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಮಾತನಾಡಿ , ನೂತನ ಉಪವಿಭಾಗಾಧಿಕಾರಿ ಕಚೇರಿಯ ವ್ಯಾಪ್ತಿಯ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ರೈತರಿಗೆ ಪಹಣಿ, ಮ್ಯುಟೇಶನ್, ಪೌತಿಖಾತೆಗಳ ಸಮಸ್ಯೆ ಪರಿಹರಿಸುವ ಕಾರ್ಯಗಳು ಕಚೇರಿಯಿಂದ ನಡೆಯಲಿ. ಅಧಿಕಾರಿಗಳು ಪ್ರಾಮಾಣಿಕವಾಗಿ ಜನರ ಕಷÀ್ಟಗಳಿಗೆ ಸ್ಪಂದಿಸುವಂತಾಗಬೇಕು, ಜಿಲ್ಲೆಯ ಕಂದಾಯ ಇಲಾಖೆಯಲ್ಲಿ 20 ಸಾವಿರ ಕಡತಗಳು ಬಾಕಿ ಇದ್ದು ವಿಲೇವಾರಿಗೆ ಕಡತಯಜ್ಞ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ ಎಂದು ಹೇಳಿದರು.
ಶಾಸಕ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಹೊನ್ನಾಳಿ, ನ್ಯಾಮತಿ, ಚನ್ನಗಿರಿ ತಾಲ್ಲೂಕುಗಳನ್ನು ಒಳಗೊಂ ಡಂತೆ ಜನರು ದಾವಣಗೆರೆಯ ಉಪವಿಭಾಗಾಧಿಕಾರಿ ಕಚೇರಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಹೊನ್ನಾಳಿ ಪಟ್ಟಣದಲ್ಲಿ ಉವಿಭಾಗಾಧಿಕಾರಿ ಕಚೇರಿಯನ್ನು ಉದ್ಘಾಟಿಸಲಾಗಿದೆ. ಕಚೇರಿಯು 8 ತಿಂಗಳುಗಳ ಹಿಂದೆಯೇ ಕಂದಾಯ ಸಚಿವರಿಂದ ಮಂಜೂರಾಗಿತ್ತು, ಸಣ್ಣಪುಟ್ಟ ತೊಡಕುಗಳನ್ನು ನಿವಾರಿಸಿ ಇಂದು ಅಧಿಕೃತವಾಗಿ ಉದ್ಘಾಟಿಸ ಲಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ರೈತರು ಹಾಗೂ ಜನಸಾಮಾನ್ಯರು ಸಣ್ಣಪುಟ್ಟ ಕೆಲಸಗಳಿಗಾಗಿ ನೂರಾರು ರೂಪಾಯಿ ಖರ್ಚು ಮಾಡಿಕೊಂಡು ದಾವಣಗೆರೆಗೆ ಬರಬೇಕಾಗಿತ್ತು ಅದನ್ನು ತಪ್ಪಿಸುವ ಉದ್ದೇಶದಿಂದ ಹೊನ್ನಾಳಿ, ನ್ಯಾಮತಿ, ಚನ್ನಗಿರಿ ತಾಲ್ಲೂಕುಗಳನ್ನು ಒಳಗೊಂಡಂತೆ ಉಪವಿಭಾಗಾಧಿಕಾರಿ ಕಚೇರಿ ಉದ್ಘಾಟನೆ ಮಾಡಲಾಗಿದೆ. ಜನರಿಗೆ ಪೂರಕವಾಗಿ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶವನ್ನು ಜಿಲ್ಲಾಡಳಿತ ಹೊಂದಿದೆ ಎಂದರು.
ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್ ಹಾಗೂ ಡಿ.ಎಸ್ ಅರುಣ್ ಮಾತನಾಡಿದರು. ಕಾರ್ಯಕ್ರಮದಲ್ಲಿ 1576 ವಿವಿಧ ಫಲಾನುಭವಿಗಳಿಗೆ ಮಾಶಾಸನ ಮಂಜೂರಾತಿ ಪತ್ರಗಳನ್ನು ನೀಡಲಾಯಿತು. ಹಾಗೂ ವಿವಿಧ ಯೋಜನೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.
ನೂತನ ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷÀ್ಯಂತ್, ದಾವಣಗೆರೆ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಜಿಲ್ಲಾ ಸಮಾಜ ಕಲ್ಯಾಣ ಅಕಾರಿ ರೇಷ್ಮಾ ಕೌಸರ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ನಿರ್ದೇಶಕ ಪಿ.ರಮೇಶ್, ಹೊನ್ನಾಳಿ ಡಿವೈಎಸ್ಪಿ ಸಂತೋಷ್, ಪುರಸಭೆ ಅಧ್ಯಕ್ಷ ಬಾಬು ಮತ್ತಿತರರು ಉಪಸ್ಥಿತರಿದ್ದರು.

Articles You Might Like

Share This Article