Thursday, September 4, 2025
Homeರಾಜ್ಯಕಾಂಗ್ರೆಸ್‌‍ ಪಕ್ಷದ ಕಚೇರಿಗಳಿಗೆ ಸರ್ಕಾರಿ ನಿವೇಶನ: ಸಂಪುಟದಲ್ಲಿ ಚರ್ಚೆ

ಕಾಂಗ್ರೆಸ್‌‍ ಪಕ್ಷದ ಕಚೇರಿಗಳಿಗೆ ಸರ್ಕಾರಿ ನಿವೇಶನ: ಸಂಪುಟದಲ್ಲಿ ಚರ್ಚೆ

ಬೆಂಗಳೂರು, ಸೆ 4- ರಾಜ್ಯದ ಹಲವು ಭಾಗಗಳಲ್ಲಿ ಕಾಂಗ್ರೆಸ್‌‍ ಪಕ್ಷದ ಕಚೇರಿಗೆ ಸರ್ಕಾರಿ ನಿವೇಶನಗಳನ್ನು ಹಂಚಿಕೆ ಮಾಡುವ ಬಗ್ಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟಸಭೆಯಲ್ಲಿ ಮೂರು ಕಡೆಗಳಲ್ಲಿ ನಿವೇಶನ ಹಂಚಿಕೆ ಬಗ್ಗೆ ಸಮಾಲೋಚನೆಗಳಾಗಿವೆ.

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರವು ಕೊಪ್ಪಳ ಗ್ರಾಮದಲ್ಲಿ 12 ಎಕರೆ-28 ಗುಂಟೆ ವಿಸ್ತೀರ್ಣದ ಜಮೀನಿನಲ್ಲಿ ರಚಿಸಿರುವ ಬಡಾವಣೆಯಲ್ಲಿನ 3749.85 ಚ.ಮೀ. ವಿಸ್ತೀರ್ಣದ ನಾಗರಿಕ ಸೌಲಭ್ಯ ನಿವೇಶನವನ್ನು ಕಾಂಗ್ರೆಸ್‌‍ ಭವನ ಟ್ರಸ್ಟ್‌, ಬೆಂಗಳೂರು ಇವರಿಗೆ ಕಚೇರಿ ಕಟ್ಟಡದ ನಿರ್ಮಾಣದ ಉದ್ದೇಶಕ್ಕಾಗಿ 30 ವರ್ಷಗಳ ಅವಧಿಗೆ ಗುತ್ತಿಗೆ ನೀಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಬಾದಾಮಿ ಪಟ್ಟಣದಲ್ಲಿ ಕಾಂಗ್ರೆಸ್‌‍ ಭವನ ಕಟ್ಟಡ ನಿರ್ಮಾಣಕ್ಕಾಗಿ ಬಾದಾಮಿ ಪಟ್ಟಣದಲ್ಲಿ ಬಾದಾಮಿ ನಗರ ಯೋಜನಾ ಪ್ರಾಧಿಕಾರದ 613 ಚ.ಮೀ. ವಿಸ್ತೀರ್ಣದ ನಾಗರಿಕ ಸೌಲಭ್ಯ ನಿವೇಶನವನ್ನು ಕಾಂಗ್ರೆಸ್‌‍ ಭವನ ಬೆಂಗಳೂರು ಇವರಿಗೆ ಹಂಚಿಕೆ ಮಾಡುವ ಹಾಗೂ ಸದರಿ ಬಾಕಿ ಮೊತ್ತ ಪಾವತಿಸುವುದರಿಂದ ವಿನಾಯಿತಿ ನೀಡುವ ಪ್ರಸ್ತಾವನೆ ಇತ್ತು.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲ್ಲೂಕು ಕಸಬಾ ಗ್ರಾಮದ ಸ.ನಂ. 124/7ಎ2ರಲ್ಲಿ 0.08 ಎಕರೆ (8 ಸೆಂಟ್‌್ಸ) ಜಮೀನನ್ನು ಕಾಂಗ್ರೆಸ್‌‍ ಭವನ ಟ್ರಸ್ಟ್‌ ನಿರ್ಮಾಣದ ಉದ್ದೇಶಕ್ಕೆ ಕಾಂಗ್ರೆಸ್‌‍ ಭವನ ಟ್ರಸ್ಟ್‌, ಬೆಂಗಳೂರು ಇವರಿಗೆ ಮಂಜೂರು ಮಾಡುವ ಪ್ರಸ್ತಾವನೆ ಇತ್ತು. ವಿಜಯಪುರ ಜಿಲ್ಲೆಯ ಸಿಂದಗಿ ಪುರಸಭೆಯನ್ನು ನಗರಸಭೆಯನ್ನಾಗಿ, ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮಾ ಪುರಸಭೆಯನ್ನು ನಗರ ಸಭೆಯನ್ನಾಗಿ, ಬೀದರ್‌ ಜಿಲ್ಲೆಯ ಹುಮನಾಬಾದ್‌ ಪುರಸಭೆಯನ್ನು ನಗರ ಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಗಳು ಸಂಪುಟದ ಮುಂದಿದ್ದವು.

ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರು ವಾಸಿಸುತ್ತಿರುವ ನಗರ ಪ್ರದೇಶಗಳಲ್ಲಿನ ಹಿಂದುಳಿದ ಕಾಲೋನಿಗಳನ್ನು ಮಾದರಿ ಕಾಲೋನಿಗಳನ್ನಾಗಿ ಅಭಿವೃದ್ಧಿ ಪಡಿಸಲು 398.00 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಚರ್ಚೆಯಾಗಿದೆ.

817 ನಗರ ಆರೋಗ್ಯ ಮತ್ತು ಕ್ಷೇಮ ಕೇಂದ್ರ – ನಮ ಕ್ಲಿನಿಕ್‌ಗಳಿಗೆ ಅವಶ್ಯವಿರುವ 78.43 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಔಷಧ ಖರೀದಿಸಲು ಮತ್ತು ಸರಬರಾಜು ಮಾಡಲು ಆಡಳಿತಾತಕ ಅನುಮೋದನೆ ನೀಡುವ ಪ್ರಸ್ತಾವನೆ ಇತ್ತು. ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ ನೀಡುವ ಬಗ್ಗೆಯೂ ಚರ್ಚೆಗಳಾಗಿವೆ.
ತಡೆಗಟ್ಟಬಹುದಾದ ತಾಯಂದಿರ ಮರಣವನ್ನು ಶೂನ್ಯಕ್ಕೆ ಇಳಿಸುವ ಅಭಿಯಾನ-ತಾಯಂದಿರ ಮರಣ ಅನುಪಾತ (ಎಂಎಂಆರ್‌) ಕಡಿತಗೊಳಿಸಲು ತಯಾರಿಸಿರುವ 139.53 ಕೋಟಿ ರೂ.ಗಳ ಸಮಗ್ರ ಕ್ರಿಯಾ ಯೋಜನೆಗೆ ಆಡಳಿತಾತಕ ಅನುಮೋದನೆ ನೀಡಲು ಚರ್ಚಿಸಲಾಗಿದೆ.

ರಾಜ್ಯದಲ್ಲಿರುವ ಆಯ್ದ ಸರ್ಕಾರಿ ಶಾಲೆಗಳನ್ನು (ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 50 ಶಾಲೆಗಳನ್ನು ಹಾಗೂ ರಾಜ್ಯದ ಇತರೆಡೆ 500 ಶಾಲೆಗಳನ್ನು) ಕರ್ನಾಟಕ ಪಬ್ಲಿಕ್‌ ಶಾಲೆಗಳಾಗಿ ಉನ್ನತೀಕರಿಸಿ, ಸುಮಾರಿಂದ 2 ರಿಂದ 4 ಕೋಟಿ ರೂ.ಗಳ ವವರೆಗೂ ಅನುದಾನ ನೀಡಿ, ಹೆಚ್ಚುವರಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಚರ್ಚಿಸಲಾಗಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪದವಿ ಮತ್ತು ಟಿಇಟಿ ದೃಢೀಕರಣ ಪಡೆದಿರುವ ಪ್ರಾಥಮಿಕ ಶಾಲಾ ಶಿಕ್ಷಕರುಗಳಿಗೆ ಸಂಚಿತ ಪರಿಣಾಮ ಹೊಂದಿಲ್ಲದಂತೆ ಒಂದು ಬಾರಿಯ ವೇತನ ಬಡ್ತಿಯನ್ನು ನೀಡಲು 6 ಮತ್ತು 7ನೇ ತರಗತಿಗಳಿಗೆ ಬೋಧಿಸಲು ಅವಕಾಶ ನೀಡಲು ಮತ್ತು ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡುವ ಬಗ್ಗೆಯೂ ವಿಶ್ಲೇಷಿಸಲಾಗಿದೆ.

ಶುಚಿ ಕಾರ್ಯಕ್ರಮದಡಿ ಸ್ಯಾನಿಟರಿ ನ್ಯಾಪ್ಕಿನ್‌ ಪ್ಯಾಡ್‌ಗಳನ್ನು 71.83 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲು ಮತ್ತು ವಿತರಣೆ ಮಾಡಲು ಆಡಳಿತಾತಕ ಅನುಮೋದನೆ, ಆಶಾಕಿರಣ ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೂ.52.85 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತಕ ಅನುಮೋದನೆ ಬಗ್ಗೆ ಪ್ರಸ್ತಾಪಿಸಲಾಗಿದೆ. ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲ್ಲೂಕಿನ ರಾಯಸಂದ್ರ ಗ್ರಾಮದಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲು ಕರ್ನಾಟಕ ಗೃಹ ಮಂಡಳಿಯಿಂದ 65 ಕೋಟಿ ರೂ. ವೆಚ್ಚದಲ್ಲಿ 25 ಎಕರೆ ಜಮೀನು ಖರೀದಿಸಲು ಆಡಳಿತಾತಕ ಅನುಮೋದನೆ ನೀಡುವ ಬಗ್ಗೆ ಚರ್ಚಿಸಲಾಗಿದೆ.

RELATED ARTICLES

Latest News