ಬೆಂಗಳೂರು,ಜು.18-ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಂದಿನ ತಿಂಗಳ ಆಗಸ್ಟ್ 5ರಿಂದ ಅನಿರ್ದಿಷ್ಟವಧಿಗಳ ಕಾಲ ಮುಷ್ಕರ ನಡೆಸಲು ಮುಂದಾಗಿದ್ದ ರಾಜ್ಯ ಸಾರಿಗೆ ನೌಕರರ ವಿರುದ್ದ ಅಗತ್ಯ ಸೇವಾ ನಿರ್ವಾಹಣೆ ಕಾಯ್ದೆ( ಎಸ್ಮಾ ) ಜಾರಿ ಮಾಡುವ ಮೂಲಕ ಸರ್ಕಾರ ಬ್ರಹಾಸ್ತ್ರ ಬಳಸಿದೆ.
ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸದಂತೆ ಎಸಾ ಜಾರಿ ಮಾಡಲಾಗಿದ್ದು, ಮುಂದಿನ ಆರು ತಿಂಗಳು ಇದು ಜಾರಿಯಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಮುಷ್ಕರ ನಡೆಸುವುದನ್ನು ನಿಷೇಧಿಸಲಾಗಿದೆ.
ಸಾರಿಗೆ ನೌಕರರಿಗೆ 38 ತಿಂಗಳಿನಿಂದ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆ.5ರಂದು ಬೆಳಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಂತೆ ರಾಜ್ಯದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು.
ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಮುಷ್ಕರ ನಡೆಸಲು ಮುಂದಾಗಿತ್ತು. ಈ ಬಗ್ಗೆ ಸುಬ್ಬರಾವ್ ಅವರು, ಸಾರಿಗೆ ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಇ-ಮೇಲ್ ಮೂಲಕ ಮುಷ್ಕರದ ನೋಟಿಸ್ ಕಳಿಸಿದ್ದೇವೆ ಎಂದು ತಿಳಿಸಿದ್ದರು.
ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು. ಆದರೆ ಈವರೆಗೆ ಮಾಡಿಲ್ಲ. 4 ನಿಗಮದ 1 ಲಕ್ಷದ 15 ಸಾವಿರ ನೌಕರರಿಗೆ 38 ತಿಂಗಳ ಭತ್ಯೆ ನೀಡಬೇಕಿತ್ತು. ಆದರೆ 2025 ಜುಲೈ ಬಂದರೂ ಇನ್ನೂ ಸಂಬಳ ಹೆಚ್ಚಳ ಮಾಡಲು ಮುಂದಾಗಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜುಲೈ 7ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದರು. ಈ ಸಭೆಯಲ್ಲಿ ನೌಕರರ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಮತ್ತು ವೇತನ ಹೆಚ್ಚಳ ಬಗ್ಗೆ ಒಂದು ವಾರದೊಳಗೆ ಸಭೆ ಮಾಡುವುದಾಗಿ ಹೇಳಿದ್ದರು. ಆದರೆ 11 ದಿನ ಕಳೆದರೂ ಯಾವುದೇ ಸಭೆ ಕರೆಯಲಾಗಿಲ್ಲ. ಹೀಗಾಗಿ 4 ನಿಗಮಗಳ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ.
ಸಾರಿಗೆ ನೌಕರರ ಬೇಡಿಕೆಗಳು
ಜನವರಿ 1, 2024ರಿಂದ ಶೇ. 25 ವೇತನ ಹೆಚ್ಚಳವನ್ನು ಜಾರಿಗೊಳಿಸುವುದು,ಜನವರಿ 1, 2020ರಿಂದ ಬಾಕಿಯಿರುವ 38 ತಿಂಗಳ ವೇತನ ಹಿಂಬಾಕಿಯನ್ನು ತಕ್ಷಣವೇ ಪಾವತಿಸಬೇಕು, ಹಿಂದಿನ ಮುಷ್ಕರಗಳ ಸಂದರ್ಭದಲ್ಲಿ ಕೆಲಸದಿಂದ ತೆಗೆದುಹಾಕಲಾದ ನೌಕರರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು, ವಿದ್ಯುತ್ ಚಾಲಿತ ಬಸ್‌ಗಳ ನಿರ್ವಹಣೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡದೆ ನಿಗಮದ ನೌಕರರಿಗೆ ವಹಿಸಬೇಕು, ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿಯನ್ನು ನಿಲ್ಲಿಸಬೇಕು, ಮತ್ತು ಔಷಧಿ ವೆಚ್ಚಕ್ಕಾಗಿ ಮಾಸಿಕ 2,000 ರೂ. ಒದಗಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಡಲಾಗಿದೆ.
ಹಿಂದಿನ ಬಿಜೆಪಿ ಸರ್ಕಾರವು ಶೇ.15 ವೇತನ ಹೆಚ್ಚಳವನ್ನು ಘೋಷಿಸಿತ್ತು. ಆದರೆ ನೌಕರರು ಶೇ. 25 ಹೆಚ್ಚಳ ಮಾಡಲು ಕೇಳಿದ್ದರು. ಆದರೂ, ಘೋಷಿತ ವೇತನ ಹೆಚ್ಚಳದ 38 ತಿಂಗಳ ಅರಿಯರ್ಸ್ ಇನ್ನೂ ಪಾವತಿಯಾಗಿಲ್ಲ. ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ, ಸಾರಿಗೆ ನೌಕರರ ಕಷ್ಟಗಳ ಬಗ್ಗೆ ಧ್ವನಿಯೆತ್ತಿದ್ದರು ಆದರೆ ಈಗ ಅಧಿಕಾರದಲ್ಲಿರುವ ಅವರ ಸರ್ಕಾರವೂ ಬೇಡಿಕೆಗಳನ್ನು ಈಡೇರಿಸದಿರುವುದಕ್ಕೆ ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಸಾ ಎಂದರೇನು?
ಎಸಾ ಎಂದರೆ ಅಗತ್ಯ ಸೇವೆ ನಿರ್ವಹಣೆ ಕಾಯ್ದೆ ಎಂದರ್ಥ ಸರ್ಕಾರಿ ನೌಕರನನ್ನು ನಿಯಂತ್ರಣ ಮಾಡುವ ಕಾಯ್ದೆ 1968ರಿಂದ ಜಾಲ್ತಿಯಲ್ಲಿದ್ದು, ಕರ್ನಾಟಕದಲ್ಲಿ ಎಸಾ ಕುರಿತು 1994ರಲ್ಲಿ ಕಾನೂನಿನ ಮೊದಲ ರೂಪುರೇಷೆ ತಯಾರಾಯಿತು. 2013ರ ಜೂನ್‌ನಿಂದ ರಾಜ್ಯದಲ್ಲಿ ಕಾನೂನಾಗಿ ಮಾರ್ಪಾಡಾಯಿತು. ನಂತರ 2015ರಲ್ಲಿ ಸರ್ಕಾರ ಕೆಲ ತಿದ್ದುಪಡಿ ಮಾಡಿದೆ.
ಸೆಕ್ಷನ್ 2ರ ಪ್ರಕಾರ ಕೆಎಸ್‌ಆರ್‌ಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಸಂಸ್ಥೆಗಳ ಮೇಲೆ ಸರ್ಕಾರ ಎಸಾ ಜಾರಿ ಮಾಡಬಹುದಾಗಿದೆ. ಸೆಕ್ಷನ್ 3ರ ಪ್ರಕಾರ ಸಂಸ್ಥೆಗಳು ಮುಷ್ಕರ ನಡೆಸದಂತೆ ಸರ್ಕಾರ ಆದೇಶ ಹೊರಡಿಸಬಹುದು. ಒಮೆ ಆದೇಶ ಹೊರಡಿಸಿದರೆ ಅದು 1 ವರ್ಷ ಕಾಲ ಊರ್ಜಿತದಲ್ಲಿ ಇರಲಿದ್ದು, ಈ ಸಂದರ್ಭದಲ್ಲಿ ಯಾವುದೇ ನೌಕರರು ಅಥವಾ ಸಂಘಟನೆ ಮುಷ್ಕರ ನಡೆಸಿದರೆ ಅದು ಕಾನೂನು ಬಾಹಿರವಾಗುವುದು. ಒಂದು ವೇಳೆ ನೌಕರರು ಅಥವಾ ಸಂಘಟನೆ ಕಾನೂನುಬಾಹಿರ ಮುಷ್ಕರ ನಡೆಸಿದರೆ 1 ವರ್ಷ ಶಿಕ್ಷೆ ಹಾಗೂ 5 ಸಾವಿರ ರೂ ದಂಡ ವಿಧಿಸುವ ಅವಕಾಶವಿರುತ್ತದೆ.
ಸರ್ಕಾರಿ ನೌಕರರು ಸಾಮೂಹಿಕ ಪ್ರತಿಭಟನೆ ನಡೆಸಿ ಪರಿಸ್ಥಿತಿ ನಿಯಂತ್ರಣ ತಪ್ಪುತ್ತದೆ ಎನ್ನುವುದು ಸರ್ಕಾರದ ಗಮನಕ್ಕೆ ಬಂದರೆ ಎಸಾ ಜಾರಿ ಮಾಡಲು ಮುಂದಾಗುತ್ತದೆ. ಮೂಲ ಸೌಕರ್ಯಗಳಾದ ಆಹಾರ, ಭದ್ರತೆ, ಶಿಕ್ಷಣ, ಆರೋಗ್ಯ, ಪೊಲೀಸ್ ವ್ಯವಸ್ಥೆಗೆ ಮುಖಭಂಗ ಬರುವ ಹಂತಕ್ಕೆ ಪ್ರತಿಭಟನೆಗಳು ಬಂದಾಗ ಸರ್ಕಾರ ಎಸಾ ಜಾರಿ ಮಾಡುವ ಅಧಿಕಾರವಿದೆ.
ಎಸಾ ಎಂದರೆ ಕಡ್ಡಾಯ ಕೆಲಸ. ಸಂವಿಧಾನದಲ್ಲಿ ತಿಳಿಸಿರುವಂತೆ, 7ರಲ್ಲಿನ 2ನೇ ಪಟ್ಟಿಯಲ್ಲಿರುವ ಸಾರ್ವಜನಿಕ ಸುವ್ಯವಸ್ಥೆ ಮತ್ತು ಪೊಲೀಸ್ ಸಂಬಂಧಿಸಿದ ಎಲ್ಲಾ ಸೇವೆಗಳ ಕುರಿತು ರಾಜ್ಯ ಶಾಸಕಾಂಗವು ಕಾನೂನು ರೂಪಿಸುವ ಅಧಿಕಾರ ಹೊಂದಿರುತ್ತದೆ. ಎಸಾ ಕಾಯ್ದೆ ಉಲ್ಲಂಸಿದರೆ ವಾರಂಟ್ ಇಲ್ಲದೇ ಬಂಧನ ಮಾಡಬಹುದು. ಅಲ್ಲದೆ 6 ತಿಂಗಳು ಜೈಲು ವಾಸ ಶಿಕ್ಷೆಯನ್ನು ನೀಡುವ ಸಾಧ್ಯತೆಯೂ ಇರುತ್ತದೆ ಎಂಬ ಉಲ್ಲೇಖವಿದೆ.
ಎಸಾ ಜಾರಿಯಲ್ಲಿದ್ದ ಮೇಲೆ ಅದನ್ನು ಧಿಕ್ಕರಿಸಿ ಉದ್ಯೋಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡರೆ ಆತನ ವೇತನ, ಭತ್ಯೆ, ಬಡ್ತಿ ಮತ್ತು ಇತರ ಸವಲತ್ತುಗಳ ಮೇಲೆ ಪರಿಣಾಮ ಉಂಟಾಗುತ್ತದೆ. ಈ ಕಾರಣಕ್ಕೆ ರಾಜ್ಯ ಸರ್ಕಾರಗಳು ಉದ್ಯೋಗಿಗಳು ಹಠ ಮುಂದುವರಿಸಿದರೆ ಕೊನೆಯ ಅಸ್ತ್ರವಾಗಿ ಎಸಾ ಜಾರಿಗೊಳಿಸುತ್ತದೆ.ಮುಷ್ಕರಕ್ಕೆ ಪ್ರೇರಣೆ ಅಥವಾ ಪ್ರಚೋದನೆ ನೀಡುವುದು ಕೂಡ ಅಪರಾಧವಾಗಿದ್ದು, ಸೆಕ್ಷನ್ 5ರ ಪ್ರಕಾರ 1 ವರ್ಷ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಬಹುದಾಗಿದೆ.