ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದ ದೇಶದ ಮೊದಲ ರಾಜ್ಯ ಕರ್ನಾಟಕ

Social Share

ಬೆಂಗಳೂರು, ಜ.26- ಮುಂದಿನ ಎರಡು ವರ್ಷಗಳಲ್ಲಿ ಒಂದು ಸಾವಿರ ಕೋಟಿ ರೂ. ವೆಚ್ಚದಲ್ಲಿ 100 ಐಲೋಡ್ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 30 ಹಾಸಿಗೆ ಮಾದರಿ ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

ಮಾಣಿಕ ಷಾ ಪೆರೇಡ್ ಮೈದಾನದಲ್ಲಿ 74ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಜನಾರೋಗ್ಯ, ಆರೋಗ್ಯ ಕರ್ನಾಟಕ ಕಾರ್ಡ್‍ಗಳಿಗೆ 1.22 ಕೋಟಿ ಫಲಾನುಭವಿಗಳನ್ನು ನೊಂದಾಯಿಸಿದ್ದು, ಬಿಪಿಎಲ್ ಕುಟುಂಬಗಳಿಗೆ 5 ಲಕ್ಷ ರೂ.ವರೆಗಿನ ಉಚಿತ ವೈದ್ಯಕೀಯ ರಕ್ಷಣೆ ಒದಗಿಸುತ್ತದೆ ಎಂದರು.

ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣವು 83ರಿಂದ 69ಕ್ಕೆ ಇಳಿದಿದೆ. ನಗರ ಪ್ರದೇಶಗಳಲ್ಲಿ 438 ನಮ್ಮ ಕ್ಲಿನಿಕ್‍ಗಳನ್ನು, 128 ಮಹಿಳಾ ಸ್ವಾಸ್ಥ್ಯ ಚಿಕಿತ್ಸಾಲಯಗಳು ಮತ್ತು ಪಾಲಿ ಕ್ಲಿನಿಕ್‍ಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಸೂರ್ತಿ ಯೋಜನೆ:
ಬಾಲ್ಯವಿವಾಹ ತಡೆಗಟ್ಟುವ ಸೂರ್ತಿ ಯೋಜನೆ ಕೊಪ್ಪಳ ಜಿಲ್ಲೆಯಲ್ಲಿ ಯಶಸ್ವಿಯಾಗಿದ್ದು, ವಿಜಯಪುರ, ರಾಯಚೂರು, ಬೆಳಗಾವಿ, ಕಲ್ಬುರ್ಗಿ ಜಿಲ್ಲೆಗಳ 11 ತಾಲ್ಲೂಕುಗಳಲ್ಲಿ ಈ ಯೋಜನೆ ವಿಸ್ತರಿಸಲಾಗುತ್ತಿದೆ. 12.51 ಕೋಟಿ ರೂ. ವೆಚ್ಚ ಮಾಡಲಾಗುವುದೆಂದರು.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಚಾಮರಾಜನಗರ, ಕೊಡಗು, ಬೀದರ್, ಹಾವೇರಿ, ಕೊಪ್ಪಳ, ಬಾಗಲಕೋಟೆ, ಹಾಸನ ಸೇರಿದಂತೆ ಏಳು ಸ್ವಾಯತ್ತ ಹೊಸ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಪ್ರಕ್ರಿಯೆಯಲ್ಲಿದ್ದೇವೆ. ಐಐಟಿ ಮಾದರಿಯಲ್ಲಿ 7 ಎಂಜಿನಿಯರಿಂಗ್ ಕಾಲೇಜುಗಳನ್ನು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ರಾಷ್ಟ್ರದ ಪ್ರಗತಿಗೆ ಪ್ರೇರಣೆ:
ಮುಂದಿನ 25 ವರ್ಷಗಳ ಅಮೃತ ಕಾಲವು ನಮ್ಮ ದೇಶವನ್ನು ಪ್ರಪಂಚದ ಕಿರೀಟ ಪ್ರಾಯವಾಗಿರುವ ಕರ್ತವ್ಯ ಕಾಲವಾಗಿದೆ. ಸಾರ್ವಜನಿಕ ಜೀವನದಲ್ಲಿ ಸಕ್ರಿಯ ಪಾತ್ರ ನಿಭಾಯಿಸುವ ಜೊತೆಗೆ ರಾಷ್ಟ್ರದ ಪ್ರಗತಿಗೆ ಎಲ್ಲರೂ ತಮ್ಮ ಕೊಡುಗೆ ನೀಡಲು ಪ್ರೇರೇಪಣೆ ನೀಡುವ ವಿಶ್ವಾಸ ವ್ಯಕ್ತಪಡಿಸಿದರು.

ನಾವೆಲ್ಲರೂ ಸೇರಿ ಕರ್ನಾಟಕ ರಾಜ್ಯವನ್ನು ಸ್ವಾಸ್ಥ್ಯ, ಸಮೃದ್ಧವಾಗಿಸೋಣ ಮತ್ತು ದೇಶದ ಏಕತೆ ಮತ್ತು ಅಖಂಡತೆಯನ್ನು ಬಲಿಷ್ಠಗೊಳಿಸುವ ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು.

ಇದೇ ಮೊದಲ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಹಾರಾಡಿದ ತಿರಂಗಾ

ಮೆಚ್ಚುಗೆ:
ದೇಶದ ಪ್ರಗತಿಪರ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ರಾಜ್ಯದ ಸರ್ವಾಂಗೀಣ, ಜನಪರ ಅಭಿವೃದ್ಧಿ, ಉದ್ದೇಶದೊಂದಿಗೆ ಮೂಲಭೂತ ಸೇವೆ ಒದಗಿಸಲು ವಿಭಿನ್ನ, ನವೀನ ಮತ್ತು ಸರ್ವರನ್ನೊಳಗೊಂಡ ಕಾರ್ಯಕ್ರಮ ಅನುಷ್ಠಾನಗೊಳಿಸುವಲ್ಲಿ ನಾವು ಅಗ್ರಗಣ್ಯ ಸ್ಥಾನದಲ್ಲಿದ್ದೇವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನವ ಭಾರತಕ್ಕಾಗಿ ನವಕರ್ನಾಟಕ ಎಂಬ ಧ್ಯೇಯದೊಂದಿಗೆ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದಡಿಯಲ್ಲಿ 14 ಅಮೃತ ಮಹೋತ್ಸವ ಕಾರ್ಯಕ್ರಮಗಳನ್ನು ವಿವಿಧ ಹಂತಗಳಲ್ಲಿ ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ ಎಂದರು.

ರಾಜ್ಯ 4ನೇ ಸ್ಥಾನದಲ್ಲಿ:
2020-21ರ ಎಸ್‍ಡಿಜಿ ಸೂಚ್ಯಂಕ ವರದಿ ಪ್ರಕಾರ ರಾಜ್ಯ 4ನೇ ಸ್ಥಾನದಲ್ಲಿದೆ. ಹಿಡುವಳಿದಾರರನ್ನು ಗುರುತಿಸಲು ಅಕ್ಟೋಬರ್ 1ರಿಂದ 11ನೇ ಕೃಷಿ ಗಣತಿ ಕಾರ್ಯವನ್ನು ಪ್ರಾರಂಭಿಸಲಾಗಿದೆ. 2022ನೇ ವರ್ಷದ ಜನವರಿಯಿಂದ ಡಿಸೆಂಬರ್‍ವರೆಗೆ 13.47 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿ ಮಾಡಿದ್ದು, 4110 ಕೋಟಿ ರೂ.ಗಳನ್ನು ಕೂಲಿಕಾರರ ಖಾತೆಗಳಿಗೆ ಪಾವತಿಸಲಾಗಿದೆ ಎಂದು ವಿವರಿಸಿದರು.

ನಲ್ಲಿ ಸಂಪರ್ಕ:
ಡಿಸೆಂಬರ್ ಅಂತ್ಯದ ವೇಳೆಗೆ 2314.34 ಕೋಟಿ ರೂ. ವೆಚ್ಚದಲ್ಲಿ 13.35 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕವನ್ನು ಒದಗಿಸಲಾಗಿದೆ ಎಂದು ಹೇಳಿದರು.

ರಾಜ್ಯಕ್ಕೆ ಮೊದಲ ಪ್ರಶಸ್ತಿ:
ಸೃಜಲಾಂ 2.0 ಮತ್ತು ಐ ಸೇವಾ ಆಂದೋಲನಗಳಡಿಯಲ್ಲಿ ರಾಜ್ಯ ಮೊದಲ ಪ್ರಶಸ್ತಿ ಪಡೆದಿದ್ದು, ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಕರ್ನಾಟಕವು ಗ್ರಾಮಗಳ ಪೆÇೀಷಣೆಯಲ್ಲಿ 2ನೇ ಸ್ಥಾನ ಗಳಿಸಿದೆ. 2022-23ನೇ ಸಾಲಿನಲ್ಲಿ 20.19 ಲಕ್ಷ ರೈತರಿಗೆ ಕೃಷಿ ಸಾಲ ಯೋಜನೆಯಡಿಯಲ್ಲಿ 15066 ಕೋಟಿ ರೂ.ಗಳ ಬೆಲೆ ಸಾಲ ನೀಡಲಾಗಿದೆ. ಯಶಸ್ವಿನಿ ಸಹಕಾರ ಸದಸ್ಯರ ರಕ್ಷಣಾ ಟ್ರಸ್ಟ್ ಯೋಜನೆಯಡಿ ಜ. 17ರವರೆಗೆ 32.32 ಲಕ್ಷ ಸದಸ್ಯರನ್ನು ನೊಂದಾಯಿಸಲಾಗಿದೆ ಎಂದು ಅವರು ಹೇಳಿದರು.

13ನೇ ಕೃಷಿ ನಾಯಕತ್ವ ಸಮಾವೇಶ ಮತ್ತು ಪ್ರಶಸ್ತಿ ಕಾರ್ಯಕ್ರಮದಡಿ ರಾಜ್ಯವನ್ನು ಉತ್ತಮ ತೋಟಗಾರಿಕಾ ರಾಜ್ಯ ಪ್ರಶಸ್ತಿ ನೀಡಿ ಘೋಷಿಸಲಾಗಿದೆ. ವಿವಿಧ ವಸತಿ ಯೋಜನೆಗಳಡಿಯಲ್ಲಿ 2098.85 ಕೋಟಿ ರೂ. ವೆಚ್ಚದಲ್ಲಿ 1,57,244 ಮನೆಗಳನ್ನು ಪೂರ್ಣಗೊಳಿಸಲಾಗಿದೆ. 1 ಲಕ್ಷ ಬಹು ಮಹಡಿ ಯೋಜನೆಯಡಿಯಲ್ಲಿ 59,476 ಬಹು ಮಹಡಿ ಮನೆಗಳನ್ನು ಕೈಗೊಳ್ಳಲಾಗುತ್ತದೆ.

ಗಣರಾಜ್ಯೋತ್ಸವಕ್ಕೆ ಗೈರಾದ ತೆಲಂಗಾಣ ಸಿಎಂ

2804 ಕೋಟಿ ರೂ. ವೆಚ್ಚದಲ್ಲಿ 44,452 ಮನೆಗಳನ್ನು ಪೂರ್ಣಗೊಳಿಸಲಾಗಿದೆ. ಕೊಳಗೇರಿಗಳಲ್ಲಿ ವಾಸಿಸುವ 3.36 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡುವ ನಿರ್ಣಯ ಕೈಗೊಳ್ಳಲಾಗಿದೆ. ಇದುವರೆಗೂ 1,14,604 ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗಿದೆ ಎಂದರು.

ರೈತ ವಿದ್ಯಾನಿ ಯೋಜನೆಯಡಿ 483.62 ಕೋಟಿ ರೂ. ವಿದ್ಯಾರ್ಥಿ ವೇತನವನ್ನು ರೈತರ ಮಕ್ಕಳಿಗೆ ನೀಡಲಾಗಿದೆ. ಸರ್ಕಾರಿ ಶಾಲಾ- ಕಾಲೇಜುಗಳಲ್ಲಿ 8,101 ಹೆಚ್ಚುವರಿ ತರಗತಿ ಕೊಠಡಿಗಳ ನಿರ್ಮಾಣ, 978 ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ ಎಂದು ಅವರು ತಿಳಿಸಿದರು.

Governor Gehlot, hoists, National flag, Manekshaw Parade ground,

Articles You Might Like

Share This Article