ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣದ ಕಂಪ್ಲೀಟ್ ಹೈಲೈಟ್ಸ್

Session--01

ಬೆಂಗಳೂರು, ಜು.2-ವಿಶ್ವಮಾನ್ಯತೆ ಪಡೆದಿರುವ ಬೆಂಗಳೂರು ಮೆಟ್ರೋ ರೈಲು ನಿಗಮ 2021ರ
ಮಾರ್ಚ್ ವೇಳೆಗೆ 118 ಕಿ.ಮೀ ಉದ್ದದ ಮಾರ್ಗವನ್ನು ಪೂರ್ಣಗೊಳಿಸಲಿದ್ದು,ಪ್ರಸ್ತುತ ದಿನವೊಂದಕ್ಕೆ 3.6ಲಕ್ಷ ಪ್ರಯಾಣಿಕರು ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದು, ಭವಿಷ್ಯದಲ್ಲಿ ಈ ಸಂಖ್ಯೆಯನ್ನು 20ಲಕ್ಷಕ್ಕೆ ಹೆಚ್ಚಿಸುವ ನಿರೀಕ್ಷೆ ಇದೆ ಎಂದು ರಾಜ್ಯಪಾಲ ವಿ.ಆರ್.ವಾಲಾ ಹೇಳಿದರು. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನದ ಉಭಯ ಸದನವನ್ನು ಉದ್ದೇಶಿಸಿ ಮಾತನಾಡಿ, ಬೆಂಗಳೂರು ಹೃದಯ ಭಾಗದಲ್ಲಿ ಸಮರ್ಥ ಸಾರಿಗೆ ವ್ಯವಸ್ಥೆ ಅನುಷ್ಠಾನಕ್ಕೆ ಯೋಜನೆ ರೂಪಿಸಲಾಗುತ್ತಿದೆ.

ಬಸ್ ಪ್ರಯಾಣಿಕರಿಗೆ ಉಚಿತ ವೈಫೈ ಸೌಲಭ್ಯ, ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಬಸ್‍ಗಳಲ್ಲಿ ಕ್ಲೋಸ್ಡ್ ಸಕ್ರ್ಯೂಟ್ ಕ್ಯಾಮೆರಾ, ಪ್ಯಾನಿಕ್ ಅಲಾರಾಂ ಹಾಗೂ ಮೊಬೈಲ್ ಆ್ಯಪ್‍ನಲ್ಲಿ ಎಸ್‍ಒಎಸ್ ಬಟನ್ ಒದಗಿಸಲು ಯೋಜಿಸಲಾಗಿದೆ. ಸಾರ್ವಜನಿಕರಿಗೆ ಬೈಸಿಕಲ್ ಬಾಡಿಗೆಗೆ ನೀಡುವ ವ್ಯವಸ್ಥೆ ಮೈಸೂರಿನಲ್ಲಿ ಯಶಸ್ವಿಯಾಗಿದ್ದು, ಬೆಂಗಳೂರಿನಲ್ಲೂ ಇದನ್ನು ವಿಸ್ತರಿಸಲಾಗುತ್ತಿದೆ ಎಂದರು. ವಿಶ್ವ ಮಾನ್ಯತೆ ಪಡೆದಿರುವ ಸಿಲಿಕಾನ್ ಸಿಟಿ ಖ್ಯಾತಿಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮೂಲಸೌಲಭ್ಯಗಳ ಕೊರತೆ ನೀಗಿಸುವುದು, ಸಂಚಾರ ದಟ್ಟಣೆ ನಿಯಂತ್ರಣ ವ್ಯವಸ್ಥೆಯನ್ನು ಶೀಘ್ರದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕಾಗಿದೆ ಎಂದರು.

ಐಟಿ-ಬಿಟಿ ಕ್ಷೇತ್ರದಲ್ಲಿ ವಿಶ್ವ ನಾಯಕತ್ವ ವಹಿಸಿಕೊಂಡಿರುವ ಬೆಂಗಳೂರು ವಿಶ್ವದ ಡಿಜಿಟಲ್ ನಗರಗಳ ಪೈಕಿ ಮೊದಲ ಸ್ಥಾನದಲ್ಲಿದೆ. ಈಗ ರಫ್ತಿನ ಮೂಲಕ 3 ಲಕ್ಷ ಕೋಟಿ ರೂ. ಹಾಗೂ ಭಾರತದ ಜೈವಿಕ ಉದ್ಯಮದ ಆದಾಯದ ಶೇ. 35ಕ್ಕಿಂತ ಹೆಚ್ಚಿನ ಕೊಡುಗೆ ನೀಡಿದೆ.೭ ಸಾವಿರ ನವೋದ್ಯಮಗಳ ಸ್ಥಾಪನೆ ಮೂಲಕ ಬೆಂಗಳೂರು ನವೋದ್ಯಮ ಕ್ಷೇತ್ರದಲ್ಲಿ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹೇಳಿದರು.
ಸರ್ಕಾರ ಸಮಗ್ರ ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ ಎಂದರು.

ಕರ್ನಾಟಕವು ದೇಶೀಯ ಪ್ರವಾಸಿಗರ ಆಗಮನದಲ್ಲಿ 5ನೇ ಸ್ಥಾನ ಹಾಗೂ ವಿದೇಶಿ ಪ್ರವಾಸಿಗರ ಆಗಮನದಲ್ಲಿ 11ನೇ ಸ್ಥಾನದಲ್ಲಿದ್ದು, ಇದನ್ನು ಪ್ರವಾಸೋದ್ಯಮ ನೀತಿಯನ್ವಯ ಭಾರತದ ಪ್ರವಾಸಿ ತಾಣಗಳ ಪೈಕಿ ಕರ್ನಾಟಕವನ್ನು ಮೊದಲೆರಡರ ಸ್ಥಾನಕ್ಕೆ ತರಲು ಹಾಗೂ ವಿಶ್ವದ ಪ್ರವಾಸಿ ತಾಣಗಳ ಪೈಕಿ 50ನೇ ಸ್ಥಾನದೊಳಗೆ ತರುವ ಗುರಿ ಹೊಂದಲಾಗಿದೆ ಎಂದರು. ಕರ್ನಾಟಕ ಆರ್ಥಿಕ ಸ್ಥಿತಿ ದಕ್ಷತೆಯಿಂದ ನಿರ್ವಹಿಸುವುದರಲ್ಲಿ ಹೆಸರಾಗಿದ್ದು, ಇದನ್ನು ಮತ್ತಷ್ಟು ಉತ್ತಮಪಡಿಸಲು ವಿತ್ತೀಯ ಕ್ರೋಢೀಕರಣ ನಕ್ಷೆ ರೂಪಿಸಲು ನಾವು ಮುಂಚೂಣಿಯಲ್ಲಿದ್ದೇವೆ ಎಂದು ಹೇಳಿದರು.

# ನೀರಿನ ಸೋರಿಕೆ ನಿಯಂತ್ರಿಸುವ ಯೋಜನೆ 2022ರ ಅಂತ್ಯಕ್ಕೆ ಪೂರ್ಣ :
ಬೆಂಗಳೂರು, ಜು.2-ನೀರಿನ ಸೋರಿಕೆ ನಿಯಂತ್ರಿಸುವ ಯೋಜನೆ 2022ರ ಅಂತ್ಯಕ್ಕೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ರಾಜ್ಯಪಾಲ ವಿ.ಆರ್.ವಾಲಾ ತಿಳಿಸಿದರು. ವಿಧಾನಸಭೆಯಲ್ಲಿಂದು ರಾಜ್ಯ ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಜಪಾನ್ ಅಂತಾರಾಷ್ಟ್ರೀಯ ಸಹಕಾರ ಸಂಸ್ಥೆಯ ಆರ್ಥಿಕ ನೆರವಿನೊಂದಿಗೆ ಲೆಕ್ಕಕ್ಕೆ ಸಿಗದೆ ಪೋಲಾಗುವ ನೀರಿನ ಪ್ರಮಾಣ ಕಡಿಮೆ ಮಾಡುವ ಮತ್ತು ಸೋರಿಕೆ ನಿಯಂತ್ರಿಸುವ ಮೂಲಕ ನೀರು ವಿತರಣಾ ವ್ಯವಸ್ಥೆಯನ್ನು ಸುಧಾರಿಸಲು ಬೆಂಗಳೂರಿನಲ್ಲಿ ಯೋಜನೆಯೊಂದನ್ನು ಜಾರಿಗೆ ತರಲಾಗಿದೆ.

ಬೆಂಗಳೂರಿನಲ್ಲಿ ಮೂಲಸೌಲಭ್ಯಗಳ ಕೊರತೆಯ ಅರಿವು ಸರ್ಕಾರಕ್ಕಿದ್ದು, ಸಂಚಾರ ದಟ್ಟಣೆ, ನಿಯಂತ್ರಣ, ಕುಡಿಯುವ ನೀರಿನ ವ್ಯವಸ್ಥೆ, ವಸತಿ ಯೋಜನೆಗಳನ್ನು ಬೆಂಗಳೂರಿನಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಿದೆ ಎಂದು ಹೇಳಿದರು.

# ಉದ್ದೇಶಿತ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕವು ಮೊದಲ ಸ್ಥಾನ :
ಬೆಂಗಳೂರು, ಜು.2-ಉದ್ದೇಶಿತ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕವು ಮೊದಲ ಸ್ಥಾನದಲ್ಲಿದೆ ಎಂದು ರಾಜ್ಯಪಾಲ ವಿ.ಆರ್.ವಾಲಾ ತಿಳಿಸಿದರು. ವಿಧಾನಸಭೆಯಲ್ಲಿಂದು ರಾಜ್ಯ ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಸರ್ಕಾರವು ಬಂಡವಾಳ ಆಕರ್ಷಿಸುವ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯೊಂದಿಗೆ ಕರ್ನಾಟಕ ಕೈಗಾರಿಕಾ ನೀತಿಯನ್ನು ಅನುಷ್ಠಾನಗೊಳಿಸುತ್ತಿದೆ ಎಂದರು. ಅತ್ಯಾಧುನಿಕ ಸಾಧನಗಳ ಮೂಲಕ ರಸ್ತೆಗಳ ಸ್ಥಿತಿಗತಿಯ ದತ್ತಾಂಶದ ಆಧಾರದ ಮೇಲೆ ವಾರ್ಷಿಕ ಕಾಮಗಾರಿಗಳ ಕಾರ್ಯಕ್ರಮವನ್ನು ಸಿದ್ಧಪಡಿಸಲಾಗುವುದು. ಆದ್ಯತೆ ಮೇರೆಗೆ ರಸ್ತೆ ಕಾಮಗಾರಿಗಳ ನಿರ್ವಹಣೆಯನ್ನು ತೆಗೆದುಕೊಳ್ಳಲಾಗುತ್ತದೆ. ರಸ್ತೆಗಳು, ಸೇತುವೆಗಳು ಮತ್ತು ಕಟ್ಟಡಗಳ ವಿವರಗಳನ್ನು ಜಿಯೋ ಟ್ಯಾಗ್ ಮಾಡಿ ಭೌಗೋಳಿಕ ಮಾಹಿತಿ ವ್ಯವಸ್ಥೆಯಲ್ಲಿ ಸೆರೆಹಿಡಿಯಲಾಗುವುದು ಎಂದರು.

# 2021ರ ಮಾರ್ಚ್ ವೇಳೆಗೆ 118 ಕಿ.ಮೀ ಉದ್ದದ ಮೆಟ್ರೋ ಮಾರ್ಗ ಪೂರ್ಣ
ಬೆಂಗಳೂರು, ಜು.2-ವಿಶ್ವಮಾನ್ಯತೆ ಪಡೆದಿರುವ ಬೆಂಗಳೂರು ಮೆಟ್ರೋ ರೈಲು ನಿಗಮ 2021ರ ಮಾರ್ಚ್ ವೇಳೆಗೆ 118 ಕಿ.ಮೀ ಉದ್ದದ ಮಾರ್ಗವನ್ನು ಪೂರ್ಣಗೊಳಿಸಲಿದ್ದು, ಪ್ರಸ್ತುತ ದಿನವೊಂದಕ್ಕೆ 3.6ಲಕ್ಷ ಪ್ರಯಾಣಿಕರು ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದು, ಭವಿಷ್ಯದಲ್ಲಿ ಈ ಸಂಖ್ಯೆಯನ್ನು 20ಲಕ್ಷಕ್ಕೆ ಹೆಚ್ಚಿಸುವ ನಿರೀಕ್ಷೆ ಇದೆ ಎಂದು ರಾಜ್ಯಪಾಲ ವಿ.ಆರ್.ವಾಲಾ ಹೇಳಿದರು.

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನದ ಉಭಯ ಸದನವನ್ನು ಉದ್ದೇಶಿಸಿ ಮಾತನಾಡಿ, ಬೆಂಗಳೂರು ಹೃದಯ ಭಾಗದಲ್ಲಿ ಸಮರ್ಥ ಸಾರಿಗೆ ವ್ಯವಸ್ಥೆ ಅನುಷ್ಠಾನಕ್ಕೆ ಯೋಜಿಸುತ್ತಿದೆ. ಬಸ್ ಪ್ರಯಾಣಿಕರಿಗೆ ಉಚಿತ ವೈಫೈ ಸೌಲಭ್ಯ, ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಬಸ್‍ಗಳಲ್ಲಿ ಕ್ಲೋಸ್ಡ್ ಸಕ್ರ್ಯೂಟ್ ಕ್ಯಾಮೆರಾ, ಪ್ಯಾನಿಕ್ ಅಲಾರಾಂ ಹಾಗೂ ಮೊಬೈಲ್ ಆ್ಯಪ್‍ನಲ್ಲಿ ಎಸ್‍ಒಎಸ್ ಬಟನ್ ಒದಗಿಸಲು ಯೋಜಿಸಲಾಗಿದೆ.

ಸಾರ್ವಜನಿಕರಿಗೆ ಬೈಸಿಕಲ್ ಬಾಡಿಗೆಗೆ ನೀಡುವ ವ್ಯವಸ್ಥೆ ಮೈಸೂರಿನಲ್ಲಿ ಯಶಸ್ವಿಯಾಗಿದ್ದು, ಬೆಂಗಳೂರಿನಲ್ಲೂ ಇದನ್ನು ವಿಸ್ತರಿಸಲಾಗುತ್ತಿದೆ ಎಂದರು. ವಿಶ್ವ ಮಾನ್ಯತೆ ಪಡೆದಿರುವ ಸಿಲಿಕಾನ್ ಸಿಟಿ ಖ್ಯಾತಿಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮೂಲಸೌಲಭ್ಯಗಳ ಕೊರತೆ ನೀಗಿಸುವುದು, ಸಂಚಾರ ದಟ್ಟಣೆ ನಿಯಂತ್ರಣ ವ್ಯವಸ್ಥೆಯನ್ನು ಶೀಘ್ರದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕಾಗಿದೆ ಎಂದರು.

ಐಟಿ-ಬಿಟಿ ಕ್ಷೇತ್ರದಲ್ಲಿ ವಿಶ್ವ ನಾಯಕತ್ವ ವಹಿಸಿಕೊಂಡಿರುವ ಬೆಂಗಳೂರು ವಿಶ್ವದ ಡಿಜಿಟಲ್ ನಗರಗಳ ಪೈಕಿ ಮೊದಲ ಸ್ಥಾನದಲ್ಲಿದೆ. ಈಗ ರಫ್ತಿನ ಮೂಲಕ 3 ಲಕ್ಷ ಕೋಟಿ ರೂ. ಹಾಗೂ ಭಾರತದ ಜೈವಿಕ ಉದ್ಯಮದ ಆದಾಯದ ಶೇ. 35ಕ್ಕಿಂತ ಹೆಚ್ಚಿನ ಕೊಡುಗೆ ನೀಡಿದೆ.7 ಸಾವಿರ ನವೋದ್ಯಮಗಳ ಸ್ಥಾಪನೆ ಮೂಲಕ ಬೆಂಗಳೂರು ನವೋದ್ಯಮ ಕ್ಷೇತ್ರದಲ್ಲಿ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹೇಳಿದರು.

ಸರ್ಕಾರ ಸಮಗ್ರ ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ ಎಂದರು. ಕರ್ನಾಟಕವು ದೇಶೀಯ ಪ್ರವಾಸಿಗರ ಆಗಮನದಲ್ಲಿ 5ನೇ ಸ್ಥಾನ ಹಾಗೂ ವಿದೇಶಿ ಪ್ರವಾಸಿಗರ ಆಗಮನದಲ್ಲಿ 11ನೇ ಸ್ಥಾನದಲ್ಲಿದ್ದು, ಇದನ್ನು ಪ್ರವಾಸೋದ್ಯಮ ನೀತಿಯನ್ವಯ ಭಾರತದ ಪ್ರವಾಸಿ ತಾಣಗಳ ಪೈಕಿ ಕರ್ನಾಟಕವನ್ನು ಮೊದಲೆರಡರ ಸ್ಥಾನಕ್ಕೆ ತರಲು ಹಾಗೂ ವಿಶ್ವದ ಪ್ರವಾಸಿ ತಾಣಗಳ ಪೈಕಿ 50ನೇ ಸ್ಥಾನದೊಳಗೆ ತರುವ ಗುರಿ ಹೊಂದಲಾಗಿದೆ ಎಂದರು. ಕರ್ನಾಟಕ ಆರ್ಥಿಕ ಸ್ಥಿತಿ ದಕ್ಷತೆಯಿಂದ ನಿರ್ವಹಿಸುವುದರಲ್ಲಿ ಹೆಸರಾಗಿದ್ದು, ಇದನ್ನು ಮತ್ತಷ್ಟು ಉತ್ತಮಪಡಿಸಲು ವಿತ್ತೀಯ ಕ್ರೋಢೀಕರಣ ನಕ್ಷೆ ರೂಪಿಸಲು ನಾವು ಮುಂಚೂಣಿಯಲ್ಲಿದ್ದೇವೆ ಎಂದು ಹೇಳಿದರು.

# ರಾಜ್ಯದ ರೈತರು ಇಸ್ರೇಲ್ ಮಾದರಿ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು.
ಬೆಂಗಳೂರು, ಜು.2-ರಾಜ್ಯದ ರೈತರು ಇಸ್ರೇಲ್ ಮಾದರಿ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು. ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಗಬೇಕು. ಅನ್ನದಾತನ ಬದುಕು ಹಸನುಗೊಳಿಸಬೇಕು, ಕೃಷಿಯಲ್ಲಿ ಆಧುನಿಕತೆ ಅಳವಡಿಸಿಕೊಳ್ಳುವುದನ್ನು ಜಾರಿಗೆ ತರುವುದು ಸರ್ಕಾರದ ಪ್ರಮುಖ ಉದ್ದೇಶ ಎಂದು ರಾಜ್ಯಪಾಲ ವಿ.ಆರ್.ವಾಲಾ ಹೇಳಿದರು.

15ನೇ ವಿಧಾನಸಭೆಯ ಮೊದಲನೆ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಆರಂಭದಲ್ಲೇ ರೈತರ ಅಭಿವೃದ್ಧಿಯನ್ನು ಪ್ರಸ್ತಾಪಿಸಿದ್ದಾರೆ. ಅನ್ನದಾತನ ಬದುಕನ್ನು ಹಸನುಗೊಳಿಸಲು ನಮ್ಮ ಸರ್ಕಾರ ಮಾನವೀಯ ಚೌಕಟ್ಟಿನಲ್ಲಿ ನಿರ್ಧಾರಗಳನ್ನು ಮತ್ತು ನಿಲುವುಗಳನ್ನು ತೆಗೆದುಕೊಳ್ಳಲಿದೆ. ಹಿಂದಿನ ಸರ್ಕಾರದ ಪರಿಣಾಮಕಾರಿ ಯೋಜನೆಗಳನ್ನು ಮುಂದುವರೆಸುವ ಜೊತೆಗೆ ಭವಿಷ್ಯದ ದೃಷ್ಟಿಯಲ್ಲಿ ಹೊಸ ಹೆಜ್ಜೆ ಇಡಲಿದೆ ಎಂದಿದ್ದಾರೆ. ರೈತ ನಾಡಿನ ಬೆನ್ನೆಲುಬು. ಆತನ ರಕ್ಷಣೆಗೆ ಸದಾ ನಾವು ಚಿಂತಿಸುತ್ತೇವೆ. ಆಧುನಿಕ ಕೃಷಿ ತಂತ್ರಜ್ಞಾನಗಳನ್ನು ಕೃಷಿಯಲ್ಲಿ ಅಳವಡಿಸುವುದು ಸರ್ಕಾರದ ಆದ್ಯತೆಯಲ್ಲಿ ಪ್ರಮುಖವಾದುದು ಎಂದಿದ್ದಾರೆ.

ರಾಜ್ಯದ ರೈತರು ಇಸ್ರೇಲ್ ಮಾದರಿಯ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕೆಂಬು ದು ಸರ್ಕಾರದ ಬಯಕೆ. ನೀರು ಲಭ್ಯತೆ ಆಧರಿಸಿ ಯಾವ ಋತುಮಾನಕ್ಕೆ ಯಾವ ಬೆಳೆ ಬೆಳೆಯಬೇಕು ಎಂಬ ಬಗ್ಗೆ ಅಧಿಕಾರಿಗಳು ರೈತರ ಜಮೀನಿಗೆ ಬಂದು ಸಲಹೆ ನೀಡಬೇಕು. ಕೃಷಿ ಪದ್ಧತಿ ಮತ್ತು ಕೃಷಿ ನೀತಿಯಲ್ಲಿ ಸಮಗ್ರ ಬದಲಾವಣೆ ತರಬೇಕು. ಅನ್ನದಾತನಿಗೆ ಅಧಿಕ ಆದಾಯ ಹಾಗೂ ಹೆಚ್ಚು ಲಾಭ ದೊರಕಿಸಿಕೊಡಬೇಕಾದರೆ ತೋಟಗಾರಿಕಾ ಬೆಳೆಗಳಿಗೆ ಒತ್ತು ನೀಡಬೇಕಿದೆ. ರಫ್ತು ಆಧಾರಿತ ಮಾರುಕಟ್ಟೆ ವ್ಯವಸ್ಥೆ, ಪೊಟ್ಟಣೀಕರಣ ಹಾಗೂ ಸಂಗ್ರಹಣಾ ವ್ಯವಸ್ಥೆಯನ್ನು ರೂಪಿಸಬೇಕಿದೆ ಎಂದಿದ್ದಾರೆ. ರೈತರಿಗೆ ನ್ಯಾಯಯುತ ಬೆಲೆ ಖಚಿತಪಡಿಸುವ ಮಾದರಿ ಹಾಗೂ ಪ್ರಾಯೋಗಿಕ ಯೋಜನೆಯನ್ನು ರಾಷ್ಟ್ರದಲ್ಲಿಯೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ. ರೈತರ ಆತಂಕದ ದಿನಗಳು ದೂರವಾಗಬೇಕು, ಧ್ವನಿ ಇಲ್ಲದವರಿಗೆ ಧ್ವನಿಯಾಗಬೇಕು, ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ಅವರು ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದ್ದಾರೆ. ರಾಜ್ಯಪಾಲರ ಭಾಷಣದಲ್ಲಿ ರೈತರ ಅಭಿವೃದ್ಧಿ ಬಗ್ಗೆ ಚರ್ಚಿಸಲಾಗಿದೆಯೇ ಹೊರತು, ಸಾಲ ಮನ್ನಾದ ಬಗ್ಗೆ ಪ್ರಸ್ತಾಪ ಮಾಡಿಲ್ಲ.

# ಸರ್ವರಿಗೂ ಶಿಕ್ಷಣ, ಆರೋಗ್ಯ :
ಬೆಂಗಳೂರು, ಜು.2- ಸರ್ವರಿಗೂ ಶಿಕ್ಷಣ, ಆರೋಗ್ಯ, ವಸತಿ ನೀಡುವುದು ಆದ್ಯತೆಯಾಗಿದ್ದು, ಅನ್ನದಾತ ರೈತನನ್ನು ಸಾಲದ ಸುಳಿಯಿಂದ ಹೊರತಂದು ಆಧುನಿಕ ಕೃಷಿ ತಂತ್ರಜ್ಞಾನ ಆಧಾರಿತ ಬಳಕೆಗೆ ಸಜ್ಜುಗೊಳಿಸುವುದೂ ಸೇರಿದಂತೆ ಪ್ರತಿಯೊಬ್ಬ ನಾಗರಿಕರ ಹಿತ ಕಾಪಾಡುವ ಹೊಸ ದೃಷ್ಟಿ, ಹೊಸ ದಾರಿಯಲ್ಲಿ ಸಮ್ಮಿಶ್ರ ಸರ್ಕಾರ ಹೆಜ್ಜೆ ಇಡಲಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಪ್ರಕಟಿಸಿದರು. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನವಾದ ಇಂದು ವಿಧಾನಸಭೆಯಲ್ಲಿ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಶಿಕ್ಷಣವೇ ಶಕ್ತಿ ಎಂಬುದರ ಅರಿವು ಸರ್ಕಾರಕ್ಕಿದ್ದು, ಶಿಕ್ಷಣದಲ್ಲಿ ಕೌಶಲ್ಯ ಸಹಿತ ವೃತ್ತಿ ತರಬೇತಿಯನ್ನು ಕಡ್ಡಾಯಗೊಳಿಸಲು ಚಿಂತಿಸಲಾಗಿದೆ ಎಂದರು.

ಸಮಾಜದ ಎಲ್ಲಾ ವರ್ಗದ ಅವಕಾಶ ವಂಚಿತರು, ಹಿಂದುಳಿದವರು, ಮಹಿಳೆಯರು, ಯುವ ಜನಾಂಗ ಹಾಗೂ ರೈತರ ಕಲ್ಯಾಣಕ್ಕೆ ಕಂಕಣಬದ್ಧವಾಗಿದ್ದು, ಹಳ್ಳಿ ಮತ್ತು ಪಟ್ಟಣದ ಅಭಿವೃದ್ಧಿಗೆ ಸರಿಸಮಾನವಾದ ಯೋಜನೆಗಳನ್ನು ರೂಪಿಸಲಾಗುವುದು ಎಂದು ಹೇಳಿದರು. ವಿಧಾನಸಭೆಗೆ ಹಲವು ಶಾಸಕರು ಮೊದಲ ಬಾರಿಗೆ ಪ್ರವೇಶ ಪಡೆದಿದ್ದಾರೆ. ಅನುಭವಿಗಳ ಜ್ಞಾನ ಹೊಸ ಸದಸ್ಯರಿಗೆ ಮಾರ್ಗಸೂಚಿಯಾಗಲಿ ಎಂದು ಹಾರೈಸಿದರು. ಸರ್ಕಾರದ ಅಭಿವೃದ್ಧಿ ಯೋಜನೆಯ ಪ್ರಯೋಜನಗಳು ಪ್ರತಿಯೊಬ್ಬ ನಾಗರಿಕರಿಗೆ ತಲುಪುವಂತೆ ಹಾಗೂ ಸರ್ವರ ವಿಕಾಸವನ್ನು ಸಾಧಿಸುವ ಗುರಿ ಹೊಂದಿದ್ದು, ತೃಪ್ತಿಕರವಾದ ರೀತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಬರಲಾಗುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಪೊಲೀಸ್ ತರಬೇತಿ ಸಾಮಥ್ರ್ಯವನ್ನು ಹೆಚ್ಚಿಸಲಾಗುವುದು.

ಮುಂದಿನ ಐದು ವರ್ಷಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸಲಾಗುತ್ತದೆ. ಎಲ್ಲಾ ಪೊಲೀಸ್ ಆಯುಕ್ತರ ಕಚೇರಿಗಳಲ್ಲಿ ನಿರ್ಭಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಎಲ್ಲಾ ಪೊಲೀಸ್ ಠಾಣೆ ಹಾಗೂ ಕಚೇರಿಗಳಲ್ಲಿ ಮಹಿಳೆಯರಿಗೆ ಶೌಚಾಲಯ ನಿರ್ಮಾಣ ಮಾಡುವುದರ ಜತೆಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲಾಗುವುದು.

ಹಾಲಿನ ಉತ್ಪಾದನೆಯಲ್ಲಿ ದೇಶದಲ್ಲಿ ಎರಡನೇ ಸ್ಥಾನ ಹಾಗೂ ಕೋಳಿ ಮೊಟ್ಟೆ ಉತ್ಪಾದನೆಯಲ್ಲಿ ಏಳನೆ ಸ್ಥಾನವನ್ನು, ಮಾಂಸ ಉತ್ಪಾದನೆಯಲ್ಲಿ 11ನೇ ಸ್ಥಾನವನ್ನು ರಾಜ್ಯ ಹೊಂದಿದ್ದು, ಸದ್ಯದಲ್ಲಿಯೇ ರಾಜ್ಯ ಮೇವು ಭದ್ರತಾ ನೀತಿಯನ್ನು ರೂಪಿಸಲಿದೆ ಎಂದು ರಾಜ್ಯಪಾಲರು ಪ್ರಕಟಿಸಿದರು. ಚರ್ಮ ಸಂಸ್ಕರಣೆ ಮತ್ತು ಹದ ಮಾಡುವ ಕೇಂದ್ರವನ್ನು ಸ್ಥಾಪನೆ ಮಾಡಲಾಗುವುದು. ಕೆರೆಗಳನ್ನು ತುಂಬಿಸುವ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಿ, ಕಾಲುವೆಗಳಲ್ಲಿ ನೀರಿನ ಹರಿವನ್ನು ಮಾಪನ ಮಾಡಲು ಎಸ್‍ಸಿಎಡಿಎ ತಂತ್ರಜ್ಞಾನವನ್ನು ಅಳವಡಿಸಲಾಗುವುದು. ರಾಜ್ಯದಲ್ಲಿ 1,101 ಚ.ಕಿ.ಮೀ. ಅರಣ್ಯ ವ್ಯಾಪ್ತಿ ವಿಸ್ತರಣೆಯಾಗಿದ್ದು, ಹುಲಿ, ಆನೆ, ಚಿರತೆ, ಸಿಂಗಲೀಕಗಳ ಸಂಖ್ಯೆಯ ವಿಷಯದಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದೆ ಎಂದು ರಾಜ್ಯಪಾಲರು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯವನ್ನು ರಾಷ್ಟ್ರದಲ್ಲಿಯೇ ಒಂದು ಮಾದರಿ ರಾಜ್ಯವನ್ನಾಗಿ ಮಾಡಲು ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕು. ಸರ್ಕಾರದ ಯೋಜನೆಗಳನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯಲು ಹಾಗೂ ಜನರಿಗೆ ತಲುಪಿಸಲು ಜನಪ್ರತಿನಿಧಿಗಳ ಸಹಕಾರ ಅಗತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಕಾರ್ಯ ನಿರ್ವಹಿಸಿ ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ದೊರಕಿಸೋಣ ಎಂದರು.

# ಒಂದೇ ಮೊಬೈಲ್ ವೇದಿಕೆಯಲ್ಲಿ ಎಲ್ಲ ಸರ್ಕಾರಿ ಸೇವೆಗಳು : 
ಬೆಂಗಳೂರು,ಜು.2- ಸರ್ಕಾರದ ಎಲ್ಲಾ ಇಲಾಖೆಗಳ ಸೇವೆಗಳನ್ನು ಒಂದೇ ಮೊಬೈಲ್ ವೇದಿಕೆಯಲ್ಲಿ ಒದಗಿಸಲು ಅನುಕೂಲವಾಗುವಂತೆ ಏಕೀಕೃತ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ರಾಜ್ಯಪಾಲ ವಜೂಭಾಯಿ ವಾಲ ಹೇಳಿದ್ದಾರೆ. ವಿಧಾನಸಭೆ, ವಿಧಾನಪರಿಷತ್ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರದಲ್ಲಿ ಮೊದಲ ಬಾರಿಗೆ ಏಕೀಕೃತ ಮೊಬೈಲ್ ವೇದಿಕೆಯನ್ನು ರೂಪಿಸಲಾಗಿದೆ. ನಾಡಕಛೇರಿ ಮತ್ತು ಪ್ರಾದೇಶಿಕ ಸಾರಿಗೆ ಕಛೇರಿ ಸೇವೆಗಳಿಗೆ ಡಿಜಿಟಲ್ ಲಾಕರ್‍ಗಳನ್ನುಅನುಷ್ಠಾನಗೊಳಿಸಲಾಗಿದೆ ಎಂದು ತಿಳಿಸಿದರು.

ಮಾಹಿತಿಯನ್ನು ಒದಗಿಸಲು ವಿಶ್ವಾಸಾರ್ಹವಾದ ರಾಜ್ಯ ವಿಸ್ತೃತ ಪ್ರದೇಶ ಸಂಪರ್ಕ(ಕೆಸ್ವಾನ್) ಜಾಲವನ್ನು ಅಭಿವೃದ್ಧಿಪಡಿಸಲಾಗಿದೆ. ಇದರಿಂದ ರಾಜ್ಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸರ್ಕಾರಿ ಕಚೇರಿಗಳನ್ನು ಸಂಪರ್ಕಿಸಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ವಿಡಿಯೋ ಸಮಾವೇಶಗಳ ಸೌಲಭ್ಯ ಕಲ್ಪಿಸಲಾಗಿದೆ ಎಂದು ಅವರು ವಿವರಿಸಿದರು.

Sri Raghav

Admin