Friday, June 6, 2025
Homeರಾಜ್ಯಆರ್‌ಸಿಬಿ ವಿಜಯೋತ್ಸವ ಕಾಲ್ತುಳಿದ ಕೂಲಂಕುಷ ತನಿಖೆಗೆ ರಾಜ್ಯಪಾಲರ ಸೂಚನೆ

ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿದ ಕೂಲಂಕುಷ ತನಿಖೆಗೆ ರಾಜ್ಯಪಾಲರ ಸೂಚನೆ

Governor orders thorough investigation into RCB victory celebration stampede

ಬೆಂಗಳೂರು, ಜೂ.5- ಆರ್‌ಸಿಬಿ ವಿಜಯೋತ್ಸವದ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೆಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದ ಘಟನೆಯನ್ನು ಕೂಲಂಕುಷವಾಗಿ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಸೂಚನೆ ನೀಡಿದ್ದಾರೆ.

ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಆರ್‌ಸಿಬಿಯ ಐಪಿಎಲ್‌ ವಿಜಯೋತ್ಸವದ ಸಂಭ್ರಮಾಚರಣೆ ಸಮಯದಲ್ಲಿ ಚಿನ್ನಸ್ವಾಮಿ ಕ್ರೆಡಾಂಗಣದ ಹೊರಗೆ ಸಂಭವಿಸಿದ ದುರಂತದ ಕುರಿತು ನನಗೆ ವಿಷಾದವಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ದುರಂತದ ಬಗ್ಗೆ ಸರ್ಕಾರ ಕೂಲಂಕಷ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ದುರಂತದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

RELATED ARTICLES

Latest News