Sunday, September 15, 2024
Homeರಾಜ್ಯವೈದ್ಯರ ರಕ್ಷಣೆ ಮಸೂದೆಗೆ ಗವರ್ನರ್ ಅಂಕಿತ

ವೈದ್ಯರ ರಕ್ಷಣೆ ಮಸೂದೆಗೆ ಗವರ್ನರ್ ಅಂಕಿತ

ಬೆಂಗಳೂರು,ಆ.20- ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿ ಮಾಡಲು ಮುಂದಾಗಿರುವ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ – 2024ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಕಾಯ್ದೆ ಜಾರಿ ಸಂಬಂಧಿಸಿ ಇದೀಗ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಮಳೆಗಾಲದ ಅಧಿವೇಶನದಲ್ಲಿ ಜುಲೈ 25ರಂದು ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ – 2024ಕ್ಕೆ ವಿಧಾನ ಪರಿಷತ್‍ನಲ್ಲಿ ಅಂಗೀಕಾರ ಸಿಕ್ಕಿತ್ತು. ಇದೀಗ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಕಾಯ್ದೆ ಪ್ರಕಾರ ಉದ್ದೇಶ ಪೂರ್ವಕ ವಾಗಿ ವೈದರ ಮೇಲೆ ಹಲ್ಲೇ, ನಿಂದನೆ, ಅವಮಾನಿಸುವುದನ್ನು ನಿಷೇಸಲಾಗಿದೆ. ವೈದ್ಯರ ಮೇಲಿನ ಹಲ್ಲೇಗೆ 3 ವರ್ಷದಿಂದ 7 ವರ್ಷದ ತನಕ ಜೈಲು ಶಿಕ್ಷೆ ಹಾಗೂ 25 ಸಾವಿರದಿಂದ 2 ಲಕ್ಷದವರೆಗೆ ದಂಡ ವಿಸಲು ಅವಕಾಶವಿದೆ. ಇನ್ನು ನಕಲಿ ವೈದ್ಯರ ಮೇಲಿನ ದಂಡ 10 ಸಾವಿರದಿಂದ 1 ಲಕ್ಷದವರೆಗೆ ಏರಿಕೆ ಮಾಡಲಾಗಿದೆ.

ಇನ್ನು ವೈದ್ಯಕೀಯ ಪರಿಷತ್‍ನ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರನ್ನು ಹೊರತುಪಡಿಸಿ ಇತರೆ ಸದಸ್ಯರು, ನಾಮನಿರ್ದೇಶಿತರ ಅವಧಿಯನ್ನು 5 ವರ್ಷಕ್ಕೆ ನಿಗದಿಪಡಿಸಲಾಗಿದೆ. ಎರಡು ಅವಗೆ ಅಧ್ಯಕ್ಷ ಅಥವಾ ಉಪಾಧ್ಯಕ್ಷರಾಗಿದ್ದವರು ಮತ್ತೆ ಅದೇ ಸ್ಥಾನಕ್ಕೆ ಚುನಾಯಿತರಾಗಲು ಅವಕಾಶವಿರುವುದಿಲ್ಲ. ಪರಿಷತ್‍ಗೆ 3 ವರ್ಷಗಳ ಅವಧಿಗೆ ಒಬ್ಬ ರಿಜಿಸ್ಟ್ರಾರ್ ಮತ್ತು ಉಪ ರಿಜಿಸ್ಟ್ರಾರ್ ನೇಮಕ ಮಾಡಲಾಗುತ್ತದೆ.

ಈ ಕಾಯ್ದೆ ಪ್ರಕಾರ ವೈದ್ಯರು ವೃತ್ತಿಯಲ್ಲಿ ಕಾರ್ಯ ನಿರ್ವಹಿಸ ಬೇಕಾದರೆ, ವೈದ್ಯಕೀಯ ಪರಿಷತ್ತಿ ನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರ ಬೇಕು. ಒಂದು ವೇಳೆ ನೋಂದಣಿ ಯಾಗದೆ ವೃತ್ತಿ ಅಭ್ಯಾಸ ಮಾಡುತ್ತಿದ್ದರೆ, ಅಂತಹವರ ವಿರುದ್ಧ ಪರಿಷತ್ ಕ್ರಮ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪರಿಷತ್ತಿನಲ್ಲಿ ನೋಂದಣಿಯಾಗದವರು ವೈದ್ಯ ವೃತ್ತಿ ನಿರ್ವಹಿಸು ವಂತಿಲ್ಲ. ನಕಲಿ ವೈದ್ಯರ ವಿರುದ್ಧ ಪರಿಷತ್ ಸ್ವಯಂ ಪ್ರೇರಣೆಯಿಂದ ದೂರು ಸಲ್ಲಿಸಬಹುದಾಗಿದೆ.

ವೈದ್ಯಕೀಯ ಪರಿಷತ್ತಿಗೆ ರಿಜಿಸ್ಟರ್ ಹಾಗೂ ಉಪ ರಿಜಿಸ್ಟರ್‍ಗಳನ್ನು ನೇಮಕ ಮಾಡುವ ವ್ಯವಸ್ಥೆಯಲ್ಲೂ ಬದಲಾವಣೆ ತರಲಾಗಿದೆ. ಪರಿಷತ್ತಿಗೆ ಸಭೆ ನಡೆಸುವ ವೇಳೆ, ಸ್ಥಳ ಹಾಗೂ ಕಾರ್ಯವಿಧಾನಗಳ ಬಗ್ಗೆಯೂ ವಿವರಿಸಲಾಗಿದೆ. ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷರು, ಒಂದು ವೇಳೆ ಇಬ್ಬರು ಲಭ್ಯವಿಲ್ಲದ ಸಂದರ್ಭದಲ್ಲಿ ಸದಸ್ಯರು ಸಭೆಯ ಅಧ್ಯಕ್ಷತೆ ವಹಿಸಬಹುದು ಎಂದು ತಿಳಿಸಲಾಗಿದೆ. ಪರಿಷತ್ತಿನ ರಿಜಿಸ್ಟ್ರಾರ್ ಅವರು ವೈದ್ಯಕೀಯ ವೃತ್ತಿಗರ ಪಟ್ಟಿಯನ್ನು ಪ್ರತಿದಿನ ಅಕೃತ ಜಾಲತಾಣದಲ್ಲಿ ನಿರ್ವಹಿಸಬೇಕು ಮತ್ತು ರಾಷ್ಟ್ರೀಯ ಆಯೋಗಕ್ಕೆ ತಿಳಿಸಬೇಕು ಎಂದು ಸೂಚಿಸಲಾಗಿದೆ.

ಇನ್ನು ಮುಂದೆ ವೈದ್ಯಕೀಯ ಸೇವಾ ಸಿಬ್ಬಂದಿ ಯನ್ನು ಸಾಮಾಜಿಕ ಜಾಲತಾಣ ಗಳಲ್ಲಿ, ಆಡಿಯೊ- ವಿಡಿಯೊಗಳಲ್ಲಿ, ಆಸ್ಪತ್ರೆ ಗಳಲ್ಲೇಗಲಿ ಫೋಟೊ, ವಿಡಿಯೋ ತೆಗೆಯುವ ಮೂಲಕ ಅಗೌರವಿಸುವ, ದೌರ್ಜನ್ಯ ಎಸಗುವ ಕೃತ್ಯಗಳನ್ನು ನಡೆಸಿದರೆ ಅಂತಹ ಕೃತ್ಯಗಳೂ ದಂಡನಾರ್ಹವಾಗಲಿವೆ.

RELATED ARTICLES

Latest News