Monday, June 17, 2024
Homeರಾಜ್ಯರಾಜ್ಯಪಾಲರನ್ನು ಹಾಡಿ ಹೊಗಳಿದ ಸಿಎಂ ಸಿದ್ದು

ರಾಜ್ಯಪಾಲರನ್ನು ಹಾಡಿ ಹೊಗಳಿದ ಸಿಎಂ ಸಿದ್ದು

ಬೆಂಗಳೂರು,ಫೆ.20- ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಡಿ ಹೊಗಳಿದ್ದಾರೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡುತ್ತಿದ್ದ ಮುಖ್ಯಮಂತ್ರಿಯವರು ಕೇರಳ ಮತ್ತು ತಮಿಳುನಾಡಿನಲ್ಲಿ ಅಲ್ಲಿನ ರಾಜ್ಯಪಾಲರು ಸರ್ಕಾರದ ಭಾಷಣವನ್ನು ಓದದೇ ತಮ್ಮದೇ ಅಭಿಪ್ರಾಯವನ್ನು ಮಂಡಿಸಿದ್ದಾರೆ ಅಥವಾ ಭಾಷಣ ಮಾಡದೇ ಹೊರನಡೆದಿದ್ದಾರೆ. ನಮ್ಮ ರಾಜ್ಯಪಾಲ ತಾವರ್‍ಚಂದ್ ಗೆಹ್ಲೋಟ್ ಆ ರೀತಿ ಮಾಡಿಲ್ಲ. ಸರ್ಕಾರದ ನಿಲುವು, ನೀತಿ, ಮುನ್ನೋಟ ಕಾರ್ಯಕ್ರಮವನ್ನು ಸ್ಪಷ್ಟವಾಗಿ ಸದನದ ಮುಂದಿಟ್ಟಿದ್ದಾರೆ ಎಂದರು.

ಈ ಮೂಲಕ ರಾಜ್ಯಪಾಲರು ತಮ್ಮ ಸ್ಥಾನದ ಗೌರವವನ್ನು ಉಳಿಸಿಕೊಂಡಿರುವುದಲ್ಲದೆ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದರು. ಸರ್ಕಾರ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದೆ. ರಾಜ್ಯಪಾಲರ ಒಳ್ಳೆಯತನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಎಂದಾಗ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ನೆಲದಡಿ ಕುಕ್ಕರ್‌ನಲ್ಲಿ ಅಡಗಿಸಿಟ್ಟಿದ 2 ಕೆಜಿ ಸ್ಪೋಟಕ ವಶ

ನಾವು ಯಾರ ಒಳ್ಳೆಯತನವನ್ನೂ ದುರುಪಯೋಗಪಡಿಸಿಕೊಳ್ಳುವುದಿಲ್ಲ. ನಿಮ್ಮ ಒಳ್ಳೆಯತನವನ್ನು ಈವರೆಗೂ ದುರುಪಯೋಗ ಮಾಡಿಕೊಂಡಿಲ್ಲ ಎಂದು ಮುಖ್ಯಮಂತ್ರಿಯವರು ಬಸವರಾಜ ಬೊಮ್ಮಾಯಿಯವರಿಗೆ ತಿರುಗೇಟು ನೀಡಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯಪಾಲರನ್ನು ಹೊಗಳಿದರೂ ಬಿಜೆಪಿಯವರಿಗೆ ಸಹಿಸಲಾಗುತ್ತಿಲ್ಲ ಎಂದು ಲೇವಡಿ ಮಾಡಿದರು.

RELATED ARTICLES

Latest News