Friday, July 19, 2024
Homeರಾಜ್ಯಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಪ್ರಶಂಸಿಸಿದ ರಾಜ್ಯಪಾಲ ಗೆಹ್ಲೋಟ್

ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಪ್ರಶಂಸಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು, ಅ. 8- ಭಾರತವು ಒಲಿಂಪಿಕ್ಸ್, ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಂಸಿಸಿದರು. ನಗರದ ಕಂಠೀರವ ಕ್ರೀಡಾಗಂಣದಲ್ಲಿ 62 ನೇ ಓಪನ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಅಡಿಯಲ್ಲಿ ಆಯೋಜಿಸಲಾದ ಬೆಂಗಳೂರು ಮ್ಯಾರಥಾನ್ ಅನ್ನು ಇಂದು ಉದ್ಘಾಟಿಸಿ ಮಾತನಾಡಿದ ಅವರು, 19ನೇ ಏಷ್ಯನ್ ಗೇಮ್ಸ್‍ನಲ್ಲಿ ಭಾರತೀಯ ಆಟಗಾರರು ತಮ್ಮ ದಾಖಲೆ ಮುರಿದ ಪ್ರದರ್ಶನದ ಮೂಲಕ ದೇಶಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಶ್ಲಾಘಿಸಿದರು.

ಬೆಂಗಳೂರು ಮ್ಯಾರಥಾನ್‍ನಲ್ಲಿ ವಿಶ್ವದ ವಿವಿಧ ಭಾಗಗಳಿಂದ ಸಾವಿರಾರು ಸ್ರ್ಪಧಿಗಳು ಭಾಗವಹಿಸುತ್ತಿರುವುದು ಸಂತಸದ ವಿಷಯ. ಈ ಘಟನೆಯು ಕರ್ನಾಟಕವನ್ನು ಅಂತಾರಾಷ್ಟ್ರೀಯ ಕ್ರೀಡಾ ಹಬ್ ಆಗಿ ಮಾಡುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ ಎಂದರು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-10-2023)

ಭಾರತ ಸರ್ಕಾರದ ಕ್ರೀಡಾ ಸಚಿವಾಲಯ ಮತ್ತು ಕ್ರೀಡಾ ಸಂಸ್ಥೆಗಳು ಹಾಗೂ ಕರ್ನಾಟಕ ಸರ್ಕಾರವು ಅನೇಕ ಕ್ರೀಡಾ ಯೋಜನೆಗಳನ್ನು ಮಾಡಿವೆ. ಆಟಗಾರರು ಅವುಗಳ ಲಾಭವನ್ನು ಪಡೆಯುತ್ತಿದ್ದಾರೆ. ಇದರಿಂದಾಗಿ ಕ್ರೀಡೆಯ ಮಟ್ಟ ಸುಧಾರಿಸಿದೆ. ಅದರ ಫಲಿತಾಂಶ ಇಂದು ನಮ್ಮೆಲ್ಲರ ಮುಂದಿದೆ ಎಂದರು.

ಈ ಮ್ಯಾರಾಥಾನ್ ನಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಶುಭಕೋರಿದ ರಾಜ್ಯಪಾಲರು, ಅತ್ಯುತ್ತಮ ಪ್ರದರ್ಶನ ಮತ್ತು ಉಜ್ವಲ ಭವಿಷ್ಯಕ್ಕಾಗಿ ಭಾಗವಹಿಸುವ ಎಲ್ಲಾ ಆಟಗಾರರಿಗೆ ಶುಭ ಹಾರೈಸಿದರು.

ಜೆಸಿ ರಸ್ತೆ ಸ್ಟೀಲ್ ಬ್ರಿಡ್ಜ್ ಬದಲಿಗೆ ಕಾಂಕ್ರಿಟ್ ಸೇತುವೆ ನಿರ್ಮಾಣ

ಈ ಸಂದರ್ಭದಲ್ಲಿ ಕ್ರೀಡಾ ಸಚಿವರಾದ ಬಿ. ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ , ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ. ಗೋವಿಂದರಾಜ್, ಓಟದ ನಿರ್ದೇಶಕ ನಾಗರಾಜ್, ಅರ್ಜುನ್ ಪ್ರಶಸ್ತಿ ಪುರಸ್ಕೃತ ಡಾ. ರೀತ್ ಅಬ್ರಹಾಂ, ವಿಪ್ರೋ ಮುಖ್ಯಸ್ಥ ಎಚ್.ಆರ್. ಸೌರಭ್ ಗೋವಿಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

RELATED ARTICLES

Latest News