ಬೆಂಗಳೂರು,ಫೆ.12- ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಸುರಂಗ ರಸ್ತೆ ನಿರ್ಮಾಣದ ಸಾಧಕ ವರದಿ ಪರಿಶೀಲನೆ ಯಾಗುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ತಿಳಿಸಿದ್ದಾರೆ. ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಇಂದು ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಟನಲ್ ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಸಾಧಕ ವರದಿಯನ್ನು ಸಿದ್ದಪಡಿಸಲಾಗುತ್ತಿದೆ. ಬೆಂಗಳೂರು ಮೆಟ್ರೊ ಹಂತ-2 ರಿಚ್ 5ರಲ್ಲಿ ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‍ವರೆಗಿನ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು 2024ರ ಜುಲೈ ವೇಳೆಗೆ ಕಾರ್ಯಾಚರಣೆಯ ಸಾಧ್ಯತೆ ಇದೆ.
ಸೆಂಟ್ರಲ್ ಸಿಲ್ಕ್‍ಬೋರ್ಡ್‍ನಿಂದ ಕೃಷ್ಣರಾಜಪುರದವರೆಗೆ ಮತ್ತು ಕೃಷ್ಣರಾಜಪುರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗಿನ ಕಾಮಗಾರಿಗಳು 2026ರ ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಬಿಬಿಎಂಪಿಗೆ ಸೇರ್ಪಡೆಯಾದ 110 ಹಳ್ಳಿಗಳ ಪ್ರದೇಶಗಳಿಗೆ 775 ಎಂಎಲ್‍ಡಿ ಹೆಚ್ಚುವರಿ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆ 2024ರ ಮಾರ್ಚ್‍ಗೆ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದ್ದಾರೆ.
ರಾಜ್ಯಪಾಲರ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಯಾವುದೂ ಇಲ್ಲ : ಕುಮಾರಸ್ವಾಮಿ
ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಬೈಯಪ್ಪನಹಳ್ಳಿ ಚಿಕ್ಕಬಾಣವಾರ ನಡುವಿನ 25 ಕಿ.ಮೀಗಳ ಕಾರಿಡಾರ್‍ನ ಸಿವಿಲ್ ಕಾಮಗಾರಿ ಪ್ರಗತಿಯಲ್ಲಿದೆ. ಹೀಲಲಿಗೆ ರಾಜಾನುಕುಂಟೆ ನಡುವಿನ 46.24 ಕಿ.ಮೀ ಕಾರಿಡಾರ್‍ನ ಸಿವಿಲ್ ಕಾಮಗಾರಿಗೆ ಟೆಂಡರ್ ಅಂತಿಮಗೊಂಡಿದ್ದು, ಶೀಘ್ರವೇ ಕೆಲಸ ಆರಂಭವಾಗಲಿದೆ ಎಂದು ವಿವರಿಸಿದ್ದಾರೆ.