Friday, November 22, 2024
Homeರಾಜ್ಯಸಿಎಂ ಸಿದ್ದರಾಮಯ್ಯಗೆ 2ನೇ ನೋಟೀಸ್‌‍ ನೀಡಲು ಮುಂದಾದ ರಾಜ್ಯಪಾಲರು..?

ಸಿಎಂ ಸಿದ್ದರಾಮಯ್ಯಗೆ 2ನೇ ನೋಟೀಸ್‌‍ ನೀಡಲು ಮುಂದಾದ ರಾಜ್ಯಪಾಲರು..?

ಬೆಂಗಳೂರು,ಆ.6– ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ( ಮೂಡಾ)ದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಎರಡನೇ ಬಾರಿ ಮತ್ತೊಂದು ನೋಟೀಸ್‌‍ ನೀಡಲು ಮುಂದಾಗಿದ್ದಾರೆ.ಈ ಹಿಂದೆ ನೀಡಿದ್ದ ಶೋಕಾಸ್‌‍ ನೋಟಿಸ್‌‍ಗೆ ರಾಜ್ಯಸರ್ಕಾರ ನೀಡಿರುವ ಉತ್ತರ ಸಮರ್ಪಕವಾಗಿಲ್ಲ ಎಂದು ಆಕ್ಷೇಪಿಸಿರುವ ರಾಜ್ಯಪಾಲರು ಎರಡನೇ ಬಾರಿ ಶೋಕಾಸ್‌‍ ನೋಟಿಸ್‌‍ ಜಾರಿ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಸರ್ಕಾರದ ಪರವಾಗಿ ಮುಖ್ಯಕಾರ್ಯದರ್ಶಿಯವರು ನೀಡಿರುವ ಉತ್ತರಕ್ಕೂ, ಪ್ರಕರಣಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಹೀಗಾಗಿ ಮತ್ತೊಮೆ ಶೋಕಾಸ್‌‍ ನೋಟಿಸ್‌‍ ನೀಡುವಂತೆ ರಾಜ್ಯಪಾಲರಿಗೆ ಸ್ವತಃ ಕಾನೂನು ತಜ್ಞರೇ ಸಲಹೆ ಮಾಡಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.ನಿನ್ನೆ ದೆಹಲಿಯಿಂದ ಆಗಮಿಸಿದ ರಾಜ್ಯಪಾಲರು ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ನೀಡಿರುವ ಉತ್ತರದ ಬಗ್ಗೆ ಕಾನೂನು ತಜ್ಞರಿಂದ ಮಾಹಿತಿ ಪಡೆದಿದ್ದಾರೆ.

ಪ್ರಕರಣವನ್ನು ಸರ್ಕಾರ ಬಲವಾಗಿ ಸಮರ್ಥಿಸಿಕೊಂಡಿದ್ದು, ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯನವರನ್ನು ರಕ್ಷಣೆ ಮಾಡಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಶೋಕಾಸ್‌‍ ನೋಟಿಸ್‌‍ ಅನ್ನು ಹಿಂಪಡೆಯುವಂತೆ ಮನವಿ ಮಾಡಲಾಗಿದೆ. ಹೀಗಾಗಿ ಎರಡನೇ ಬಾರಿ ನೋಟಿಸ್‌‍ ನೀಡಿ ಮುಂದಿನ ಕ್ರಮ ಜರುಗಿಸಲು ಕಾನೂನು ತಜ್ಞರು ಸಲಹೆ ಕೊಟ್ಟಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಪ್ರಕರಣದಲ್ಲಿ ನಡೆದದ್ದೇ ರಾಜ್ಯಪಾಲರ ಈಗಿನ ನಡೆಗೆ ಕಾರಣ ಎನ್ನಲಾಗಿದೆ. ಅಂದಿನ ರಾಜ್ಯಪಾಲ ಹಂಸರಾಜ್‌ ಭಾರದ್ವಾಜ್‌ ಆದೇಶವನ್ನು ಯಡಿಯೂರಪ್ಪ ಪ್ರಶ್ನೆ ಮಾಡಿದ್ದರು. ರಾಜ್ಯಪಾಲರು ಅನುಮತಿ ಕೊಡುವಾಗ ಆರೋಪದ ಬಗ್ಗೆ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆಯುವ ಪ್ರಕ್ರಿಯೆಯನ್ನು ಸರಿಯಾಗಿ ನಡೆಸಿಲ್ಲ. ಆತುರಾತುರವಾಗಿ ನಿರ್ಧಾರ ಮಾಡಿ ನೋಟೀಸ್‌‍ ಕೊಟ್ಟಿದ್ದಾರೆ. ರಾಜ್ಯ ಸರ್ಕಾರವನ್ನು ಅಭದ್ರ ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದರು.

ಆಗ ಕೇಂದ್ರದಲ್ಲಿ ಯುಪಿಎ ಸರ್ಕಾರ ಇತ್ತು. ಹೀಗಾಗಿ ರಾಜಕೀಯ ಲಾಭ ಪಡೆಯಲು ಈ ನಿರ್ಧಾರ ಮಾಡಿದ್ದರು ಎಂದು ಯಡಿಯೂರಪ್ಪ ವಾದ ಮಾಡಿದ್ದರು. ಯಡಿಯೂರಪ್ಪ ವಾದವನ್ನು ಹೈಕೋರ್ಟ್‌ ಒಪ್ಪಿತ್ತು. ಜನಪ್ರತಿನಿಧಿಗಳ ಸರ್ಕಾರದ ನೇತೃತ್ವ ವಹಿಸಿರುವವರ ವಿರುದ್ಧ ಪ್ರಾಸಿಕ್ಯೂಶನ್‌ಗೆ ಕೊಡುವಾಗ ಮೂರು ಬಾರಿ ನೋಟೀಸ್‌‍ ಹಾಗೂ ಮೂರು ಬಾರಿ ಲೀಗಲ್‌ ಓಪಿನಿಯನ್‌ ಪಡೆದು ಮುಂದುವರಿಯಬೇಕು ಎಂದು ಹೈಕೋರ್ಟ್‌ ಆದೇಶ ಮಾಡಿತ್ತು.

ಹೀಗಾಗಿ ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಆರೋಪ ಕೇಳಿ ಬಂದಿರುವುದರಿಂದ, ಕಾನೂನು ಪ್ರಕ್ರಿಯೆ ಮಾಡುವಾಗ ಯಾವುದೇ ಲೋಪ ಆಗದಂತೆ ರಾಜ್ಯಪಾಲರು ಪದೇ ಪದೆ ನೋಟೀಸ್‌‍ ನೀಡುತ್ತಿದ್ದಾರೆ.ರಾಜ್ಯಪಾಲರು ಜುಲೈ 26ಕ್ಕೆ ಮುಖ್ಯಮಂತ್ರಿಗೆ ಮುಡಾ ಸಂಬಂಧ ಶೋಕಾಸ್‌‍ ನೋಟಿಸ್‌‍ ಕಳುಹಿಸಿದ್ದರು.

ಈ ನೋಟಿಸ್‌‍ನಲ್ಲಿ, ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆ 1988ರ ಸೆಕ್ಷನ್‌ 7, 9, 11, 12, ಮತ್ತು 15ರಲ್ಲಿ ಹಾಗೂ ಭಾರತೀಯ ನ್ಯಾಯ ಸಂಹಿತ 2023ರಡಿ ಸೆಕ್ಷನ್‌ 59, 61, 62, 201, 227, 228, 229, 239, 314, 316(5), 318(1)(2)(3), 319, 322, 324 (1)(2)(3), 335, 336, 338 ಮತ್ತು 340ರಲ್ಲಿ ನಿಮ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡುವಂತೆ ಕೋರಿ ಟಿ.ಜೆ.ಅಬ್ರಾಹಂ ಮನವಿ ಸಲ್ಲಿಸಿದ್ದಾರೆ. ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆ ಹಾಗೂ ಬಿಎನ್‌ಎಸ್‌‍ ಕಾಯ್ದೆಯ ವಿವಿಧ ಸೆಕ್ಷನ್‌ಗಳನ್ನು ಉಲ್ಲಂಸಿ ಮುಡಾದಲ್ಲಿ ನೀವು ಮತ್ತು ಕುಟುಂಬ ಸದಸ್ಯರು ಬದಲಿ ಪರಿಹಾರ ನಿವೇಶನಗಳನ್ನು ಪಡೆದಿರುವುದಾಗಿ ಟಿ.ಜೆ.ಅಬ್ರಾಹಂ ಆರೋಪಿಸಿದ್ದಾರೆ ಎಂದು ಉಲ್ಲೇಖಿಸಿದ್ದರು.

ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆಯ ಸೆಕ್ಷನ್‌ 17ಂ ಮತ್ತು 19 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತ ಕಾಯ್ದೆಯ ಸೆಕ್ಷನ್‌ 218ರಡಿಯ ನಿಯಮದಂತೆ ಅರ್ಜಿದಾರನ ಮನವಿಯ ಮೇಲೆ ಕ್ರಮ ಕೈಗೊಳ್ಳುವ ಅಗತ್ಯ ಇದೆೞ ಎಂದು ಶೋಕಾಸ್‌‍ ನೋಟಿಸ್‌‍ನಲ್ಲಿ ರಾಜ್ಯಪಾಲರು ತಿಳಿಸಿದ್ದರು.
ಹೀಗಾಗಿ, ಅಭಿಯೋಜನೆಗೆ ಏಕೆ ಅನುಮತಿ ನೀಡಬಾರದು ಎಂದು ಸಕಾರಣದೊಂದಿಗೆ ಸೂಕ್ತ ದಾಖಲೆಗಳ ಸಮೇತ ನಿಮ ವಿರುದ್ಧದ ಆರೋಪಗಳ ಬಗ್ಗೆ ಏಳು ದಿನಗಳೊಳಗಾಗಿ ಸ್ಪಷ್ಟನೆ ಸಲ್ಲಿಸುವಂತೆ ರಾಜ್ಯಪಾಲರು ಸೂಚಿಸಿದ್ದರು.

ಈ ಹಿಂದೆ ರಾಜ್ಯಪಾಲರು ನೀಡಿದ ನೋಟಿಸ್‌‍ಗೆ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ರಾಜ್ಯಪಾಲರ ಸಂವಿಧಾನಿಕ ಕಚೇರಿಯನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ರಾಜಕೀಯ ಕಾರಣಕ್ಕಾಗಿ ಕಾನೂನುಬದ್ಧವಾಗಿ ಚುನಾಯಿತವಾದ ಬಹುಮತದ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಘಟಿತ ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು.

ದೆಹಲಿಯಿಂದ ವಾಪಸ್‌‍ ಆಗಿರುವ ರಾಜ್ಯಪಾಲರು ಇದೀಗ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಲಿದ್ದಾರೆಯೇ, ಇಲ್ಲವೇ ಅಬ್ರಹಾಂ ನೀಡಿದ ದೂರನ್ನು ತಿರಸ್ಕರಿಸಲಿದ್ದಾರೆಯೇ ಎಂಬ ಚರ್ಚೆ ಪ್ರಾರಂಭವಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿಸಿದರೆ ಸರ್ಕಾರ ಹಾಗೂ ರಾಜಭವನದ ನಡುವೆ ರಾಜಕೀಯ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ. ಸದ್ಯಕ್ಕೆ ಸದ್ಯಕ್ಕೆ ರಾಜ್ಯಪಾಲರು ಕಾದು ನೋಡಲಿದ್ದಾರೆ ಎನ್ನಲಾಗುತ್ತಿದೆ.

ದೆಹಲಿಯಲ್ಲಿ ಸಂಸತ್‌ ಅಧಿವೇಶನ ನಡೆಯುತ್ತಿದ್ದು ಆ.12 ರಂದು ಮುಕ್ತಾಯಗೊಳ್ಳಲಿದೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸಿದರೆ, ಸದನದಲ್ಲಿ ಪ್ರತಿಪಕ್ಷಗಳು ಕೋಲಾಹಲ ಎಬ್ಬಿಸಬಹುದು ಎಂಬ ಕಾರಣಕ್ಕೆ ಅಲ್ಲಿಯವರೆಗೂ ಯಾವುದೇ ತೀರ್ಮಾನ ಕೈಗೊಳ್ಳುವುದು ಅನುಮಾನ ಎನ್ನಲಾಗಿದೆ. ಈ ಕಾರಣಕ್ಕೆ ಆ.12ರ ಬಳಿಕ ರಾಜ್ಯಪಾಲರು ತಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

RELATED ARTICLES

Latest News