Tuesday, April 30, 2024
Homeರಾಜ್ಯಒಲಂಪಿಕ್‍ನಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ

ಒಲಂಪಿಕ್‍ನಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ

ಬೆಂಗಳೂರು,ಫೆ.16- ಒಲಂಪಿಕ್‍ನಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ ರೂಪಾಯಿ, ಬೆಳ್ಳಿ ಪದಕ ಗೆದ್ದವರಿಗೆ 4 ಕೋಟಿ ರೂಪಾಯಿ ಹಾಗೂ ಕಂಚಿನ ಪದಕ ಗೆದ್ದವರಿಗೆ 3 ಕೋಟಿ ಪ್ರೋತ್ಸಾಹ ಧನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಶುಕ್ರವಾರ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದ್ದು, ಕಾಮನ್ ವೆಲ್ತ್‍ಗೇಮ್‍ನಲ್ಲಿ ಪದಕ ಗೆದ್ದವರಿಗೂ ಪ್ರೋತ್ಸಾಹ ಧನ ನೀಡುವುದಾಗಿ ತಿಳಿಸಿದ್ದಾರೆ.

ಕಾಮನ್ ವೆಲ್ತ್ ಗೇಮ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 35 ಲಕ್ಷ ರೂಪಾಯಿ, ಬೆಳ್ಳಿ ಪದಕ ಗೆದ್ದವರಿಗೆ 25 ಲಕ್ಷ ರೂಪಾಯಿ ಹಾಗೂ ಕಂಚಿನ ಪದಕ ಗೆದ್ದವರಿಗೆ 15 ಲಕ್ಷ ಬಹುಮಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಕಳೆದ ಸಾಲಿನ ಆಯವ್ಯಯದಲ್ಲಿ ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಾಡಿಲಾಗುವುದೆಂದು ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಇತರೆ ಇಲಾಖೆಗಳ ನೇಮಕಾತಿಯಲ್ಲೂ ಶೇಕಡಾ 2 ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು ಎಂದು ಹೇಳಿದ್ದಾರೆ.

ಯಾವ ಇಲಾಖೆಗೆ ಎಷ್ಟು ಅನುದಾನ..? : ಇಲ್ಲಿದೆ ಮಾಹಿತಿ

ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಅಂದಾಜು 70 ಎಕರೆ ನಿವೇಶನದಲ್ಲಿ ಅತ್ಯಾಧುನಿಕ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಮ ಸಮುಚ್ಛಯವ ಒಳಗೊಂಡ ಕ್ರೀಡಾ ನಗರವನ್ನು ಸಾರ್ವಜನಿಕರ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ ಮಾಡಲಾಗುವುದು ಎಂದರು. ರಾಜ್ಯದ ವಿವಿಧ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಹಾಗೂ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಒಟ್ಟಾರೆ 12 ಕೋಟಿ ರೂ. ಅನುದಾನ, ರಾಜ್ಯದ ಕ್ರೀಡಾಪಟುಗಳಿಗೆ ಅತ್ಯುನ್ನತ ಸ್ಪರ್ಧಾ ಅವಕಾಶ ಒದಗಿಸಲು ಪ್ರತಿ ವರ್ಷ ಒಂದು ರಾಜ್ಯ ಮಟ್ಟದ ಒಲಿಂಪಿಕ್ಸ್ ಮತ್ತು 14ವರ್ಷ ವಯೋಮಾನದ ಒಳಗಿನವರಿಗೆ ಮಿನಿ ಒಲಿಂಪಿಕ್ಸ್ ಅಯೋಜನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಸಮಯದಲ್ಲಿ ಗಾಯಗೊಂಡಲ್ಲಿ ಅವರ ಚಿಕಿತ್ಸೆಗೆ ನೆರವಾಗಲು ಆರೋಗ್ಯ ವಿಮೆ ಸೌಲಭ್ಯವನ್ನು ರಾಜ್ಯ ಸರ್ಕಾರದಿಂದ ಒದಗಿಸಲಾವುದು, ರಾಜ್ಯದ 14 ಸ್ಥಳಗಳಲ್ಲಿ ಮುಂದಿನ ಎರಡು ವರ್ಷದೊಳಗೆ 35 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯಗಳನ್ನು ನಿರ್ಮಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

RELATED ARTICLES

Latest News