ಬೆಂಗಳೂರು,ಫೆ.4- ಸರ್ಕಾರಿ ನೌಕರರು, ಅಧಿಕಾರಿಗಳು ಆಸ್ತಿ ವಿವರಗಳನ್ನು ಡಿಸೆಂಬರ್ 31ರ ಬದಲಿಗೆ ಮಾರ್ಚ್ 31ರೊಳಗೆ ಅಗತ್ಯ ದಾಖಲೆಗಳೊಂದಿಗೆ ಎಲ್ಲಾ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಮೂಲಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ನೌಕರರು ತಮ್ಮ ಚರ-ಸ್ಥಿರಾಸ್ತಿಯನ್ನು ವಿವರಗಳ ಬಗ್ಗೆ ಇನ್ನು ಪ್ರತಿ ವರ್ಷದ ಡಿಸೆಂಬರ್ 31ರ ಅಂತ್ಯಕ್ಕೆ ಸಲ್ಲಿಸುತ್ತಿದ್ದ ವಿವರಗಳನ್ನು ಇನ್ನು ಮುಂದೆ ಮಾರ್ಚ್ 31ರ ಅಂತ್ಯಕ್ಕೆ ಸಲ್ಲಿಸಬೇಕು.
ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿಯಾಗಿ ಅಣ್ಣಾಮಲೈ ನೇಮಕ
2022ರ ಜನವರಿ 1ರಿಂದ 2023ರ ಮಾರ್ಚ್ 31ರ ಅಂತ್ಯಕ್ಕೆ ಒಟ್ಟು 15 ತಿಂಗಳ ವಿವರಗಳನ್ನು ಏಪ್ರಿಲ್ ತಿಂಗಳಲ್ಲಿ ಸಲ್ಲಿಸಬೇಕು. ಮುಂದಿನ ಬಾರಿಯಿಂದ ಆಸ್ತಿ ಹೊಣೆಗಾರಿಕೆ ವಿವರಗಳನ್ನು ಪ್ರತಿ 12 ತಿಂಗಳಿಗೊಮ್ಮೆ ಆಯಾ ಅರ್ಥಿಕ ವರ್ಷದ ಏಪ್ರಿಲ್ 1ರಿಂದ ಮಾರ್ಚ್ 31ರವರೆಗೆ ವಿಳಂಬವಿಲ್ಲದೆ ಸಕಾಲದಲ್ಲಿ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
Govt, officials, submit, property, information, March 31, deadline,