ಜೋಧ್ಪುರ,ಮಾ.15- ವಿದ್ಯಾರ್ಥಿನಿಯರ ಮೈ ಕೈ ಮುಟ್ಟಿ ಅಸಹ್ಯವಾಗಿ ವರ್ತಿಸುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನೊಬ್ಬನನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ. ಆರೋಪಿ ಶಿಕ್ಷಕ ಭಗವಾನ್ ಸಿಂಗ್ ರಜಪೂತ್ (56) ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಿದ ನಂತರ ಆತನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ ಕಾಮುಕ ಶಿಕ್ಷಕನನ್ನು ಬಂಧಿಸಿ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ. ಪೊಲೀಸರ ಪ್ರಕಾರ, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಮಾರ್ಚ್ 10 ರಂದು ಜೋಧ್ಪುರ ಸಮೀಪದ ರಾಮನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರೋಪಿ ಮುಖ್ಯ ಶಿಕ್ಷಕರ ವಿರುದ್ಧ ದೂರು ದಾಖಲಿಸಿದ್ದರು.
ಕರ್ನಾಟಕ ವಿಧಾನಸಭಾ ಚುನಾವಣೆ ಸೆಮಿಫೈನಲ್ ಇದ್ದಂತೆ : ಹಿಮಂತ ಬಿಸ್ವ ಶರ್ಮ
ಶಿಕ್ಷಕ ಶಾಲಾ ಬಾಲಕಿಯರನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದು, ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರುದಾರರು ತಿಳಿಸಿದ್ದಾರೆ ಎಂದು ಕಪರ್ಡಾ ಪೊಲೀಸ್ ಠಾಣೆಯ ಎಸ್‍ಎಚ್‍ಓ ಜಮಾಲ್ ಖಾನ್ ತಿಳಿಸಿದ್ದಾರೆ.
5 ವರ್ಷಗಳ ನಂತರ ನಾಯಕ ಪಟ್ಟ ಅಲಂಕರಿಸಿದ ಸ್ಟೀವನ್ ಸ್ಮಿತ್
ಹುಡುಗಿಯರು ತಮ್ಮ ಪೋಷಕರಿಗೆ ಮಾಹಿತಿ ನೀಡಿದರು ನಂತರ ಅವರು ಪೊಲೀಸರನ್ನು ಸಂಪರ್ಕಿಸಿದರು, ನಂತರ ರಜಪೂತ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್ ಜೊತೆಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Govt, school, teacher, arrested, molesting, minor, girl, student, Rajasthan,