Saturday, July 20, 2024
Homeರಾಜ್ಯಪೆಟೋಲ್‌‍-ಡೀಸೆಲ್‌ ಬೆಲೆ ಏರಿಕೆ ಭಂಡತನದ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು : ಬಿವೈವಿ

ಪೆಟೋಲ್‌‍-ಡೀಸೆಲ್‌ ಬೆಲೆ ಏರಿಕೆ ಭಂಡತನದ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು : ಬಿವೈವಿ

ಬೆಂಗಳೂರು,ಜೂ.20- ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಪೆಟೋಲ್‌‍-ಡೀಸೆಲ್‌ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಒತ್ತಾಯಿಸಿದರು.

ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ತೆರಳುವ ಸೈಕಲ್‌ ಜಾಥಾದ ಆರಂಭದ ಸಂದರ್ಭದಲ್ಲಿ ಮಾತನಾಡಿದ ಅವರು, ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು ತಕ್ಷಣ ಕೈಬಿಡಬೇಕು. ಅಲ್ಲಿಯವರೆಗೆ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದು ಅವರು ಎಚ್ಚರಿಸಿದರು.

ಬಿಜೆಪಿ ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯದಾದ್ಯಂತ ಹೋರಾಟ ಮಾಡುತ್ತಿದೆ. ಮುಖ್ಯಮಂತ್ರಿಗಳು ತಮ ನಿರ್ಧಾರದಿಂದ ಹಿಂದೆ ಸರಿಯುವವರೆಗೆ ಈ ಹೋರಾಟದಿಂದ ವಿಮುಖರಾಗುವುದಿಲ್ಲ ಎಂದೂ ಅವರು ತಿಳಿಸಿದರು.

RELATED ARTICLES

Latest News