ಬೃಹತ್ ಪ್ರತಿಭಟನೆಯ ಎಚ್ಚರಿಕೆ ಕೊಟ್ಟ ಗ್ರಾ.ಪಂ. ನೌಕರರ ಸಂಘ

Social Share

ಬೆಂಗಳೂರು,ಫೆ.6- ಕೆಲ ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ನಡೆಯುತ್ತಿದ್ದು ಅದಕ್ಕೆ ಸರ್ಕಾರ ಯಾವುದೇ ಸ್ಪಂದನೆ ನೀಡುತ್ತಿಲ್ಲ. ಇಂದಿನಿಂದ ನಮ್ಮ ಬೇಡಿಕೆಗಳು ಈಡೇರುವವರಿಗೂ ಎಲ್ಲಾ ಗ್ರಾಮ ಪಂಚಾಯಿತಿ ನೌಕರರು ಕೆಲಸಕ್ಕೆ ಹಾಜರಾಗದೆ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದರೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್ ಡಿ ಪಿ ಆರ್ ಇಂದು ತಿಳಿಸಿದರು.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ ಬೊಲ್ಮಾ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ, ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಾದ ನಾವುಗಳು ಇಲಾಖೆಯ ಅಭಿವೃದ್ಧಿಗೆ ಕಳೆದ ಮೂರು ದಶಕಗಳಿಂದ ಹಗಲಿರುಳು ದುಡಿಯುತ್ತಿರುವ ಬಡ ಗ್ರಾಮ ಪಂಚಾಯತ್‌ ನೌಕರರಾದ ಬಿಲ್‌ ಕಲೇಟರ್ಸ್, ಕ್ಲರ್ಕ್ ಕಮ್ ಡಿಇಓ, ಡಾಟ ಎಂಟ್ರಿ ಆಪರೇಟರ್,

ಪರ ವಿರೋಧ ಚರ್ಚೆಗೆ ಗ್ರಾಸವಾದ ಮೋಹನ್ ಭಾಗವತ್‍ರ ಹೇಳಿಕೆ

ವಾಟರ್ ಮಾನ್‌, ಪಂಪು ಚಾಲಕ, ಶುಚಿತ ನೌಕರರು ಹಾಗೂ ಅಟೆಂಡರ್ ಗಳು ಭವಿಷ್ಯ ನಿಧಿ ಇಲ್ಲದೇ, ಆರೋಗ್ಯ ಭದ್ರತೆ ಇಲ್ಲದೇ, ಸರಿಯಾದ ವೇತನ ಶ್ರೇಣಿ ಇಲ್ಲದೇ, ಉದ್ಯೋಗ ಭದ್ರತೆ ಇಲ್ಲದೇ, ನಿವೃತ್ತಿ ಜೀವನಕ್ಕೆ ಭದ್ರತೆ ಇಲ್ಲದೇ ಕಳೆದ ಮೂರು ದಶಕಗಳಿಂದ ಕೇವಲ ಕನಿಷ್ಠ ಕೂಲಿ ಪಡೆದು ಕರ್ತವ್ಯ ನಿರ್ವಹಿಸುತ್ತಿದ್ದು, ನಮ್ಮ ಬೇಡಿಕೆಗಳನ್ನು ಸರಕಾರ ಈಡೇರಿಸುವಂತೆ ಸಹಸ್ರ ಸಂಖ್ಯೆಯಲ್ಲಿ 18000 ಕ್ಕೂ ಅಧಿಕ ಗ್ರಾಮ ಪಂಚಾಯತ್‌ ನೌಕರರೇ ಸೇರಿ ಹೋರಾಟವನ್ನು ನಡೆಸಿದೆವು,

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಗ್ರಾಮ ಪಂಚಾಯತ್‌ ನೌಕರರಿಗೆ ಸೂಕ್ತ ಸ್ಥಾನಮಾನ ಮತ್ತು ಸವಲತ್ತುಗಳನ್ನು ನೀಡದೇ ಕೇವಲ ಕನಿಷ್ಠ ವೇತನ ನೀಡಿ ಜೀತದಾಳುಗಳಂತೆ ಹಗಲಿರುಳು ಮಡಿಸಿಕೊಳ್ಳುತ್ತಿದ್ದು, ಗ್ರಾಮೀಣ ಭಾಗದಲ್ಲಿನ ರಾಜಕೀಯ ಒತ್ತಡ,

ಮೇಲಾಧಿಕಾರಿಗಳ ಒತ್ತಡದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯತ್‌ ನೌಕರರಾದ ನಾವು ಬಹು ಮುಖ್ಯ ಬೇಡಿಕೆಗಳನ್ನು ಈಡೇರಿಸುವಂತೆ ಹೋರಾಟ ನಡೆಸಿ ಒಂದು ತಿಂಗಳು ಕಳೆಯುತ್ತಾ ಬಂದರೂ ಸರಕಾರ ಯಾವುದೇ ರೀತಿಯಲಿಯೂ ಸಕಾರಾತ್ಮಕವಾಗಿ ಸ್ಪಂದಿಸದೇ ಪಂಚಾಯತ್ ನೌಕರರ ಬೇಡಿಕೆಗಳ ಕುರಿತು ಜಾಣ ಮೌನವಹಿಸಿರುವುದು ರಾಜ್ಯದ ಪಂಚಾಯತ್ ನೌಕರರ ಅಸಮಾಧಾನಕ್ಕೆ ಕಾರಣವಾಗಿದೆ.

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಬೌದ್ಧ ದೇವಾಲಯಕ್ಕೆ ಬೆಂಕಿ

ಬೆಳಗಾವಿಯ ಅಧೀವೇಶನದ ಸಂದರ್ಭದಲ್ಲಿ ಹೋರಾಟ ನಡೆಸಿ ಸರಕಾರಕ್ಕೆ ಸಲ್ಲಿಸಿದ ಮೂಲಭೂತ ಬೇಡಿಕೆಗಳನ್ನು ಇಲಿಯವರೆಗೂ ಸಂಘಟನೆಯೊಂದಿಗೆ ಚರ್ಚಿಸಿ ಇಡೇರಿಸದೇ ಇರುವ ಕಾರಣ ರಾಜ್ಯದ ಸಮಸ್ತ ಪಂಚಾಯತ್ ನೌಕರರನ್ನು ಒಗ್ಗೂಡಿಸಿ ಬೆಂಗಳೂರು ಚಲೋ-2023 ಕೆ ಚಾಲನೆ ನೀಡಿದ್ದೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಆರ್ ಕುಲಾಲ್, ಪ್ರಶಾಂತ್ ಕೆ, ಆಶ್ರಫ್, ಗಂಗಾಧ‌ ನಾಯ್ಕ, ಜಯಕುಮಾರ್ ಎ ಸಿ, ದಯಾನಂದ ಮುಂತಾದವರು ಉಪಸ್ಥಿತರಿದ್ದರು.

Gram Panchayat, Employees, Union, protest, Bengaluru,

Articles You Might Like

Share This Article