Monday, September 1, 2025
Homeಜಿಲ್ಲಾ ಸುದ್ದಿಗಳು | District Newsಬೆಳಗಾವಿ | Belagavi15 ವರ್ಷದ ಬಾಲಕಿಯನ್ನು ಮದುವೆಯಾದ ಗ್ರಾಮ ಪಂಚಾಯ್ತಿ ಅಧ್ಯಕ್ಷ

15 ವರ್ಷದ ಬಾಲಕಿಯನ್ನು ಮದುವೆಯಾದ ಗ್ರಾಮ ಪಂಚಾಯ್ತಿ ಅಧ್ಯಕ್ಷ

Gram Panchayat President Marries 15-Year-Old Girl

ಚಿಕ್ಕೋಡಿ, ಆ.31- ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷನೊಬ್ಬ 15 ವರ್ಷದ ಬಾಲಕಿಯನ್ನು ಮದುವೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸಚಿವರ ತವರೂರಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆ ಗ್ರಾಸವಾಗಿದೆ. ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬಸ್ಸಾಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷ ಭೀಮೇಶಿ ಕಾಲಿಮಣಿ ಎಂಬಾತ ಬಾಲ್ಯವಿವಾಹವಾಗಿದ್ದು, ಈ ಸಂಬಂಧ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರು ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ. ಪ್ರವೀಣ ನೇತೃತ್ವದಲ್ಲಿ ಪೊಲೀಸರು ಆತನ ಪತ್ತೆಗೆ ವಿಶೇಷ ತಂಡ ರಚಿಸಿದ್ದಾರೆ.

RELATED ARTICLES

Latest News