Friday, May 3, 2024
Homeರಾಜ್ಯಗ್ರಾಮ ವಿಕಾಸ್ ಯೋಜನೆಯಡಿ 991 ಗ್ರಾಮಗಳ ಅಭಿವೃದ್ಧಿ

ಗ್ರಾಮ ವಿಕಾಸ್ ಯೋಜನೆಯಡಿ 991 ಗ್ರಾಮಗಳ ಅಭಿವೃದ್ಧಿ

ಬೆಂಗಳೂರು,ಫೆ.14- ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಯಾವುದೇ ಗ್ರಾಮಗಳನ್ನು ಐಕ್ಯ ಮಾಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ವಿಧಾನಸಭೆಯಲ್ಲಿ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯು 2017-18 ರಲ್ಲಿ ಪ್ರಾರಂಭವಾಗಿದ್ದು, ಈ ಯೋಜನೆಯಡಿ 991 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ.

ಆಯ್ಕೆಯಾಗಿರುವ ಗ್ರಾಮಗಳಲ್ಲಿ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಕೆಲವೊಂದು ಕಾಮಗಾರಿಗಳು ಜಮೀನಿನ ವಿವಾದ, ಕಾಮಗಾರಿಗಳ ಬದಲಾವಣೆ, ಸಾರ್ವಜನಿಕ ವಿರೋಧದಿಂದ ವಿಳಂಬವಾಗಿದೆ ಎಂದರು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 26 ಗ್ರಾಮಗಳು ಆಯ್ಕೆಯಾಗಿದ್ದು, 330 ಕಾಮಗಾರಿಗಳನ್ನು ಹಂಚಿಕೆ ಮಾಡಲಾಗಿದ್ದು, 294 ಕಾಮಗಾರಿಗಳು ಪೂರ್ಣಗೊಂಡಿವೆ. ಇನ್ನೂ 36 ಕಾಮಗಾರಿಗಳು ಬಾಕಿ ಇದ್ದು, ಶೀಘ್ರವೇ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಹಿಂದೆ ಪದ್ಮ ಪ್ರಶಸ್ತಿಗಳು ಮೌಲ್ಯ ಕಳೆದುಕೊಂಡಿದ್ದವು : ಉಪ ರಾಷ್ಟ್ರಪತಿ

ಆಯಾ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಆಯಾ ಇಲಾಖೆಯಲ್ಲೇ ಕೈಗೊಳ್ಳಲು ಸೂಚಿಸಲಾಗಿದೆ ಎಂದರು. ಇದಕ್ಕೂ ಮುನ್ನ ಮಾತನಾಡಿದ ಸುಬ್ಬಾರೆಡ್ಡಿ, 6 ವರ್ಷವಾದರೂ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಹಣ ಹಾಗೂ ಸಿಬ್ಬಂದಿ ಸಮಸ್ಯೆ ಇದೆ ಎಂದು ಸದನದ ಗಮನ ಸೆಳೆದರು.

RELATED ARTICLES

Latest News