ಬೆಂಗಳೂರು,ಡಿ. 8- ಕಂದಾಯ ಇಲಾಖೆಯಲ್ಲಿನ ಗ್ರಾಮ ಲೆಕ್ಕಿಗರ ವೃಂದದ ಹುದ್ದೆಯನ್ನು ಗ್ರಾಮ ಆಡಳಿತ ಅಧಿಕಾರಿಯೆಂದು ಮರು ನಾಮಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯಲ್ಲಿನ ಗ್ರಾಮ ಲೆಕ್ಕಿಗರ ಹುದ್ದೆ, ವೇತನ ಶ್ರೇಣಿ, ನೇಮಕಾತಿ ವಿಧಾನ ಅಥವಾ ಕರ್ತವ್ಯ ಮತ್ತು ಜವಾಬ್ದಾರಿಗಳಲ್ಲಿ ಯಾವುದೇ ಬದಲಾವಣೆ ಮಾಡದೇ ಗ್ರಾಮ ಲೆಕ್ಕಿಗರ ಎಂಬ ಪದನಾಮವನ್ನು ಗ್ರಾಮ ಆಡಳಿತಾಧಿಕಾರಿ ಎಂದು ಮರು ಪದನಾಮೀಕರಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.
ಗ್ರಾಮ ಲೆಕ್ಕಿಗ ಎಂಬ ಪದನಾಮವನ್ನು ಗ್ರಾಮ ಆಡಳಿತಾಧಿಕಾರಿ ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿರುವುದನ್ನು ಕರ್ನಾಟಕ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಕೇಂದ್ರ ಸಂಘ ಸ್ವಾಗತಿಸಿದೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ(LiVE)
ಸಂಘದ ಮನೆವಿ ಮೇರೆಗೆ ಈ ಬದಲಾವಣೆ ಮಾಡಲಾಗಿದೆ. ಹೊಸ ಪದ ನಾಮ ಸಮಸ್ತ ಗ್ರಾಮಿ ಲೆಕ್ಕಿಗರ ವೃಂದಕ್ಕೆ ಹರ್ಷ ತಂದಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಮಿ, ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಂಘದ ರಾಜ್ಯಾಧ್ಯಕ್ಷ ಬಿ. ದೊಡ್ಡ ಬಸಪ್ಪ ರೆಡ್ಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಬಲ್ ಇಂಜಿನ್ ಸರ್ಕಾರವೆಂದು ಎದೆ ಬಡಿದುಕೊಳ್ಳಬೇಡಿ, ಗಡಿ ವಿವಾದ ಬಗೆ ಹರಿಸಿ: ಸಿದ್ದರಾಮಯ್ಯ
grama panchayat, village accountant, administrator Officer