ಬೆಂಗಳೂರು,ಫೆ.14- ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಆಗಮಿಸಿದ ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ಅವರನ್ನು ವಿಧಾನಸೌಧದ ಮೆಟ್ಟಿಲುಗಳ (ಗ್ರಾಂಡ್ ಸ್ಟೆಪ್ಸ್) ಬಳಿ ವಿಧಾನಸಭಾಧ್ಯಕ್ಷ ವಿಶ್ವೇರ್ಶವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕಾನೂನು ಸಚಿವ ಮಾಧುಸ್ವಾಮಿ, ಉಭಯ ಸದನದ ಕಾರ್ಯದರ್ಶಿಗಳು ಸ್ವಾಗತ ಕೋರಿದರು.
ನಂತರ ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಹಾಕಿದ್ದ ರತ್ನಗಂಬಳಿ ಮೇಲೆ ರಾಜ್ಯಪಾಲರನ್ನು ಬರಮಾಡಿಕೊಂಡರು.
ರಾಜ್ಯಪಾಲರು ವಿಧಾನಸೌಧ ಪ್ರವೇಶಿಸುತ್ತಿದ್ದಂತೆ ಪೊಲೀಸ್ ವಾದ್ಯಗೋಷ್ಠಿಯಿಂದ ಸ್ವಾಗತವನ್ನು ಕೋರಲಾಯಿತು.
ಸಭಾಧ್ಯಕ್ಷರು ಮತ್ತು ಸಭಾಪತಿ, ಮುಖ್ಯಮಂತ್ರಿ ಸೇರಿದಂತೆ ಗಣ್ಯರು ರಾಜ್ಯಪಾಲರನ್ನು ವಿಧಾನಸಭೆಯ ಸಭಾಂಗಣಕ್ಕೆ ಕರೆತಂದರು.
ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಿದ ನಂತರ, ಅವರನ್ನು ಅದೇ ರೀತಿ ಬೀಳ್ಕೊಡಲಾಯಿತು.
