Saturday, September 23, 2023
Homeಇದೀಗ ಬಂದ ಸುದ್ದಿಗೃಹಜ್ಯೋತಿ ಯೋಜನೆ ಗೊಂದಲಗಳಿಗೆ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

ಗೃಹಜ್ಯೋತಿ ಯೋಜನೆ ಗೊಂದಲಗಳಿಗೆ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

- Advertisement -

ಬೆಂಗಳೂರು, ಜೂ.6- ಬಡವರು, ಬಾಡಿಗೆದಾರರು ಸೇರಿದಂತೆ 200 ಯುನಿಟ್ ಒಳಗೆ ವಿದ್ಯುತ್ ಬಳಸುವ ಎಲ್ಲರಿಗೂ ಗೃಹಜ್ಯೋತಿ ಯೋಜನೆಯ ಸೌಲಭ್ಯ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ.ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ 41ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. 200 ಯೂನಿಟ್‍ಗಳ ಒಳಗೆ ವಿದ್ಯುತ್ ಬಳಕೆ ಮಾಡುವವರು ಬಿಲ್ ಕಟ್ಟುವ ಅಗತ್ಯವಿಲ್ಲ.

ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದ್ಯು ಸ್ಪಷ್ಟಪಡಿಸಿದರು.

- Advertisement -

ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲು ಯಾವ ನೈತಿಕ ಹಕ್ಕಿದೆ ಎಂದು ಪ್ರಶ್ನಿಸಿದ ಅವರು ಈ ಹಿಂದೆ 10 ಗಂಟೆಗಳ ಕಾಲ ಕೃಷಿಗೆ ವಿದ್ಯುತ್ ನೀಡುತ್ತೇವೆ ಎಂದು ಭರವಸೆ ನೀಡಿದ್ದರು. ಕೃಷಿ ಸಾಲ ಮನ್ನಾ ಮಾಡುತ್ತೇವೆ ಎಂದಿದ್ದರು. ಯಾವುದನ್ನೂ ಜಾರಿಗೆ ತರಲಿಲ್ಲ. ಅವರು ಹೇಳಿದ್ದನ್ನು ಮಾಡದೇ ಈಗ ನಮ್ಮ ಸರ್ಕಾರದ ವಿರುದ್ಧ ಮೊಸರಿನಲ್ಲಿ ಕಲ್ಲಿ ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಔರಂಗಜೇಬ್ ಪೋಸ್ಟರ್ ಹೊತ್ತೊಯ್ದ ಆರೋಪ : ನಾಲ್ವರ ವಿರುದ್ಧ ಕೇಸ್

ಜನವಿರೋಧಿ ಪಕ್ಷವಾಗಿರುವ ಬಿಜೆಪಿ ಅಧಿಕಾರದಲ್ಲಿದ್ದಾಗ ಲೂಟಿ ಹೊಡೆದು, ರಾಜ್ಯಕ್ಕೆ ಕೆಟ್ಟ ಹೆಸರು ತಂದಿತ್ತು.ಈಗ ನಮಗೆ ಪಾಠ ಹೇಳಿಕೊಡಲು ಬರುತ್ತಾರೆ ಎಂದರು. 2018ರಲ್ಲಿ 600 ಭರವಸೆಗಳನ್ನು ನೀಡಿ ಅದರಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ ಎಂದು ಪ್ರಶ್ನಿಸಿದ ಸಿದ್ಧರಾಮಯ್ಯನವರು ನಮ್ಮ ಸರ್ಕಾರ 15 ದಿನಗಳೊಳಗೆ ಎಲ್ಲಾ 15 ಗ್ಯಾರಂಟಿಗಳನ್ನು ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದೆ.

ಹಿಂದೆ ಅಧಿಕಾರದಲ್ಲಿದ್ದಾಗ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ ಎಂದರು. ಬಿಜೆಪಿ ಆಡಳಿತದಲ್ಲಿ ಇಂದಿರಾ ಕ್ಯಾಂಟೀನ್ ನಿಲ್ಲಿಸಲಾಯಿತು. ಕೃಷಿ ಹಾಗೂ ಪಶುಭಾಗ್ಯ, ಶೂ ಭಾಗ್ಯ, ಸೈಕಲ್ ಕೊಡುವುದನ್ನು ನಿಲ್ಲಿಸಿದರು ಎಂದು ಆರೋಪಿಸಿದರು. ದೇವರಾಜ ಅರಸು ಅವರು ನಾಡು ಕಂಡ ಮುತ್ಸದಿ ರಾಜಕಾರಣಿ. ಸರ್ಕಾರ ಗೌರವಯುತವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರ ಸ್ಮರಣೆ ಮಾಡಿದೆ. ಅವರು ಮುಖ್ಯ ಮಂತ್ರಿಯಾಗಿ ಹಾಗೂ ಅವರ ಜೀವಿತ ಕಾಲದಲ್ಲಿ ಮಾಡಿದ ಕೆಲಸ ನಮಗೆ ಸ್ಪೂರ್ತಿ. ಸಾಮಾಜಿಕ ನ್ಯಾಯದ ಹರಿಕಾರ. ಅನೇಕ ಸಾಮಾಜಿಕ, ಕ್ರಾಂತಿಕಾರಿ ತೀರ್ಮಾನಗಳನ್ನು ಕೈಗೊಂಡಿದ್ದರು.

ಭೂ ಸುಧಾರಣಾ ಕಾಯ್ದೆ, ಜೀತಪದ್ಧತಿ ಮುಕ್ತಿ, ಮಲಹೊರುವ ಪದ್ಧತಿಯನ್ನು ನಿಲ್ಲಿಸಿದ್ದು, ರೈತರ ಸಾಲ ವಿಮೋಚನಾ ಕಾಯ್ದೆ, ಹಾವನೂರು ಆಯೋಗ ರಚಿಸಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ, ಧ್ವನಿಯಿಲ್ಲದ ಜನರ ದನಿಯಾದರು ಎಂದರು.

ಪೊಲೀಸರ ಬೇಜವಾಬ್ದಾರಿ, ಅತ್ಯಾಚಾರಕ್ಕಾಳಗಾದ ಸಂತೃಸ್ಥೆಯ ತಂದೆ ಆತ್ಮಹತ್ಯೆ

ರಾಜಕೀಯ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯ
ಅನೇಕ ಜನರನ್ನು ಶಾಸಕರನ್ನಾಗಿಸಿ ಅವರಿಗೆ ಪ್ರಾತಿನಿಧ್ಯ ನೀಡುವ ಕೆಲಸ ಮಾಡಿದರು. ರಾಜಕೀಯ ವ್ಯವಸ್ಥೆಯಲ್ಲಿಯೂ ಸಾಮಾಜಿಕ ನ್ಯಾಯ ತರಲು ಶ್ರಮಿಸಿದರು. ಅಧಿಕಾರ ಎಲ್ಲರಿಗೂ ದೊರೆಯಬೇಕೆಂಬ ನಂಬಿಕೆ ಉಳ್ಳವರಾಗಿದ್ದರು. ಉಳುವವನೆ ಭೂಮಿ ಒಡೆಯ ಎಂಬ ಕ್ರಾಂತಿಕಾರಿ ತೀರ್ಮಾನಗಳನ್ನು ಮಾಡಿದವರು. ಅವರ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಎಂದರು. ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದಿಂದ 1982 ರಿಂದ 80 ರವರೆಗೆ ಮುಖ್ಯಮಂತ್ರಿಯಾಗಿ ಮಾಡಿದ ಕೆಲಸಗಳು ಜನರ ಮನಸ್ಸಿನಲ್ಲಿ ಸದಾ ಉಳಿದಿವೆ ಎಂದು ತಿಳಿಸಿದರು.

#GruhaJyothi, #FreeElectricity, #cmsiddaramaiah,

- Advertisement -
RELATED ARTICLES
- Advertisment -

Most Popular