Friday, November 22, 2024
Homeರಾಜ್ಯಗೃಹಲಕ್ಷ್ಮಿ ಯೋಜನೆ ತಾಂತ್ರಿಕ ಸಮಸ್ಯೆ ನಿವಾರಣೆಗೆ ವಿಶೇಷ ಅಭಿಯಾನ

ಗೃಹಲಕ್ಷ್ಮಿ ಯೋಜನೆ ತಾಂತ್ರಿಕ ಸಮಸ್ಯೆ ನಿವಾರಣೆಗೆ ವಿಶೇಷ ಅಭಿಯಾನ

ಬೆಂಗಳೂರು, ಡಿ.27- ಗೃಹಲಕ್ಷ್ಮಿ ಯೋಜನೆಯಲ್ಲಿ ಕಂಡುಬರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಹೆಚ್ಚು ಜನರಿಗೆ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಅಭಿಯಾನ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೂ ಚಾಲ್ತಿಯಲ್ಲಿರಲಿದೆ. ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು, ಬಾಪೂಜಿ ಸೇವಾಕೇಂದ್ರದ ಗಣಕಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು, ಎಲಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವೀಸ್ ತಂಡಗಳು ಅಭಿಯಾನದಲ್ಲಿ ಭಾಗವಹಿಸಲಿವೆ.

ಗೃಹಲಕ್ಷ್ಮಿ ಯೋಜನೆಯಡಿ ನೊಂದಾಯಿಸಿಕೊಂಡ ಬಹಳಷ್ಟು ಮಂದಿ ಬ್ಯಾಂಕ್ ಖಾತೆ ನೀಡುವಾಗ ಪತಿ ಅಥವಾ ಸಂಬಂಧಿಕರ ಖಾತೆಗಳ ಮಾಹಿತಿಯನ್ನು ಒದಗಿಸಿದ್ದಾರೆ. ಇದು ನೊಂದಾಯಿತ ಆಧಾರ್ ಸಂಖ್ಯೆ ಮತ್ತು ಮೊಬೈಲ್ ನಂಬರ್‍ಗೆ ಹೊಂದಾಣಿಕೆ ಆಗುತ್ತಿಲ್ಲ. ಹೀಗಾಗಿ ಶೇ.30ರಷ್ಟು ಮಂದಿಗೆ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2,000 ರೂ.ಗಳು ತಲುಪುತ್ತಿಲ್ಲ. ಈ ತಾಂತ್ರಿಕ ಸಮಸ್ಯೆಯನ್ನು ಒಂದೇ ಕಂತಿನಲ್ಲಿ ಬಗೆಹರಿಸಲು ಅಭಿಯಾನ ಆಯೋಜಿಸಲಾಗಿದೆ.

ರೊಚ್ಚಿಗೆದ್ದ ರಕ್ಷಣಾ ವೇದಿಕೆ, ಇಂಗ್ಲೀಷ್ ನಾಮಫಲಕಗಳ ಧ್ವಂಸ

ಆಧಾರ್ ಜೋಡಣೆ ಮಾಡುವುದು, ಗ್ರಾಹಕರ ವ್ಯಕ್ತಿಗತ ಮಾಹಿತಿ ಸಲ್ಲಿಕೆ, ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ಥಿತಿಗತಿ ಪರಿಶೀಲನೆ, ಬ್ಯಾಂಕ್ ಖಾತೆಗಳಲ್ಲಿ ತಾಂತ್ರಿಕ ಸಮಸ್ಯೆಯಿದ್ದರೆ ಹೊಸ ಖಾತೆ ಸ್ಥಾಪನೆ ಸೇರಿದಂತೆ ಎಲ್ಲಾ ಸೇವೆಗಳನ್ನೂ ಒದಗಿಸಲಾಗುತ್ತಿದೆ.

ಬ್ಯಾಂಕ್ ಅಧಿಕಾರಿಗಳು ಸ್ಥಳದಲ್ಲೇ ಇರುವುದರಿಂದ ಗೊಂದಲಗಳ ನಿವಾರಣೆಗೆ ಸಹಕಾರಿಯಾಗಲಿದೆ ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ತಿಳಿಸಿದೆ. ಗೃಹಲಕ್ಷ್ಮಿ ಯೋಜನೆಯಡಿ ನೊಂದಾಯಿಸಿಕೊಂಡು ಸೌಲಭ್ಯ ಪಡೆಯದೇ ಇರುವವವರು ಗ್ರಾಮ ಪಂಚಾಯಿತಿ ಅಥವಾ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

RELATED ARTICLES

Latest News