Tuesday, February 27, 2024
Homeಇದೀಗ ಬಂದ ಸುದ್ದಿರಾಜ್ಯಪಾಲರ ಮೂಲಕ ಜನರಿಗೆ ತಪ್ಪು ಮಾಹಿತಿ : ಜಿ.ಟಿ.ದೇವೇಗೌಡ

ರಾಜ್ಯಪಾಲರ ಮೂಲಕ ಜನರಿಗೆ ತಪ್ಪು ಮಾಹಿತಿ : ಜಿ.ಟಿ.ದೇವೇಗೌಡ

ಬೆಂಗಳೂರು, ಫೆ.12- ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣದ ಮೂಲಕ ತಪ್ಪು ಮಾಹಿತಿಯನ್ನು ಜನರಿಗೆ ಕೊಟ್ಟಿದ್ದಾರೆಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ. ಟಿ. ದೇವೇಗೌಡ ಇಂದಿಲ್ಲಿ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‍ಸಿ, ಎಸ್‍ಟಿ ಸಮುದಾಯಕ್ಕೆ 30 ಸಾವಿರ ಕೋಟಿ ರೂ. ಕೊಟ್ಟಿರುವುದಾಗಿ ಸುಳ್ಳು ಹೇಳಿಸಿದ್ದಾರೆ. ಕೇಂದ್ರ ಸರ್ಕಾರದ ಜಲಜೀವನ್, ನರೇಗಾ ಯೋಜನೆಗಳನ್ನು ತಮ್ಮ ಯೋಜನೆಗಳೆಂದು ಬಿಂಬಿಸಿಕೊಂಡಿದ್ದಾರೆ.

ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. 5 ಗ್ಯಾರಂಟಿಗಳ ಬಗ್ಗೆ ಭಾಷಣ ಮಾಡಿಸಿದ್ದಾರೆ ಹೊರತು ಹೊಸತೇನೂ ಇಲ್ಲ ಎಂದು ಹೇಳಿದರು. ರಾಜ್ಯದಲ್ಲಿ ಅನುದಾನ ಖಾಲಿಯಾಗಿದ್ದು, ಕೇಂದ್ರದ ಕಡೆ ಬೆರಳು ಮಾಡುವುದನ್ನು ಪರಿಪಾಠ ಮಾಡಿಕೊಂಡಿದ್ದಾರೆ. ರೈತರಿಗೆ 2 ಸಾವಿರ ರೂ. ಬರಪರಿಹಾರ ಧನ ಇನ್ನೂ ತಲುಪಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರ, ಸೀಟು ಹಂಚಿಕೆ ಬಗ್ಗೆ ಎರಡು ಪಕ್ಷಗಳ ವರಿಷ್ಠರು ತೀರ್ಮಾನಿಸುತ್ತಾರೆ. ಯಾರೂ ಅಪಸ್ವರ ಎತ್ತಬಾರದೆಂದು ಹೇಳಿದ್ದಾರೆ. ನಾವೆಲ್ಲರೂ ಪ್ರೀತಿಯಿಂದ ಒಗ್ಗಟ್ಟಾಗಿದ್ದೇವೆ. ಲೋಕಸಭಾ ಚುನಾವಣೆಗೆ ನಾವ್ಯಾರೂ ಅಭ್ಯರ್ಥಿಗಳನ್ನು ಶಿಫಾರಸ್ಸು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೇರಳ : ಅಕ್ರಮ ಪಟಾಕಿ ಗೋದಾಮಿನಲ್ಲಿ ಭಾರೀ ಸ್ಫೋಟ, ಓರ್ವ ಸಾವು, ಹಲವರಿಗೆ ಗಾಯ

ಜೆಡಿಎಸ್‍ನಿಂದ ಯಾರೂ ಕೂಡ ಕಾಂಗ್ರೆಸ್‍ಗೆ ಹೋಗುವುದಿಲ್ಲ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕಾಂಗ್ರೆಸ್ ಸರ್ಕಾರದ ಮೇಲೂ ಕಮಿಷನ್ ಆರೋಪ ಮಾಡಿದ್ದಾರೆ. ಆದರೆ ಇದನ್ನು ಸರ್ಕಾರದವರು ಒಪ್ಪುತ್ತಿಲ್ಲ ಎಂದು ಹೇಳಿದರು.

RELATED ARTICLES

Latest News