ಬೆಂಗಳೂರು,ಆ.8- ಕಳೆದ ಮೂರು ವರ್ಷದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ 3 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್‌ಗಾಂಧಿ ಅವರು ರಾಜ್ಯಕ್ಕೆ ಆಗಮಿಸಿರುವುದನ್ನು ಸ್ವಾಗತಿಸಿರುವ ಅವರು, ತಾಯಿ ಮಹಾಲಕ್ಷ್ಮಿಯು ಹಣಕಾಸು ಸಂಕಷ್ಟದಲ್ಲಿರುವ ರಾಜ್ಯಸರ್ಕಾರಕ್ಕೆ ಸರ್ವ ಐಶ್ವರ್ಯ ಪ್ರಾಪ್ತಿಸಲಿ ಎಂದು ಪ್ರಾರ್ಥಿಸೋಣ ಎಂದಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದ ಜಿಎಸ್‌ಡಿಪಿಯಲ್ಲಿ ಸಾಲದ ಪ್ರಮಾಣ ಶೇ 24.91 ರಷ್ಟು ಆಗಿದೆ. ನಿಮ ಗ್ಯಾರಂಟಿ ಯೋಜನೆಗೆ ಪ್ರತಿ ವರ್ಷ 55 ಸಾವಿರ ಕೋಟಿ ರೂ. ಬೇಕಾಗಿದೆ.
ಕಳೆದ ಮೂರು ವರ್ಷದಿಂದ ನಿಮ ಸರ್ಕಾರ ಮಾಡುತ್ತಿರುವ ಸಾಲ ವರ್ಷಕ್ಕೆ ಒಂದು ಲಕ್ಷ ಕೋಟಿ ರೂ. ಎಂದು ಟೀಕಿಸಿದ್ದಾರೆ.ಕಾಂಗ್ರೆಸ್ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲ ಎಂದು ಹೇಳುತ್ತಿದ್ದು, ಇದು ರಾಜ್ಯಸರ್ಕಾರದ ಆರ್ಥಿಕ ಸಂಕಷ್ಟವನ್ನು ದೃಢಪಡಿಸುತ್ತದೆ ಎಂದಿದ್ದಾರೆ.