Friday, July 19, 2024
Homeರಾಜಕೀಯಶೀಘ್ರದಲ್ಲೇ ಪತನವಾಗಲಿದೆ ಗ್ಯಾರಂಟಿ ಸರ್ಕಾರ : ಕುತೂಹಲ ಕೆರಳಿಸಿದ ಹೆಚ್ಡಿಕೆ ಹೇಳಿಕೆ

ಶೀಘ್ರದಲ್ಲೇ ಪತನವಾಗಲಿದೆ ಗ್ಯಾರಂಟಿ ಸರ್ಕಾರ : ಕುತೂಹಲ ಕೆರಳಿಸಿದ ಹೆಚ್ಡಿಕೆ ಹೇಳಿಕೆ

ಬೆಂಗಳೂರು,ಸೆ.30- ಜೆಡಿಎಸ್, ಬಿಜೆಪಿ ಮೈತ್ರಿಯ ಬೆನ್ನಲ್ಲೇ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗೆದ್ದು, ರಚಿಸಿರುವ ಭರ್ಜರಿ ಬಹುಮತ ಸರ್ಕಾರ ಪತನಗೊಳ್ಳಲಿದೆ ಎಂಬ ಹೇಳಿಕೆಗಳು ಹಲವು ಅನುಮಾನಗಳನ್ನು ಹುಟ್ಟುಹಾಕಿವೆ.

ಸರ್ಕಾರ ರಚನೆಯಾದ ದಿನದಿಂದಲೂ ಅದನ್ನು ಪತನಗೊಳಿಸಲು ನಾನಾ ರೀತಿಯ ಪ್ರಯತ್ನಗಳು ನಡೆಯುತ್ತಲೇ ಇವೆ. ಆದರೆ ಬಿಜೆಪಿಯಲ್ಲಿ ನಾಯಕತ್ವ ಇನ್ನೂ ಸ್ಪಷ್ಟವಾಗದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಯಶಸ್ವಿಯಾಗಿಲ್ಲ.ಇದಕ್ಕೆ ಎದುರಾಗಿ ಕಾಂಗ್ರೆಸ್ ಹಲವು ಕಡೆ ಆಪರೇಷನ್ ಹಸ್ತ ನಡೆಸಿ ಜೆಡಿಎಸ್, ಬಿಜೆಪಿ ಶಾಸಕರನ್ನು ಸೆಳೆಯಲು ಯತ್ನ ನಡೆಸಿತ್ತು. ಆದರೆ ಅದು ಪೂರ್ಣಗೊಂಡಿಲ್ಲ.

ಈ ಮೊದಲು 2019 ರಲ್ಲಿ ಜೆಡಿಎಸ್, ಕಾಂಗ್ರೆಸ್ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಬಿಜೆಪಿ ಪತನಗೊಳಿಸಿತ್ತು.ಅದೇ ರೀತಿ ಈ ಮೊದಲು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು, ಮಹಾರಾಷ್ಟ್ರದಲ್ಲಿ ಮಹಾವಿಕಾಸ ಅಘಾಡಿ ಸರ್ಕಾರವನ್ನು ಪತನಗೊಳಿಸಲಾಗಿದೆ.

ಸದ್ಯಕ್ಕೆ ಲೋಕಸಭೆ ಚುನಾವಣೆ ಇರುವುದರಿಂದಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಗಟ್ಟಿಯಾಗಿದೆ. ಇಲ್ಲವಾಗಿದ್ದರೆ ಈ ವೇಳೆಗೆ ಅದನ್ನು ಪತನಗೊಳಿಸಲಾಗುತ್ತಿತ್ತು ಎಂಬ ವ್ಯಾಖ್ಯಾನಗಳಿವೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಅಸ್ತಿತ್ವಕ್ಕೆ ಕಂಠಕವಾಗುವುದು ಶತಸಿದ್ಧ ಎಂದು ಈಗಾಗಲೇ ಹಲವು ನಾಯಕರು ಬಹಿರಂಗ ಹೇಳಿಕೆ ನೀಡಿದ್ದಾರೆ.

BIG NEWS : ದೆಹಲಿಯಲ್ಲಿ ಐಸಿಸ್ ಶಂಕಿತ ಉಗ್ರರು, ರಕ್ತದೋಕುಳಿಗೆ ಪ್ಲಾನ್..!

ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಬೇಕು ಎಂದು ಹೇಳಿಕೆ ನೀಡಿದ ಸಚಿವ ಕೆ.ಎನ್.ರಾಜಣ್ಣ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಯಾದರೆ ಸರ್ಕಾರ ವಜಾಗೊಳಿಸುವ ಸಾಧ್ಯತೆ ಇದೆ ಎಂದು ಹೇಳಿದರು. ಗೃಹಸಚಿವ ಡಾ.ಜಿ.ಪರಮೇಶ್ವರ್ ಸಹ ಅದಕ್ಕೆ ದನಿಗೂಡಿಸಿದ್ದರು. ಬಿಜೆಪಿಯ ನಾಯಕರು ಪದೆ ಪದೆ ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂಬ ಹೇಳಿಕೆ ನೀಡುತ್ತಲೇ ಇದ್ದಾರೆ. ಈಗ ಕುಮಾರಸ್ವಾಮಿಯವರು ನೀಡಿರುವ ಹೇಳಿಕೆ ಪರಿಸ್ಥಿತಿಯ ಗಂಭೀರತೆಯನ್ನು ಅನಾವರಣ ಮಾಡಿದೆ.

ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಸಿಗದೆ ಸಾಕಷ್ಟು ಮಂದಿ ಅಸಮಾಧಾನದಿಂದ ಕುದಿಯುತ್ತಿದ್ದಾರೆ. ಹಿರಿಯ ನಾಯಕ ಶ್ಯಾಮನೂರು ಶಿವಶಂಕರಪ್ಪ ಅವರು ಲಿಂಗಾಯಿತರಿಗೆ ಸರಿಯಾದ ಆದ್ಯತೆ ನೀಡಿಲ್ಲ, ಲಿಂಗಾಯಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಹೇಳಿಕೆಯ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದರೆ ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಹೇಳಿಕೆ ಅವಾಸ್ತವ ಎನಿಸುವುದಿಲ್ಲ.

ಕಾಂಗ್ರೆಸ್ನಲ್ಲಿ ಕುಮಾರಸ್ವಾಮಿ ಹೇಳಿಕೆಯನ್ನು ಹತಾಶದ ಪರಮಾವ ಎನ್ನುವ ಮೂಲಕ ತಳ್ಳಿಹಾಕಲಾಗುತ್ತಿದೆ. ಆದರೆ ಪಕ್ಷದ ಒಳಗೇ ಇರುವ ಬೇಗುದಿ ತಣ್ಣಗಾಗಿಲ್ಲ. ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿರುವವರು ತೆರೆಮರೆಯಲ್ಲಿ ಚಟುವಟಿಕೆಯನ್ನು ಮುಂದುವರೆಸುವುದು, ಕೆಲವರು ನಾಯಕರು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿರುವುದು ನಿತ್ಯನೂತನವಾಗಿದೆ.

ಸಿದ್ದರಾಮಯ್ಯ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಬಿ.ಕೆ.ಹರಿಪ್ರಸಾದ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಸಹಿಸಿಕೊಂಡಿರುವುದು, ಯಾವುದೇ ಕ್ರಮ ತೆಗೆದುಕೊಳ್ಳದೆ ಉದ್ದೇಶಪೂರ್ವಕವಾಗಿ ಕಡೆಗಣಿಸುವುದು, ಬಣ ರಾಜಕೀಯಗಳ ಅಸಲಿಯತ್ತನ್ನು ತೆರೆದುಕೊಳ್ಳುವಂತೆ ಮಾಡಿದೆ.

ಹೀಗಾಗಿ ಕುಮಾರಸ್ವಾಮಿ ಹೇಳಿಕೆ ಸುಳ್ಳಾಗುವುದಿಲ್ಲ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಹಿಂದೆ 2018 ರಲ್ಲಿನ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದಾಗ ಜೆಡಿಎಸ್ ಜೊತೆ ಸಮ್ಮಿಶ್ರ ಸರ್ಕಾರ ರಚಿಸಿದ ಕಾಂಗ್ರೆಸಿಗರು ಅಧಿಕಾರದ ಅಮಲಿನಲ್ಲಿ ಸಂಘಟನೆಯನ್ನು ನಿರ್ಲಕ್ಷಿಸಿದ್ದರು.

ಅದಕ್ಕೆ ಪ್ರತಿಫಲವಾಗಿ ಆ ವೇಳೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಹಿನ್ನಡೆ ಕಂಡಿತ್ತು. ಬಿಜೆಪಿ ಸರ್ಕಾರದ ಅವಯಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಲವು ಗಂಭೀರ ಆರೋಪಗಳು ಕಾಂಗ್ರೆಸ್ ಬಲವನ್ನು ಹೆಚ್ಚಿಸಿದ್ದವೇ ಹೊರತು ಸಂಘಟನೆಗಳ ಸ್ವಂತ ಬಲ ನಿರೀಕ್ಷಿತ ಮಟ್ಟದಲ್ಲಿಲ್ಲ ಎಂಬ ವ್ಯಾಖ್ಯಾನಗಳು ಕೇಳಿಬರುತ್ತಿವೆ.

RELATED ARTICLES

Latest News