ಬೆಂಗಳೂರು,ಮಾ.17- ಅತಿಥಿ ಉಪನ್ಯಾಸಕರ ಬಾಕಿ ಇರುವ ವೇತನವನ್ನು ಕಾಲಮಿತಿಯೊಳಗೆ ಬಿಡುಗಡೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಸಾಕ್ಷರಾತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿಧಾನ ಪರಿಷತ್‌ನಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಅವರು, ಅತಿಥಿ ಉಪನ್ಯಾಸಕರಿಗೆ ಸರ್ಕಾರ ವತಿಯಿಂದ ಪ್ರತಿ ತಿಂಗಳು 10,500 ರೂ. ಗೌರವ ಧನ ನೀಡಿಲಾಗುತ್ತಿದೆ. ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಮತ್ತೆ 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ ಎಂದು ಹೇಳಿದರು.
ಮಂಡ್ಯ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ಗೌರವ ಧನ ನೀಡುವುದು ಬಾಕಿ ಇದೆ. ಇದಕ್ಕೆ ತಾಂತ್ರಿಕ ಕಾರಣಗಳು ಇರುವ ಕಾರಣ ಈ ಸಮಸ್ಯೆ ಎದುರಾಗಿದೆ. ಇನ್ನು 3 ದಿನಗಳಲ್ಲಿ ಹಣ ಬಿಡುಗಡೆ ಮಾಡಲಗುವುದು. ಇದರ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದು ಆಶ್ವಾಸನೆಯನ್ನು ಮಧು ಬಂಗಾರಪ್ಪ ನೀಡಿದರು.
ಅತಿಥಿ ಉಪನ್ಯಾಸಕರ ಗೌರವ ಧನವನ್ನು ಹೆಚ್ಚಳ ಮಾಡಬೇಕು ಎಂದು ಸದಸ್ಯರು ಮನವಿ ಮಾಡಿಕೊಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆಸಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಲಾಗುವುದು. ಅವರ ಹಿತವನ್ನು ಕಾಪಾಡಲು ನಮ ಸರ್ಕಾರ ಬದ್ಧವಿದೆ ಎಂದು ಹೇಳಿದರು.