ಬೆಂಗಳೂರು, ಜ.17- ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರುಗಳ ಸೇವಾ ಅವಯನ್ನು ಜನವರಿ 31ರವರೆಗೆ ವಿಸ್ತರಣೆ ಮಾಡಲಾಗಿದೆ. 2021-22ನೇ ಸಾಲಿನಲ್ಲಿ ಆಯ್ಕೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಸೇವಾ ಅವಧಿಯನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸೇವಾ ಅವಧಿ ವಿಸ್ತರಿಸಲು ಅನುಮೋದನೆ ನೀಡಿರುವುದಾಗಿ ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.
ಈ ಸಂಬಂದ ಸುತ್ತೋಲೆ ಹೊರಡಿಸಿರುವ ಕಾಲೇಜು ಶಿಕ್ಷಣ ಇಲಾಖೆಯು ಅತಿಥಿ ಉಪನ್ಯಾಸಕರ ಸೇವಾ ಅವಧಿ ವಿಸ್ತರಿಸಿರುವುದಾಗಿ ತಿಳಿಸಿದೆ. ವಿವಿಧ ದಿನಾಂಕಗಳಂದು ಆನ್ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆಗೊಂಡು ಸರ್ಕಾರಿ ಪಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ.
23 ಲಕ್ಷ ಹೋಟೆಲ್ ಬಿಲ್ ಪಾವತಿಸದೆ ಪರಾರಿಯಾದ ರಾಜಮನೆತನದ ಉದ್ಯೋಗಿ
ಮುಂದುವರಿಕೆ: ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ, ಪ್ರಾದೇಶಿಕ ಕಚೇರಿ ಹಾಗೂ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್ಗಳು ಮತ್ತು ಗ್ರೂಪ್ ಡಿ ಸಿಬ್ಬಂದಿಗಳ ಸೇವೆಯನ್ನು ಫೆಬ್ರವರಿ ಅಂತ್ಯವರೆಗೆ ಮುಂದುವರೆಸಲಾಗಿದೆ.
102 ಡಾಟಾ ಎಂಟ್ರಿ ಆಪರೇಟರ್ಗಳು ಮತ್ತು 347 ಗ್ರೂಪ್ ಡಿ ಸಿಬ್ಬಂದಿಗಳ ಹೊರಗುತ್ತಿಗೆ ಸೇವೆಯ ಅವಧಿ ಡಿ.20ರಂದು ಮುಕ್ತಾಯಗೊಂಡಿತ್ತು. ಹೀಗಾಗಿ ಅವರ ಸೇವಾ ಅವಧಿಯನ್ನು ಫೆಬ್ರವರಿ ಅಂತ್ಯದವರೆಗೆ ವಿಸ್ತರಿಸಿರುವುದಾಗಿ ಕಾಲೇಜು ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.
guest lecturers, service, extend,