ಲಾಕ್ ಡೌನ್ ಮಾರ್ಗಸೂಚಿಯಲ್ಲಿ ಬದಲಾವಣೆ: ಕೆಲ ಹೊಸ ನಿಯಮ ಸೇರ್ಪಡೆ

ಬೆಂಗಳೂರು, ಮೇ 9 – ಕರ್ನಾಟಕ ಸರ್ಕಾರ ಮೇ 10ರ ಸೋಮವಾರದಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಆದರೆ ಕೆಲವು ಅಂಶಗಳಲ್ಲಿ ಬದಲಾವಣೆ ಮಾಡಲಾಗಿದೆ.

ನೂತನ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದೆ. ಪರಿಷ್ಕೃತ ಮಾರ್ಗಸೂಚಿಯ ಪ್ರಕಾರ ಮದುವೆಯಲ್ಲಿ 40 ಜನರು ಭಾಗವಹಿಸಬಹುದು. ಮೊದಲು ವಿವಾಹ ಕಾರ್ಯಕ್ರಮದಲ್ಲಿ 50 ಜನರು ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು.

ಲಾಕ್ ಡೌನ್ ಜಾರಿಯಲ್ಲಿರುವ ಅವಧಿಯಲ್ಲಿ ಈಗಾಗಲೇ ನಿಗದಿಯಾಗಿರುವ ವಿವಾಹಗಳನ್ನು ಮನೆಯಲ್ಲಿ ನಡೆಸಬಹುದು ಮತ್ತು ಅದರಲ್ಲಿ 40 ಜನರು ಪಾಲ್ಗೊಳ್ಳಬಹುದು. ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪರಿಷ್ಕೃತ ಆದೇಶದಲ್ಲಿ ತಿಳಿಸಲಾಗಿದೆ.